24 ಗಂಟೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಬದಲಾವಣೆ: ರಾಜ್ಯ ಸರ್ಕಾರ ಆದೇಶ

ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಯುಕ್ತರಾಗಿ ನಿನ್ನೆ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಎಂಡಿ ಎಸ್.ಭರತ್​ ಅವರು ಅಧಿಕಾರ ಸ್ವೀಕರಿಸಿದ್ದರು. ಆದರೆ ಇಂದು ಈಶ್ವರ ಉಳ್ಳಾಗಡ್ಡಿ ಅವರನ್ನು ಪಾಲಿಕೆ ಆಯುಕ್ತರಾಗಿ ಆದೇಶಿಸಿ ರಾಜ್ಯ ಸರ್ಕಾರ 24 ಗಂಟೆಯಲ್ಲಿ ಪಾಲಿಕೆ ಆಯುಕ್ತರನ್ನು ಬದಲಾವಣೆ ಮಾಡಿದೆ.

24 ಗಂಟೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಬದಲಾವಣೆ: ರಾಜ್ಯ ಸರ್ಕಾರ ಆದೇಶ
ಎಸ್.ಭರತ್, ಈಶ್ವರ ಉಳ್ಳಾಗಡ್ಡಿ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on: Jul 06, 2023 | 4:26 PM

ಹುಬ್ಬಳ್ಳಿ: ಆದೇಶ ಹೊರಡಿಸಿದ 24 ಗಂಟೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (Hubballi-Dharwad Municipal Corporation) ಆಯುಕ್ತರನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಮತ್ತೊಂದು ಆದೇಶವನ್ನು ಹೊರಡಿಸಿದೆ. ನಿನ್ನೆ ಒಂದು ಆದೇಶ, ಇವತ್ತು ಒಂದು ಆದೇಶ ಹೊರಡಿಸುವ ಮೂಲಕ ಸರ್ಕಾರ ಗೊಂದಲಕ್ಕೀಡು ಮಾಡಿದೆ. ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಯುಕ್ತರಾಗಿ ನಿನ್ನೆ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಎಂಡಿ ಎಸ್.ಭರತ್​ ಅವರು ಅಧಿಕಾರ ಸ್ವೀಕರಿಸಿದ್ದರು. ಆದರೆ ಇಂದು ಈಶ್ವರ ಉಳ್ಳಾಗಡ್ಡಿ ಅವರನ್ನು ಪಾಲಿಕೆ ಆಯುಕ್ತರಾಗಿ ಆದೇಶಿಸಿದೆ.

ಆ ಮೂಲಕ 24 ಗಂಟೆಯಲ್ಲಿ ಹು-ಧಾ ಪಾಲಿಕೆ ಆಯುಕ್ತರನ್ನು ಸರ್ಕಾರ ಬದಲಿಸಿದೆ. ಈಶ್ವರ ಉಳ್ಳಾಗಡ್ಡಿ ಬೆಳಗಾವಿ ಜಿಲ್ಲಾ ಯೋಜನಾ ಅಧಿಕಾರಿಯಾಗಿದ್ದರು. ಕೆಲ‌ವು ದಿನಗಳ ಹಿಂದೆ ಪಾಲಿಕೆ ಆಯುಕ್ತ ಗೋಪಾಲಕೃಷ್ಣ ಅವರನ್ನು ವರ್ಗಾವಣೆ ಮಾಡಿದ ನಂತರ ಕೆಲ ದಿನ ಸರ್ಕಾರ ಯಾರನ್ನೂ ನೇಮಿಸಿರಲಿಲ್ಲ.

ಇದನ್ನೂ ಓದಿ: ರಾಜ್ಯ ರಾಜಕಾರಣದಲ್ಲಿ ಸಂಚಲನ: ಕಾಂಗ್ರೆಸ್​ನತ್ತ ಮುಖ ಮಾಡಿದ ಬಿಎಸ್​ ಯಡಿಯೂರಪ್ಪ ಸಂಬಂಧಿ

ನಿನ್ನೆ ಆಯುಕ್ತರಾಗಿ ಭರತ್ ಅವರನ್ನು​ ನೇಮಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶದಂತೆ ನಿನ್ನೆ ಅಧಿಕಾರ ವಹಿಸಿಕೊಂಡಿದ್ದರು. ಆದರೆ ಇಂದು ಈಶ್ವರ ಉಳ್ಳಾಗಡ್ಡಿ ಹು-ಧಾ ಪಾಲಿಕೆ ಆಯುಕ್ತರಾಗಿ ಆದೇಶ ಹೊರಡಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ