AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೊಟ್ಟಿ ಅಂಗಡಿ ಲೈಸೆನ್ಸ್‌ಗೆ ಲಂಚ: ಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧಿಕಾರಿ ಲೋಕಾಯುಕ್ತ ಬಲೆಗೆ!

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಲಯ-1 ಅಧಿಕಾರಿ ಹೀನಾ ಕೌಸರ್, ರೊಟ್ಟಿ ಅಂಗಡಿ ಲೈಸೆನ್ಸ್ ನೀಡಲು ₹4,500 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 1,000 ರೂ. ಪಡೆದು, ಉಳಿದ 3,500 ರೂ. ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅವರನ್ನು ಬಲೆಗೆ ಕೆಡವಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ಧಲಿಂಗಪ್ಪ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆಯು ನಡೆದಿದೆ.

ರೊಟ್ಟಿ ಅಂಗಡಿ ಲೈಸೆನ್ಸ್‌ಗೆ ಲಂಚ: ಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧಿಕಾರಿ ಲೋಕಾಯುಕ್ತ ಬಲೆಗೆ!
ರೊಟ್ಟಿ ಅಂಗಡಿ ಲೈಸೆನ್ಸ್‌ಗೆ ಲಂಚ: ಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧಿಕಾರಿ ಲೋಕಾಯುಕ್ತ ಬಲೆಗೆ!
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Mar 07, 2026 | 1:35 PM

Share

ಧಾರವಾಡ, ಮಾರ್ಚ್​ 07: ರೊಟ್ಟಿ ಅಂಗಡಿಗೆ ಲೈಸೆನ್ಸ್ ನೀಡಲು ಲಂಚ ಪಡೆಯುತ್ತಿದ್ದ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಮಹಿಳಾ ಅಧಿಕಾರಿಯನ್ನು ಲೋಕಾಯುಕ್ತ (Lokayukta raid) ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಹಾನಗರ ಪಾಲಿಕೆಯ ವಲಯ–1 ಕಚೇರಿಯ ಅಧಿಕಾರಿ ಹೀನಾ ಕೌಸರ್ ಎಂಬವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ.

ಮುಂಗಡವಾಗಿ 1,000 ರೂ. ಸ್ವೀಕರಿಸಿದ್ದ ಅಧಿಕಾರಿ

ಮಾಳೆಪ್ಪ ತಳವಾರ ಎಂಬುವರು ರೊಟ್ಟಿ ಅಂಗಡಿ ಆರಂಭಿಸಲು ಲೈಸೆನ್ಸ್ ಪಡೆಯಲು ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಲೈಸೆನ್ಸ್ ನೀಡಲು ಹೀನಾ ಕೌಸರ್ 4,500 ರೂ. ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಮೊದಲು ಅವರು ಮಾಳೆಪ್ಪರಿಂದ ಮುಂಗಡವಾಗಿ 1,000 ರೂ. ಸ್ವೀಕರಿಸಿದ್ದಾಗಿ ತಿಳಿದುಬಂದಿದೆ. ಇಂದು (ಮಾರ್ಚ್​ 7) ಉಳಿದ 3,500 ರೂ. ಹಣವನ್ನು ಮಾಳೆಪ್ಪ ತಳವಾರರಿಂದ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹೀನಾ ಕೌಸರ್ ಅವರನ್ನು ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ ಬೆಂಗಳೂರು, ಬಾಗಲಕೋಟೆ ಸೇರಿದಂತೆ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ!

ಲೋಕಾಯುಕ್ತ ಎಸ್ಪಿ ಸಿದ್ಧಲಿಂಗಪ್ಪ ಅವರ ನೇತೃತ್ವದಲ್ಲಿ ಈ ಟ್ರ್ಯಾಪ್ ಕಾರ್ಯಾಚರಣೆ ನಡೆಸಲಾಗಿದ್ದು, ಅಧಿಕಾರಿಯ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More