ಜಿಎಸ್​ಟಿ ಹೆಸರಿನಲ್ಲಿ ಲಂಚ ಕೇಳಿದ ಕಮರ್ಷಿಯಲ್ ಟ್ಯಾಕ್ಸ್ ಅಡಿಟ್ ಡಿಸಿ ಭರತ್ ಹೆಗಡೆ ಲೋಕಾಯುಕ್ತ ಬಲೆಗೆ!

ಹುಬ್ಬಳ್ಳಿಯ ವಾಣಿಜ್ಯ ತೆರಿಗೆ ಇಲಾಖೆಯ ಡಿಸಿ ಭರತ್ ಹೆಗಡೆ ಜಿಎಸ್‌ಟಿ ಬಾಕಿ ಹೆಸರಿನಲ್ಲಿ ಪೆಟ್ರೋಲ್ ಬಂಕ್ ಮಾಲೀಕರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರಿಂದ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪೆಟ್ರೋಲ್ ಬಂಕ್ ಮಾಲೀಕರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಜಿಎಸ್​ಟಿ ಹೆಸರಿನಲ್ಲಿ ಲಂಚ ಕೇಳಿದ ಕಮರ್ಷಿಯಲ್ ಟ್ಯಾಕ್ಸ್ ಅಡಿಟ್ ಡಿಸಿ ಭರತ್ ಹೆಗಡೆ ಲೋಕಾಯುಕ್ತ ಬಲೆಗೆ!
ಜಿಎಸ್​ಟಿ ಹೆಸರಿನಲ್ಲಿ ಲಂಚ ಕೇಳಿದ ಕಮರ್ಷಿಯಲ್ ಟ್ಯಾಕ್ಸ್ ಅಡಿಟ್ ಡಿಸಿ ಭರತ್ ಹೆಗಡೆ ಲೋಕಾಯುಕ್ತ ಬಲೆಗೆ!
Edited By:

Updated on: Mar 30, 2026 | 1:36 PM

ಹುಬ್ಬಳ್ಳಿ, ಮಾರ್ಚ್​ 30: ಕಮರ್ಷಿಯಲ್ ಟ್ಯಾಕ್ಸ್ ಅಡಿಟ್ ವಿಭಾಗದ ಡಿಸಿ ಭರತ್ ಹೆಗಡೆ ಜಿಎಸ್‌ಟಿ ಬಾಕಿ ಹೆಸರಿನಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಹಿನ್ನೆಲೆ ಲೋಕಾ (Lokayukta) ಬಲೆಗೆ ಬಿದ್ದಿದ್ದಾರೆ. ಅವರ ಈ ಅವ್ಯವಹಾರದ ಬಗ್ಗೆ ಪೆಟ್ರೋಲ್ ಬಂಕ್ ಮಾಲೀಕರೊಬ್ಬರು ದೂರು ನೀಡಿದ ಹಿನ್ನೆಲೆ ಕಾರ್ಯಾಚರಣೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಭರತ್ ಹೆಗಡೆಯನ್ನು ಟ್ರ್ಯಾಪ್ ಮಾಡಿದ್ದಾರೆ.

60 ಲಕ್ಷ ರೂ. ಹಣಕ್ಕೆ ಬೇಡಿಕೆ

ಕಮರ್ಷಿಯಲ್ ಟ್ಯಾಕ್ಸ್ ಅಡಿಟ್ ವಿಭಾಗದ ಡೆಪ್ಯುಟಿ ಕಮಿಷನರ್ (DC) ಆಗಿರುವ ಭರತ್ ಹೆಗಡೆ, ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಪ್ರಮುಖ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿ. ತೆರಿಗೆ ಪರಿಶೀಲನೆ (ಆಡಿಟ್), ಜಿಎಸ್‌ಟಿ ಸಂಬಂಧಿತ ಪ್ರಕರಣಗಳ ಪರಿಶೀಲನೆ ಹಾಗೂ ವ್ಯಾಪಾರಿಗಳ ತೆರಿಗೆ ಬಾಕಿ ವಿಚಾರಗಳನ್ನು ನೋಡಿಕೊಳ್ಳುವುದು ಇವರ ಜವಾಬ್ದಾರಿಯಾಗಿದೆ. ಆದರೆ ಇವರು, ವಿಶ್ವನಾಥ್ ನಾಯಕ್ ಎಂಬ ಪೆಟ್ರೋಲ್ ಬಂಕ್ ಮಾಲೀಕರಿಗೆ 60 ಲಕ್ಷ ರೂ.ಜಿಎಸ್‌ಟಿ ಹಣ ಕಟ್ಟಬೇಕು ಎಂದು ನೋಟಿಸ್ ನೀಡಿದ್ದಲ್ಲದೆ ಪ್ರಕರಣವನ್ನು ಸುಗಮಗೊಳಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪಗಳು ಕೇಳಿಬಂದಿವೆ.

ಇದನ್ನೂ ಓದಿ ವಿಕ್ಟೋರಿಯಾ ಆಸ್ಪತ್ರೆ ಮೇಲೆ ಲೋಕಾ ದಿಢೀರ್ ದಾಳಿ! ಐಸಿಯು ಅವ್ಯವಸ್ಥೆ ಬಯಲು

ಬೆಂಗಳೂರಿನಿಂದ ಬಂದ ಆರು ಅಧಿಕಾರಿಗಳ ತಂಡ

ಈ ಕುರಿತು ವಿಶ್ವನಾಥ್ ನಾಯಕ್ ಹುಬ್ಬಳ್ಳಿಯಿಂದ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ತೆರಳಿ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸೂಕ್ತ ಯೋಜನೆಯೊಂದಿಗೆ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡಿದ್ದಾರೆ. ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ದೇವರಾಜು ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಬೆಂಗಳೂರಿನಿಂದ ಬಂದ ಆರು ಅಧಿಕಾರಿಗಳ ತಂಡ ಭರತ್​ರನ್ನು ಬಲೆಗೆ ಬೀಳಿಸಿದೆ. ಮುಂಜಾನೆ ಸುಮಾರು 11:30ರ ವೇಳೆಗೆ ಹುಬ್ಬಳ್ಳಿ ನವನಗರದಲ್ಲಿರುವ ಕಮರ್ಷಿಯಲ್ ಟ್ಯಾಕ್ಸ್ ಕಚೇರಿಯಲ್ಲಿ ಟ್ರ್ಯಾಪ್ ಕಾರ್ಯಾಚರಣೆ ನಡೆಸಿ ಭರತ್ ಹೆಗಡೆಯನ್ನು ಬಲೆಗೆ ಬೀಳಿಸಲಾಗಿದ್ದು, ಘಟನೆ ನಂತರ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Loading...
Unable to load recommendations.
Follow Us