ಸಿಲಿಂಡರ್ ಸ್ಫೋಟ ಕೇಸ್​: ಮೃತ 8 ಅಯ್ಯಪ್ಪ ಮಾಲಾಧಾರಿ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಣೆ

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟದಲ್ಲಿ ಮೃತಪಟ್ಟ 8 ಅಯ್ಯಪ್ಪ ಮಾಲಾಧಾರಿಗಳ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಡಿಸೆಂಬರ್ 22ರಂದು ಸಂಭವಿಸಿದ ಈ ದುರಂತದಲ್ಲಿ 9 ಜನ ಗಾಯಗೊಂಡಿದ್ದರು, ಅದರಲ್ಲಿ 8 ಜನ ಮೃತಪಟ್ಟಿದ್ದಾರೆ. ಸಚಿವ ಸಂತೋಷ್ ಲಾಡ್ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ.

ಸಿಲಿಂಡರ್ ಸ್ಫೋಟ ಕೇಸ್​: ಮೃತ 8 ಅಯ್ಯಪ್ಪ ಮಾಲಾಧಾರಿ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಣೆ
ಸಿಲಿಂಡರ್ ಸ್ಫೋಟ ಕೇಸ್​: ಮೃತ 8 ಅಯ್ಯಪ್ಪ ಮಾಲಾಧಾರಿ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಣೆ
Edited By:

Updated on: Jan 02, 2025 | 9:03 PM

ಹುಬ್ಬಳ್ಳಿ, ಜನವರಿ 02: ನಗರದಲ್ಲಿ ಸಿಲಿಂಡರ್​ ಸ್ಫೋಟ ದುರಂತದಲ್ಲಿ ಮೃತಪಟ್ಟ 8 ಅಯ್ಯಪ್ಪ ಮಾಲಾಧಾರಿಗಳ (Ayyappa Devotees) ಕುಟುಂಬಗಳಿಗೆ ಇದೀಗ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಆ ಮೂಲಕ ಪರಿಹಾರಕ್ಕಾಗಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್​ ಬರೆದಿದ್ದ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ.

ಹುಬ್ಬಳ್ಳಿಯ ಅಚ್ಚವ್ವ ಕಾಲೋನಿಯ ಅಯ್ಯಪ್ಪನ ಸನ್ನಿಧಿಯಲ್ಲಿ ಡಿಸೆಂಬರ್​ 22ರಂದು ಸಿಲಿಂಡರ್​ ಸ್ಫೋಟ ಸಂಭವಿಸಿತ್ತು. ಅಗ್ನಿ ದುರಂತದ 9 ಮಾಲಾಧಾರಿಗಳು ಗಾಯಗೊಂಡಿದ್ದರು. ಚಿಕಿತ್ಸೆ ಫಲಿಸದೆ ಒಬ್ಬರ ಬೆನ್ನಿಗೊಬ್ಬರಂತೆ ಮೃತಪಟ್ಟಿದ್ದಾರೆ. ಇತ್ತೀಚೆಗೆ ಉಣಕಲ್​​​​ನ ಪ್ರಕಾಶ್​ ಬಾರಕೇರ ಕೂಡ ಚಿಕಿತ್ಸೆ ಫಲಿಸದೆ ಪ್ರಾಣಬಿಟ್ಟಿದ್ದಾನೆ. ಈ ಮೂಲಕ ಸಾವಿನ ಸಂಖ್ಯೆ 8ಕ್ಕೆ ಏರಿಕೆ ಆಗಿದೆ. 9 ಜನರ ಪೈಕಿ ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ, ಮಂಜು ವಾಗ್ಮೋಡೆ, ಲಿಂಗರಾಜ ಬೀರನೂರ, ತೇಜಸ್ವರ್ ಸುತಾರೆ, ರಾಜು ಮೂಗೇರಿ, ಶಂಕರ್ ಊರ್ಬಿ, ಪ್ರಕಾಶ್ ಬಾರಕೇರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ಸಿಲಿಂಡರ್ ಸ್ಫೋಟ: ಪವಾಡ ಸದೃಶ ರೀತಿಯಲ್ಲಿ ಬದುಕುಳಿದ ವಿನಾಯಕ್ ಬಾರಕೇರ

ಮೃತ ಮಾಲಾಧಾರಿಗಳಿಗೆಲ್ಲ ಶೇ.70-80ರಷ್ಟು ಸುಟ್ಟು ಗಾಯವಾಗಿತ್ತು. ಅಂತಾರಾಷ್ಟ್ರೀಯ ತಜ್ಞ ವೈದ್ಯರೂ ಸಲಹೆ ಪಡೆದಿದ್ದೆವು ಆದ್ರೂ ಉಳಿಸಿಕೊಳ್ಳಲು ಆಗಲಿಲ್ಲ. 8 ಜನರ ಸಾವು ನಮಗೆ ನೋವು ತಂದಿದೆ ಅಂತ ಕಿಮ್ಸ್ ನಿರ್ದೇಶಕ ಡಾ. ಎಸ್​ಎಫ್ ಕಮ್ಮಾರ ಬೇಸರ ವ್ಯಕ್ತಪಡಿಸಿದ್ದರು.

ಶಾಸಕ ಮಹೇಶ್​ ಟೆಂಗಿನಕಾಯಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಸರ್ಕಾರ ಪರಿಹಾರದ ಮೊತ್ತವನ್ನ 15 ಲಕ್ಷಕ್ಕೆ ಹೆಚ್ಚಿಸಬೇಕೆಂದು ಒತ್ತಾಯಿಸಿದ್ದರು. ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಜತೆಗೂ ಪರಿಹಾರದ ಬಗ್ಗೆ ಮಾತನಾಡುವುದಾಗಿ ತಿಳಿಸಿದ್ದರು.

ಇದನ್ನೂ ಓದಿ: ಹುಬ್ಬಳ್ಳಿ ಸಿಲಿಂಡರ್​ ಸ್ಫೋಟ: ಘಟನೆಯಿಂದ ಮನನೊಂದು ದೇಗುಲ ನೆಲಸಮಕ್ಕೆ ನಿರ್ಧಾರ

ಅಂದಹಾಗೇ, ಡಿಸೆಂಬರ್​​​ 22ರ ರಾತ್ರಿ ಅವಘಡ ಸಂಭವಿಸಿದ್ದು, ಘಟನೆಗೂ ಮುನ್ನ ಎಲ್ಲರು ಭಕ್ತಿಯಿಂದ ಪೂಜೆ ಮಾಡಿದ್ದರು. ಇನ್ನು 9 ಮಂದಿ ಪೈಕಿ 12 ವರ್ಷದ ಬಾಲಕ ವಿನಾಯಕ ಬದುಕುಳಿಸಿದ್ದಾನೆ. ಇನ್ನೆರಡು ದಿನದಲ್ಲಿ ಬಾಲಕ ಡಿಸ್ಚಾರ್ಜ್​ ಆಗುವ ಸಾಧ್ಯತೆ ಇದೆ. 8 ಮಂದಿ ಬಲಿ ಪಡೆದ ಅಗ್ನಿ ಅವಘಡಕ್ಕೆ ಹುಬ್ಬಳ್ಳಿ ಜನ ನಿಜಕ್ಕೂ ಬೆಚ್ಚಿಬಿದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us