Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubballi-Dharwad: ಹುಬ್ಬಳ್ಳಿ-ಧಾರವಾಡದಲ್ಲಿ ಕುಡಿಯುವ ನೀರಿಗೆ ತತ್ವಾರ, ಶಾಶ್ವತ ಪರಿಹಾರಕ್ಕೆ ನಿವಾಸಿಗಳ ಆಗ್ರಹ

ವಿಧಾನಸಭಾ ಚುನಾವಣೆ ಮುಗಿದಿದ್ದು, ಹುಬ್ಬಳ್ಳಿ-ಧಾರವಾಡ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಜನರು ಆಗ್ರಹಿಸಿದ್ದಾರೆ.

Hubballi-Dharwad: ಹುಬ್ಬಳ್ಳಿ-ಧಾರವಾಡದಲ್ಲಿ ಕುಡಿಯುವ ನೀರಿಗೆ ತತ್ವಾರ, ಶಾಶ್ವತ ಪರಿಹಾರಕ್ಕೆ ನಿವಾಸಿಗಳ ಆಗ್ರಹ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: May 17, 2023 | 4:35 PM

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಮುಗಿದಿದ್ದು, ಹುಬ್ಬಳ್ಳಿ-ಧಾರವಾಡ ಕುಡಿಯುವ ನೀರಿನ (Drinking Water) ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಜನರು ಆಗ್ರಹಿಸಿದ್ದಾರೆ. ಬಿಸಿಲಿನ ಝಳದ ನಡುವೆ ಇಲ್ಲಿನ ನಿವಾಸಿಗಳು ಕುಡಿಯುವ ನೀರಿಗೆ ಪರದಾಡುವಂತಾಗಿದೆ. ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಗೂ ಮುನ್ನ ಐದು ದಿನಗಳೊಳಗೆ ಕುಡಿಯುವ ನೀರು ಪೂರೈಕೆಗೆ ಕ್ರಮಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರೂ ನಿಗದಿತ ಅವಧಿಯೊಳಗೆ ಯಾವುದೇ ಪ್ರಯತ್ನ ಮಾಡಿಲ್ಲ ಎಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ.

ಈಗ 5 ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಆದರೆ ಹಳೆ ಹುಬ್ಬಳ್ಳಿ ಮತ್ತು ಇತರ ಜನನಿಬಿಡ ಪ್ರದೇಶಗಳಲ್ಲಿ ಎಂಟು, ಹತ್ತು, ಕೆಲವೊಮ್ಮೆ ಹನ್ನೆರಡು ದಿನಗಳಿಗೊಮ್ಮೆ ಮಾತ್ರ ನೀರು ಪೂರೈಕೆಯಾಗುತ್ತಿದೆ. ನಿರಂತರ ನೀರು ಸರಬರಾಜು ಪ್ರದೇಶಗಳಲ್ಲಿಯೂ ಕುಡಿಯುವ ನೀರಿನ ಪೂರೈಕೆ ವ್ಯತ್ಯಯವಾಗಿದೆ. ಕೆಲವು ಪ್ರದೇಶಗಳಲ್ಲಿ ಎರಡು ಅಥವಾ ಮೂರು ದಿನಕ್ಕೆ ಒಮ್ಮೆ ಕುಡಿಯುವ ನೀರು ಪೂರೈಸಲಾಗುತ್ತದೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ನಗರ ಪಾಲಿಕೆಯ ಹಲವು ಕಾರ್ಪೊರೇಟರ್‌ಗಳ ಬಳಿ ಜನರು ಕುಡಿಯುವ ನೀರು ಸರಬರಾಜಿಗೆ ಆಗ್ರಹಿಸಿದ್ದರು.

ಇದನ್ನೂ ಓದಿ: Belagavi News: ದೇಶದ ಅತಿ ಎತ್ತರದ ಧ್ವಜಸ್ತಂಭದಲ್ಲಿ ನಿರಂತರ ಹಾರಾಡಲಿದೆ ರಾಷ್ಟ್ರಧ್ವಜ; ಏನಿದರ ವಿಶೇಷ?

‘ಅವಳಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಭರವಸೆ ನೀಡಿದ್ದೇವೆ. ಈ ಕುರಿತು ಚುನಾವಣಾ ಪ್ರಚಾರದ ವೇಳೆ ಮತದಾರರಿಗೆ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದೇವೆ’ ಎಂದು ಕಾರ್ಪೊರೇಟರ್ ಒಬ್ಬರು ತಿಳಿಸಿದ್ದಾರೆ.

ಆದರೆ, ಇದೀಗ ಚುನಾವಣೆ ಮುಗಿದಿದ್ದು, ಫಲಿತಾಂಶವೂ ಪ್ರಕಟಗೊಂಡಿದೆ. ನೀರಿನ ಸಮಸ್ಯೆ ಮತ್ತೆ ಮುಂದುವರಿದಿದ್ದು, ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ