ಮಗಳ ಮದುವೆಯ ಮರುದಿನವೇ ಪಾಲಿಕೆ ಚುನಾವಣೆ; ಕುಟುಂಬ ಸಮೇತ ಮತ ಚಲಾಯಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ವಿಧಾನಸಭೆ ಚುನಾವಣೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪಕ್ಷದ ಆದೇಶ ಪಾಲಿಸುತ್ತೇವೆ. ಆದರೆ 2023ಕ್ಕೆ ಇನ್ನೂ ಕಾಲಾವಕಾಶವಿದೆ. ಅಲ್ಲಿವರೆಗೆ ಏನಾಗುತ್ತೋ ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ಹುಬ್ಬಳ್ಳಿ: ನಿನ್ನೆಯಷ್ಟೇ (ಸೆಪ್ಟೆಂಬರ್ 2) ಮಗಳ ಮದುವೆ ಮಾಡಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹುಬ್ಬಳ್ಳಿ ಮಹಾನಗರ ಪಾಲಿಕೆ ಚುನಾವಣೆಗೆ ಕುಟುಂಬ ಸಮೇತವಾಗಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು. ಹುಬ್ಬಳ್ಳಿ ದತ್ತಿ ರೋಟರಿ ಶಾಲೆಗೆ ಪತ್ನಿ ಹಾಗೂ ಮಕ್ಕಳೊಂದಿಗೆ ಆಗಮಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಇಂದು (ಸೆಪ್ಟೆಂಬರ್ 3) ತಮ್ಮ ಮತದಾನದ ಹಕ್ಕನ್ನು ಚಲಾವಣೆ ಮಾಡಿದರು. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸವನ್ನು ಅವರು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು.
2023ರವರೆಗೆ ಕಾಲಾವಕಾಶವಿದೆ, ನೋಡೋಣ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ವಿಧಾನಸಭೆ ಚುನಾವಣೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪಕ್ಷದ ಆದೇಶ ಪಾಲಿಸುತ್ತೇವೆ. ಆದರೆ 2023ಕ್ಕೆ ಇನ್ನೂ ಕಾಲಾವಕಾಶವಿದೆ. ಅಲ್ಲಿವರೆಗೆ ಏನಾಗುತ್ತೋ ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತದಾನದ ನಂತರ ಸುದ್ದಿಗಾರರೊಂದಿಗೆ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ನಿರ್ಧಾರಕ್ಕೆ ನಾವೆಲ್ಲ ಬದ್ದರಾಗಿರುತ್ತೇವೆ ಎಂದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ವಯಂ ಪ್ರೇರಣೆಯಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಪಕ್ಷದಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ನಮ್ಮ ಅಭಿಪ್ರಾಯಗಳನ್ನು ಪಕ್ಷದ ವೇದಿಕೆಯಲ್ಲಿ ಯಾರಿಗೆ ಹೇಳಬೇಕೋ ಅವರಿಗೆ ಹೇಳಿದ್ದೇವೆ ಎಂದರು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 60 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದ ಅವರು ಪತ್ನಿ ಹಾಗೂ ಪುತ್ರನೊಂದಿಗೆ ಆಗಮಿಸಿ ಮತದಾನ ಮಾಡಿದರು.
ಇದನ್ನೂ ಓದಿ:
ಪಾಲಿಕೆ ಚುನಾವಣೆ: ಮತದಾರರಿಗೆ ಪ್ರಧಾನಿ ಮೋದಿ ಭಾವಚಿತ್ರದ ಚೀಟಿ; ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪ, ಕಿಡಿಕಿಡಿ
ಬಿಜೆಪಿ ನಾಯಕರಿಗೆ ಅಧಿಕಾರದ ಮದ ಹೆಚ್ಚಾಗಿದೆ, ವೋಟ್ ಹಾಕ್ಬೇಡಿ; ವೈರಲ್ ಆಯ್ತು ಕಲಬುರಗಿಯ ಬಿಜೆಪಿ ಕಾರ್ಯಕರ್ತನ ಹೇಳಿಕೆ
(Hubballi Dharwad Local Body Election 2021 Union Minister Pralhad Joshi family votes next day after his daughters marriage)
Published On - 3:58 pm, Fri, 3 September 21