AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಪರ ಸಂಘಟನೆ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ: ವಿದ್ಯಾನಗರ ಇನ್ಸ್‌ಪೆಕ್ಟರ್ ವರ್ಗಾವಣೆ

ಮಲ್ಲಿಕಾರ್ಜುನ ಸತ್ತಿಗೇರಿ ಮೇಲೆ ಇನ್ಸ್ ಪೆಕ್ಟರ್ ಹಲ್ಲೆ ಮಾಡಿದ್ದ ಆರೋಪ ಕೇಳಿ ಬಂದ ಹಿನ್ನೆಲೆ ಮಹಾಂತೇಶ ಹೋಳಿ ಅವರನ್ನ ಇದೀಗ ವರ್ಗಾವಣೆ ಮಾಡಲಾಗಿದೆ. ನಿನ್ನೆ ಇನ್ಸ್‌ಪೆಕ್ಟರ್ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟಿಸಿದ್ದರು.

ಹಿಂದೂ ಪರ ಸಂಘಟನೆ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ: ವಿದ್ಯಾನಗರ ಇನ್ಸ್‌ಪೆಕ್ಟರ್ ವರ್ಗಾವಣೆ
ಹಿಂದೂ ಪರ ಸಂಘಟನೆ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ: ವಿದ್ಯಾನಗರ ಇನ್ಸ್‌ಪೆಕ್ಟರ್ ವರ್ಗಾವಣೆ
TV9 Web
| Updated By: ಸಾಧು ಶ್ರೀನಾಥ್​|

Updated on: Jun 15, 2022 | 4:31 PM

Share

ಹುಬ್ಬಳ್ಳಿ: ಹಿಂದೂ ಪರ ಸಂಘಟನೆಯ ಕಾರ್ಯಕರ್ತನ ಮೇಲೆ ಪೊಲೀಸ್ ಇನ್ಸ್‌ಪೆಕ್ಟರ್ ಹಲ್ಲೆ ನಡೆಸಿರುವ ಆರೋಪದ ಪ್ರಕರಣದಲ್ಲಿ ವಿದ್ಯಾನಗರ ಇನ್ಸ್ ಪೆಕ್ಟರ್ ಮಹಾಂತೇಶ ಹೋಳಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಕಿಮ್ಸ್ ಆವರಣದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣದ ವಿಚಾರವಾಗಿ ಈ ಗಲಾಟೆ ನಡೆದಿತ್ತು.

ಪೊಲೀಸ್ ಇನ್ಸ್‌ಪೆಕ್ಟರ್ ಮಹಾಂತೇಶ ಹೋಳಿ ಹಾಗೂ ಹಿಂದೂ ಕಾರ್ಯಕರ್ತ ಮಲ್ಲಿಕಾರ್ಜುನ ಸತ್ತಿಗೇರೆ ನಡುವೆ ಗಲಾಟೆ ನಡೆದಿತ್ತು. ಗಲಾಟೆ ವೇಳೆ ಮಲ್ಲಿಕಾರ್ಜುನ ಸತ್ತಿಗೇರೆ ಇನ್ಸೆಪೆಕ್ಟರ್ ಗೆ ಏಕವಚನದಲ್ಲಿ ಅವಾಜ್ ಹಾಕಿದ್ದ. ಆದ್ರೂ ತನ್ನನ್ನ ಠಾಣೆಗೆ ಕರೆಯಿಸಿ ಇನ್ಸೆಪೆಕ್ಟರ್ ಹಲ್ಲೆ ಮಾಡಿದ್ದಾರೆಂದು ಆರೋಪಿಸಿದ್ದ.

ಇದನ್ನೂ ಓದಿ: Murder: ನಿಮ್ಮ ಗಂಡನನ್ನು ಕೊಲ್ಲುವುದು ಹೇಗೆ? ಕಾದಂಬರಿ ಬರೆದು ತನ್ನ ಪತಿಯನ್ನೇ ಕೊಂದ ಲೇಖಕಿಗೆ ಜೀವಾವಧಿ ಶಿಕ್ಷೆ

ಮಲ್ಲಿಕಾರ್ಜುನ ಸತ್ತಿಗೇರಿ ಮೇಲೆ ಇನ್ಸ್ ಪೆಕ್ಟರ್ ಹಲ್ಲೆ ಮಾಡಿದ್ದ ಆರೋಪ ಕೇಳಿ ಬಂದ ಹಿನ್ನೆಲೆ ಮಹಾಂತೇಶ ಹೋಳಿ ಅವರನ್ನ ಇದೀಗ ವರ್ಗಾವಣೆ ಮಾಡಲಾಗಿದೆ. ನಿನ್ನೆ ಇನ್ಸ್‌ಪೆಕ್ಟರ್ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟಿಸಿದ್ದರು. ಹಿಂದೂ ಕಾರ್ಯಕರ್ತರ ಹೋರಾಟಕ್ಕೆ ಮಣಿದು ಪೊಲೀಸ್ ಆಯುಕ್ತ ಲಾಬೂರಾಮ್ (Hubballi-Dharwad police commissioner Labhu Ram) ಅವರು ಇನ್ಸ್‌ಪೆಕ್ಟರ್ ಮಹಾಂತೇಶ ಅವರನ್ನು ಹುಬ್ಬಳ್ಳಿಯ ಸಿಸಿಬಿಗೆ ವರ್ಗಾವಣೆ ಮಾಡಿ ಇಂದು ಆದೇಶ ಹೊರಡಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ