AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳಚರಂಡಿ ಮಾಡಲು ರಸ್ತೆ ಅಗೆದು ಕಾಮಗಾರಿ ಬಳಿಕ ಹಾಗೇ ಬಿಟ್ಟ ಅಧಿಕಾರಿಗಳ ನಡೆಗೆ ಆಕ್ರೋಶ: ರಸ್ತೆ ತಡೆದು ಪ್ರತಿಭಟನೆ

Hubli News: ಹುಬ್ಬಳ್ಳಿಯ ಮಂಗಳ ಓಣಿಯಲ್ಲಿ ಹೊಸದಾಗಿ ನಿರ್ಮಿಸಿದ್ದ ಸಿಸಿ ರಸ್ತೆಯನ್ನು ಚರಂಡಿ ಕಾಮಗಾರಿಗಾಗಿ ಅಗೆದು ದುರಸ್ತಿ ಮಾಡದೆ ನಿರ್ಲಕ್ಷಿಸಿದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ರಸ್ತೆ ತಡೆದು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಮನವೊಲಿಸಲು ಸ್ಥಳಕ್ಕೆ ಬಂದ ಪೊಲೀಸರು, ಅಧಿಕಾರಿಗಳ ವಿರುದ್ಧವೇ ಪ್ರತಿಭಟನಾಕಾರರು ಗರಂ ಆದ ಪ್ರಸಂಗವೂ ನಡೆದಿದೆ. 2 ವರ್ಷಗಳ ಹಿಂದೆ ನಿರ್ಮಾಣ ಮಾಡಿದ್ದ ರಸ್ತೆಯನ್ನೇ ಅಗೆದು ಕಾಮಗಾರಿ ನಡೆಸಿದ್ದಾರೆ. ಕೆಲಸ ಮುಗಿದ ಮೇಲೆ ಕನಿಷ್ಠ ರಸ್ತೆ ರಿಪೇರಿಯನ್ನೂ ಮಾಡದೆ ಹಾಗೆಯೇ ಬಿಟ್ಟ ಕಾರಣ ಓಡಾಡಲೂ ಜನ ತೊಂದರೆ ಅನುಭವಿಸಬೇಕಾದ ಆರೋಪ ಕೇಳಿಬಂದಿದೆ.

ಒಳಚರಂಡಿ ಮಾಡಲು ರಸ್ತೆ ಅಗೆದು ಕಾಮಗಾರಿ ಬಳಿಕ ಹಾಗೇ ಬಿಟ್ಟ ಅಧಿಕಾರಿಗಳ ನಡೆಗೆ ಆಕ್ರೋಶ: ರಸ್ತೆ ತಡೆದು ಪ್ರತಿಭಟನೆ
ಒಳಚರಂಡಿ ಕಾಮಗಾರಿಯಿಂದಾಗಿ ಸಂಪೂರ್ಣ ಹಾಳಾಗಿರುವ ರಸ್ತೆImage Credit source: Tv9 Kannada
ಸಂಜಯ್ಯಾ ಚಿಕ್ಕಮಠ
| Edited By: |

Updated on:Jun 26, 2026 | 3:32 PM

Share

ಮುಖ್ಯಾಂಶಗಳು

  • ಚರಂಡಿ ಮಾಡಲು ರಸ್ತೆ ಅಗೆದು ಕಾಮಗಾರಿ ಬಳಿಕ ಹಾಗೇ ಬಿಟ್ಟ ಅಧಿಕಾರಿಗಳು
  • ಹುಬ್ಬಳ್ಳಿ ನಗರದ ನಗರದ ಮಂಗಳ ಓಣಿಯಲ್ಲಿ ನಡೆದಿರುವ ಘಟನೆ
  • ಸ್ಥಳೀಯ ನಿವಾಸಿಗಳಿಂದ ಕಾರವಾರ ರಸ್ತೆ ತಡೆದು ಭಾರಿ ಪ್ರತಿಭಟನೆ

ಹುಬ್ಬಳ್ಳಿ, ಜೂನ್​ 26: ಸ್ಮಾರ್ಟ್ ಸಿಟಿ ಯೋಜನೆಯಡಿ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಸಾಕಷ್ಟು ಹಣ ಹರಿದು ಬಂದಿದೆ. ಆದ್ರೆ ನಗರದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಹಣ ಪೋಲಾಗುತ್ತಿದೆ. ಇದಕ್ಕೆ ತಾಜಾ ಉದಾಹರಣೆ ಎಂಬಂತಿದೆ ನಗರದ ಮಂಗಳ ಓಣಿಯಲ್ಲಿ ನಡೆಸಿರುವ ಕಾಮಗಾರಿಗಳು. ಒಳಚರಂಡಿ ನಿರ್ಮಾಣ ಮಾಡಿದ ನಂತರ ರಸ್ತೆ ನಿರ್ಮಾಣ ಮಾಡಬೇಕು ಎಂಬುದು ಜನಸಾಮಾನ್ಯರಿಗೂ ಗೊತ್ತಿರುವ ವಿಚಾರ. ಆದರೆ ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡಿ ನಿರ್ಮಿಸಿದ್ದ ರಸ್ತೆಯನ್ನೇ ಚರಂಡಿ ಮಾಡಲೆಂದು ಇಲ್ಲಿ ಅಗೆಯಲಾಗಿದೆ. ಬಳಿಕ ರಸ್ತೆ ದುರಸ್ತಿಯನ್ನೂ ಮಾಡದೆ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯವಹಿಸಿರೋದು ಸ್ಥಳೀಯ ನಿವಾಸಿಗಳನ್ನು ಕೆರಳಿಸಿದೆ.

ಈ ಹಿಂದೆ ಮಂಗಳ ಓಣಿ ಮೂಲ ಸೌಕರ್ಯಗಳನ್ನು ಕಂಡಿರಲಿಲ್ಲ. ಚರಂಡಿ, ರಸ್ತೆ ಸೇರಿದಂತೆ ಕುಡಿಯುವ ನೀರಿಗೂ ಸಮಸ್ಯೆಯಿತ್ತು. ಕೊನೆಗೂ ಇಲ್ಲಿನ ನಿವಾಸಿಗಳ ಬೆಡಿಕೆ ಸ್ಪಂದಿಸಿದ್ದ ಆಡಳಿತ ಎರಡು ವರ್ಷದ ಹಿಂದಷ್ಟೇ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಿಸಿ ರಸ್ತೆ ನಿರ್ಮಾಣ ಮಾಡಿತ್ತು. ಆದರೆ ಚರಂಡಿ ನಿರ್ಮಿಸೋದನ್ನು ಅಧಿಕಾರಿಗಳು ಮರೆತಿದ್ದರು. ಹೀಗಾಗಿ ಮನೆಗೆ ನೀರು ನುಗ್ಗಲು ಆರಂಭವಾದ ಕಾರಣ ಸ್ಥಳೀಯರು ಆಕ್ರೋಶ ಹೊರಹಾಕಿದ್ದರು. ಹೀಗಾಗಿ ಚರಂಡಿ ಮಾಡಲು ಹೊರಟ ಅಧಿಕಾರಿಗಳು, ನಿರ್ಮಾಣ ಮಾಡಿದ್ದ ರಸ್ತೆಯನ್ನೇ ಅಗೆದು ಕೆಲ ತಿಂಗಳ ಹಿಂದೆ ಕಾಮಗಾರಿ ನಡೆಸಿದ್ದಾರೆ. ಕೆಲಸ ಮುಗಿದ ಮೇಲೆ ಕನಿಷ್ಠ ರಸ್ತೆ ರಿಪೇರಿಯನ್ನೂ ಮಾಡದೆ ಹಾಗೆಯೇ ಬಿಟ್ಟ ಕಾರಣ ಬಡಾವಣೆಯಲ್ಲಿ ಓಡಾಡಲೂ ಜನ ತೊಂದರೆ ಅನುಭವಿಸುವಂತಾಗಿದೆ.

ಇದನ್ನೂ ಓದಿ:  ದಲಿತರಿಗೆ ಜಾತಿ ಪ್ರಮಾಣ ಪತ್ರ ನೀಡಲು ಅಧಿಕಾರಿಗಳು ಹಿಂದೇಟು; ಕಾರಣವೇನು ಗೊತ್ತಾ?

ರಸ್ತೆ ತಡೆದು ಪ್ರತಿಭಟನೆ

ಅಧಿಕಾರಿಗಳ ನಡೆ ವಿರುದ್ಧ ಸಿಡಿದೆದ್ದಿರುವ ಸ್ಥಳೀಯ ನಿವಾಸಿಗಳು, ನಗರದಿಂದ ಕಾರವಾರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಸುಮಾರು ಒಂದು ಗಂಟೆಗಳ ಕಾಲ ತಡೆದು ಆಕ್ರೊಶ ವ್ಯಕ್ತಪಡಿಸಿದ್ದಾರೆ. ಮನವೊಲಿಸಲು ಸ್ಥಳಕ್ಕೆ ಬಂದ ಪೊಲೀಸರು, ಅಧಿಕಾರಿಗಳ ವಿರುದ್ಧವೇ ಪ್ರತಿಭಟನಾಕಾರರು ಗರಂ ಆದ ಪ್ರಸಂಗವೂ ನಡೆದಿದೆ. ಉಂಟಾಗಿರುವ ಸಮಸ್ಯೆಯ ಬಗ್ಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಹತ್ತಾರು ಬಾರಿ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ರಸ್ತೆ ದುರಾವಸ್ತೆ ಕಾರಣ ಅನೇಕರು ಬಿದ್ದು ಗಾಯಗೊಂಡ ಘಟನೆಗಳೂ ನಡೆದಿವೆ. ಹೀಗಾಗಿಯೇ ನಾವು ಹೋರಾಟದ ಹಾದಿ ತುಳಿದಿದ್ದೇವೆ ಎಂಬುದು ಸ್ಥಳೀಯ ನಿವಾಸಿಗಳ ಆರೋಪ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:30 pm, Fri, 26 June 26

Follow Us
ಬರದ ನಡುವೆ ಮರುಬಿತ್ತನೆ ಮಾಡಿದ ವೃದ್ಧ ದಂಪತಿ!
ಬರದ ನಡುವೆ ಮರುಬಿತ್ತನೆ ಮಾಡಿದ ವೃದ್ಧ ದಂಪತಿ!
SIR ಗೆ ಶಿಕ್ಷಕರ ನಿಯೋಜನೆ: ತರಗತಿಗಳು ಸ್ಥಗಿತ, ವಿದ್ಯಾರ್ಥಿಗಳ ಪ್ರತಿಭಟನೆ
SIR ಗೆ ಶಿಕ್ಷಕರ ನಿಯೋಜನೆ: ತರಗತಿಗಳು ಸ್ಥಗಿತ, ವಿದ್ಯಾರ್ಥಿಗಳ ಪ್ರತಿಭಟನೆ
ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?
ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ