AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ- ಧಾರವಾಡ ಪಾಲಿಕೆ ಚುನಾವಣೆ: ನಾಮಪತ್ರ ಸಲ್ಲಿಸಬೇಕಿದ್ದ ಕಾಂಗ್ರೆಸ್ ಅಭ್ಯರ್ಥಿಗೆ ಹೃದಯಾಘಾತ

ಸಪ್ಟೆಂಬರ್ 3ರಂದು ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆ ನಡೆಯಲಿದೆ. ಆಗಸ್ಟ್ 16 ರಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿದೆ. ನಾಮಪತ್ರ ಸಲ್ಲಿಕೆಗೆ ಅಗಸ್ಟ್ 23 ಕೊನೆ ದಿನ ಎಂದು ಸೂಚನೆ ನೀಡಲಾಗಿದೆ.

ಹುಬ್ಬಳ್ಳಿ- ಧಾರವಾಡ ಪಾಲಿಕೆ ಚುನಾವಣೆ: ನಾಮಪತ್ರ ಸಲ್ಲಿಸಬೇಕಿದ್ದ ಕಾಂಗ್ರೆಸ್ ಅಭ್ಯರ್ಥಿಗೆ ಹೃದಯಾಘಾತ
ಆನಂದ್ ಜಾಧವ್
TV9 Web
| Updated By: ganapathi bhat|

Updated on:Aug 23, 2021 | 3:43 PM

Share

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ನಾಮಪತ್ರ ಸಲ್ಲಿಸಬೇಕಿದ್ದ ಅಭ್ಯರ್ಥಿಗೆ ಲಘು ಹೃದಯಾಘಾತ ಆದ ಘಟನೆ ಧಾರವಾಡದಲ್ಲಿ ನಡೆದಿದೆ. ನಾಮಪತ್ರ ಸಲ್ಲಿಸುವುದಕ್ಕೆ ಬಿ ಫಾರಂ ಪಡೆದಿದ್ದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆನಂದ್ ಜಾಧವ್ ನಿನ್ನೆ (ಆಗಸ್ಟ್ 22) ರಾತ್ರಿ ಲಘು ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆನಂದ್ ಅವರಿಂದ ಬಿ ಫಾರಂ ವಾಪಸ್ ಪಡೆಯಲಾಗಿದೆ. ಹೀಗಾಗಿ ಹೇಮಂತ್ ಗುರ್ಲಹೊಸೂರ ಎಂಬವರು ನಾಮಪತ್ರ ಸಲ್ಲಿಸಿದ್ದಾರೆ.

ಆನಂದ್ ಜಾಧವ್ ​ವಾರ್ಡ್ ಸಂಖ್ಯೆ 13ಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಬೇಕಿತ್ತು. ಆದರೆ, ಕೊನೆಯ ವೇಳೆಯಲ್ಲಿ ಆರೋಗ್ಯ ಸಮಸ್ಯೆಯಿಂದ ಅವರು ಚುನಾವಣೆಯಿಂದ ಹೊರಗೆ ಉಳಿಯುವಂತಾಗಿದೆ. ​ವಾರ್ಡ್ ಸಂಖ್ಯೆ 13ಕ್ಕೆ ಈಗ ಹೇಮಂತ್ ಗುರ್ಲಹೊಸೂರ ಎಂಬವರು ನಾಮಪತ್ರ ಸಲ್ಲಿಸಿದ್ದಾರೆ. ಆನಂದ್ ಜಾಧವ್ ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಪ್ಟೆಂಬರ್ 3ರಂದು ಚುನಾವಣೆ ಸಪ್ಟೆಂಬರ್ 3ರಂದು ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆ ನಡೆಯಲಿದೆ. ಆಗಸ್ಟ್ 16 ರಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿದೆ. ಹುಬ್ಬಳ್ಳಿ- ಧಾರವಾಡದ 82 ವಾರ್ಡ್​ಗಳಲ್ಲಿ ಪಾಲಿಕೆ ಚುನಾವಣೆ ನಡೆಯುತ್ತಿದ್ದು, ನಾಮಪತ್ರ ಸಲ್ಲಿಕೆಗೆ ಅಗಸ್ಟ್ 23 ಕೊನೆ ದಿನ ಎಂದು ಸೂಚನೆ ನೀಡಲಾಗಿದೆ. ಅಗಸ್ಟ್ 24 ರಂದು ನಾಮಪತ್ರ ಪರಿಶೀಲನೆ ಮಾಡಲಾಗುತ್ತದೆ. ನಾಮಪತ್ರ ಹಿಂತೆಗೆದುಕೊಳ್ಳಲು ಅಗಸ್ಟ್ 26 ಕೊನೆ ದಿನ ಎಂದು ತಿಳಿದುಬಂದಿದೆ.

ಆಗಸ್ಟ್ 16 ರಿಂದ ಸೆಪ್ಟೆಂಬರ್ 6 ರ ವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀತಿ ಸಹಿತೆ ಜಾರಿಯಲ್ಲಿರುತ್ತದೆ. ಪಾಲಿಕೆ ಚುನಾವಣೆಗೆ ಸುಮಾರು 837 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. 4,07,954 ಗಂಡು, 4,07,954 ಹೆಣ್ಣು, 86 ಇತರೆ ಸೇರಿದಂತೆ ಒಟ್ಟು 8,11,537 ಜನರು ಪಾಲಿಕೆ ಮತದಾನ ಮಾಡಲಿದ್ದಾರೆ. 16 ಚುನಾವಣಾ ಅಧಿಕಾರಿ, 16 ಸಹಾಯಕ ಚುನಾವಣೆ ಅಧಿಕಾರಿಗಳನ್ನು ನೇಮಕ ಮಾಡಲಾಗುತ್ತದೆ.

ರಾಜಕೀಯ ಚಟುವಟಿಕೆಗೆ ಅನುಮತಿ ಪಡೆಯಲು ಎರಡು ಕಚೇರಿಗಳನ್ನು ಸ್ಥಾಪಿಸಲಾಗುತ್ತದೆ. ಇವಿಎಂ ಮತ ಯಂತ್ರದ ಮೂಲಕ ಮತದಾನ ಪ್ರಕ್ರಿಯೆ ನಡೆಯುತ್ತದೆ. 100 ಜನರಿಗೆ ಮಾತ್ರ ಬಹಿರಂಗ ಪ್ರಚಾರ ಮಾಡಲು ಅವಕಾಶವಿರುತ್ತದೆ. ನಾಮಪತ್ರ ಸಲ್ಲಿಸುವ ದಿನದಂದು ಬಹಿರಂಗ ಮೆರವಣಿಗೆಗೆ ಅವಕಾಶವಿರಲ್ಲ ಎಂದು ಹೇಳಲಾಗಿದೆ.

ಇದನ್ನೂ ಓದಿ: ಉತ್ತಮ ದರ್ಜೆ ಶಾಲೆ, ಉಚಿತ ಲ್ಯಾಪ್​ಟಾಪ್; ಹುಬ್ಬಳ್ಳಿ ಧಾರವಾಡ ನಗರ ಪಾಲಿಕೆ ಚುನಾವಣೆಗೆ ಆಮ್ ಆದ್ಮಿ ಪ್ರಣಾಳಿಕೆ

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ; ಎಲ್ಲಾ ವಾರ್ಡ್​ಗಳಲ್ಲೂ ಕಾಂಗ್ರೆಸ್ ಪಕ್ಷದ ಚಿಹ್ನೆಯಡಿ ಸ್ಪರ್ಧೆ: ಸತೀಶ್ ಜಾರಕಿಹೊಳಿ

Published On - 3:42 pm, Mon, 23 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ