AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹು-ಧಾ ಕಾಂಗ್ರೆಸ್ ಶಾಸಕ ಮತ್ತು ನಗರ ಘಟಕದ ಅಧ್ಯಕ್ಷ ಬಿಜೆಪಿ ಏಜೆಂಟ್: ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಆಡಿಯೋ ವೈರಲ್

ಹುಬ್ಬಳ್ಳಿ ಧಾರವಾಡ ಗ್ರಾಮೀಣ ಶಾಸಕ ಅಬ್ಬಯ್ಯ ಪ್ರಸಾದ್ , ಕಾಂಗ್ರೆಸ್ ನಗರದ ಘಟಕದ ಅಧ್ಯಕ್ಷರಿಗೆ ಬಿಜೆಪಿ ಏಜೆಂಟ್ ಎಂದು ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಹೇಳಿರುವ ಆಡಿಯೋ ವೈರಲ್ ಆಗುತ್ತಿದೆ.

ಹು-ಧಾ ಕಾಂಗ್ರೆಸ್ ಶಾಸಕ ಮತ್ತು ನಗರ ಘಟಕದ ಅಧ್ಯಕ್ಷ ಬಿಜೆಪಿ ಏಜೆಂಟ್: ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಆಡಿಯೋ ವೈರಲ್
ಹುಬ್ಬಳ್ಳಿ-ಧಾರವಾಡ ಶಾಸಕ ಅಬ್ಬಯ್ಯ ಪ್ರಸಾದ್ ಮತ್ತು ಧಾರವಾಡ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ
TV9 Web
| Updated By: Rakesh Nayak Manchi|

Updated on:Dec 10, 2022 | 11:45 AM

Share

ಹುಬ್ಬಳ್ಳಿ: ಕಾಂಗ್ರೆಸ್ ಶಾಸಕ ಅಬ್ಬಯ್ಯ ಪ್ರಸಾದ್ (MLA Abbayya Prasad) ಮತ್ತು ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಅಲ್ತಾಪ್ ಹಳ್ಳೂರ (Altaf Halloora) ಬಿಜೆಪಿ ಏಜೆಂಟ್ ಎಂದು ಧಾರವಾಡ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ (Ismail Tamatgar) ಹೇಳಿರುವ ಆಡಿಯೋ ವೈರಲ್ (Audio Viral) ಆಗುತ್ತಿದೆ. ಹಳೇ ಹುಬ್ಬಳ್ಳಿ ಗಲಾಟೆ ಮತ್ತು ಬಂಧನಕ್ಕೊಳಗಾದವರಿಗೆ ಜಾಮೀನು ನೀಡುವ ವಿಚಾರವಾಗಿ ಅಜರುದ್ದೀನ್ ಎಂಬುವರೊಂದಿಗೆ ಇಸ್ಮಾಯಿಲ್ ತಮಟಗಾರ ಮಾತಾನಡಿದ ಆಡಿಯೋ ವೈರಲ್ ಆಗಿದೆ. ಹಳೇ ಹುಬ್ಬಳ್ಳಿ ಗಲಾಟೆಯಲ್ಲಿ ಬಂಧಕ್ಕೊಳಗಾದವರನ್ನು ಮೂರು ತಿಂಗಳೊಳಗೆ ಹೊರಗೆ ಕರೆದುಕೊಂಡು ಬರುತ್ತೇನೆ ಎಂದು ಇಸ್ಮಾಯಿಲ್ ತಮಟಗಾರ ಹೇಳಿರುವುದು ಆಡಿಯೋದಲ್ಲಿ ಕೇಳಿಸಬಹುದು.

ಇದನ್ನೂ ಓದಿ: ಗುಜರಾತ್​ನಂತೆ ಕರ್ನಾಟಕದಲ್ಲೂ ಹಳಬರನ್ನು ಕೈಬಿಡುವ ಮಾತು ಕೇಳಿಬರುತ್ತಿದೆ ಎಂದ ಭೈರತಿ ಬಸವರಾಜ್

ಹಳೇ ಹುಬ್ಬಳ್ಳಿ ಗಲಾಟೆ ವಿಚಾರ, ಕಾನೂನು‌ ಹೋರಾಟಾದ ಜವಬ್ದಾರಿ ನನಗೆ ನೀಡುವಂತೆ ತಾಕೀತು ಮಾಡಿದ್ದಾರೆ. ಗಲಾಟೆಯಲ್ಲಿ ಅರೆಸ್ಟ್ ಆದವರನ್ನು ಮೂರು ತಿಂಗಳ ಒಳಗಾಗಿ ಬಿಡಿಸಿ ಹೊರಗೆ ತರುತ್ತೇನೆ. ಒಬ್ಬರಿಗೆ ಒಂದು ಕೋಟಿ ಖರ್ಚು ಆದರೂ ಪರವಾಗಿಲ್ಲ, ಇಡೀ‌ ಇಂಡಿಯಾದಲ್ಲಿ ಹುಡುಕಿ ಒಬ್ಬ‌ ಒಳ್ಳೆಯ ವಕೀಲರನ್ನು ಹುಡುಕಿ ಜಾಮೀನು ಕೊಡಿಸುತ್ತೇನೆ ಎಂದು ಇಸ್ಮಾಯಿಲ್ ತಮಟಗಾರ ಹೇಳಿದ್ದಾರೆ.

ಇದನ್ನೂ ಓದಿ: ಕಲಬುರ್ಗಿ: ಇಂದು ಕಾಂಗ್ರೆಸ್ ಕಲ್ಯಾಣ ಕ್ರಾಂತಿ ಸಮಾವೇಶ, ಮತದಾರರ ಸೆಳೆಯಲು ಕಾಂಗ್ರೆಸ್ ತಂತ್ರ

ಪ್ರಕರಣ ಸಂಬಂಧ ಅಂಜುಮನ್ ಕಮೀಟಿ ಮುಖಂಡರು ಈಗಾಗಲೇ ಕಾನೂನು‌ ಹೋರಾಟದ ಜವಾಬ್ದಾರಿ ತಗೆದುಕೊಂಡಿದ್ದಾರೆ. ಅದೇ ಜವಾಬ್ದಾರಿ ಕೊಟ್ಟರೆ ಮೂರು ತಿಂಗಳಲ್ಲಿ ಕೋಟಿ ಖರ್ಚು ಅದರೂ ಗಲಾಟೆಯಲ್ಲಿ ಅರೆಸ್ಟ್ ಆದವರನ್ನು ಹೊರಗೆ ತರುತ್ತೇನೆ ಎಂದು ಭರವಸೆ ನೀಡಿದ್ದಾರೆ. ಸಂಭಾಷಣೆ ಉದ್ದಕ್ಕೂ ಹುಬ್ಬಳ್ಳಿ ಕಾಂಗ್ರೆಸ್ ಮುಖಂಡರನ್ನು ಇಸ್ಮಾಯಿಲ್ ತಮಟಗಾರ ಜರಿದಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:39 am, Sat, 10 December 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?