ಗಾಂಜಾ ಗುಂಗಲ್ಲಿದ್ದವರ ನಶೆ ಇಳಿಸಿದ ಹುಬ್ಬಳ್ಳಿ ಪೊಲೀಸರು ​

ಹುಬ್ಬಳ್ಳಿ-ಧಾರವಾಡ ಪೊಲೀಸರು ಗಾಂಜಾ ಮಾರಾಟ ಮತ್ತು ವ್ಯಸನಿಗಳ ವಿರುದ್ಧ ಸಮರ ಸಾರಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸರು 518 ಗಾಂಜಾ ವ್ಯಸನಿಗಳನ್ನು ವಶಕ್ಕೆ ಪಡೆದು, ವೈದ್ಯಕೀಯ ಪರೀಕ್ಷೆ ನಡೆಸಿದರು. 34 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಗಾಂಜಾ ಗುಂಗಲ್ಲಿದ್ದವರ ನಶೆ ಇಳಿಸಿದ ಹುಬ್ಬಳ್ಳಿ ಪೊಲೀಸರು ​
ಗಾಂಜಾ ವ್ಯಸನಿಗಳು ವಶ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ವಿವೇಕ ಬಿರಾದಾರ

Updated on:Sep 29, 2024 | 12:40 PM

ಹುಬ್ಬಳ್ಳಿ, ಸೆಪ್ಟೆಂಬರ್​ 29: ಹುಬ್ಬಳ್ಳಿ-ಧಾರವಾಡ ಪೊಲೀಸರು (Hubballi-Dharwad Police) ಗಾಂಜಾ (Ganja) ಮಾರಾಟ ಮತ್ತು ವ್ಯಸನಿಗಳ ವಿರುದ್ಧ ಸಮರ ಸಾರಿದ್ದಾರೆ. ಇತ್ತೀಚಿಗೆ ಅವಳಿನಗರದಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಟೊಂಕ ಕಟ್ಟಿ ನಿಂತ ಪೊಲೀಸರು ಮೇಲಿಂದ ಮೇಲೆ ಕಾರ್ಯಾಚರಣೆ ನಡೆಸಿ, ಪೆಡ್ಲರ್​ಗಳು​ ಮತ್ತು ವ್ಯಸನಿಗಳನ್ನು ವಶಕ್ಕೆ ಪಡೆದಿದ್ದಾರೆ.

ಇಂದು (ಸೆ.29) ಬೆಳಗ್ಗೆ ಪೊಲೀಸರು ವಶಕ್ಕೆ ಪಡೆದವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ಪೊಲೀಸರು ಒಟ್ಟು 518 ಜನರ ತಪಾಸಣೆಗೆ ಒಳಪಡಿಸಿದರು. ಅದರಲ್ಲಿ 147 ಜನ ಗಾಂಜಾ ಸೇವಿಸಿರುವುದು ದೃಢವಾಗಿದೆ. 34 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್​​ ಎನ್​ ಶಶಿಕುಮಾರ್​ ಮಾತನಾಡಿ, ಅವಳಿನಗರದಲ್ಲಿ ಡ್ರಗ್ ಅಭಿಯಾನ ನಿರಂತರವಾಗಿ ಮಾಡುತ್ತಿದ್ದೇವೆ. ಡ್ರಗ್ ಪೆಡ್ಲರ್, ವ್ಯಸನಿಗಳ ಮೇಲೆ ಮೂರು ಹಂತದಲ್ಲಿ ಕ್ರಮ ಕೈಗೊಂಡಿದ್ದೇವೆ. ಮೊದಲು ಶೇ 63.67ರಷ್ಟು ಪಾಸಿಟಿವ್ ಬಂದಿತ್ತು. ಎರಡನೇ ಹಂತದಲ್ಲಿ ಶೇ 53 ರಷ್ಟು ಹಾಗೂ ಮೂರನೇ ಹಂತದಲ್ಲಿ ಶೇ 43 ರಷ್ಟು ಮತ್ತು ಇಂದು ಶೇ 29 ರಷ್ಟು ಪಾಸಿಟಿವ್ ಇದೆ ಎಂದು ಹೇಳಿದರು.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಗಾಂಜಾ ಪೂರೈಸುತ್ತಿದ್ದ 12 ಆರೋಪಿಗಳ ಬಂಧನ

ಗಾಂಜಾ ವ್ಯಸನಿಗಳನ್ನು ಪೊಲೀಸರು ಹುಬ್ಬಳ್ಳಿಯ ರಂಭಾಪುರಿ ಸಭಾಂಗಣಕ್ಕೆ ಕರೆತಂದರು. ಈ ಅವರ ಪೋಷಕರನ್ನು ಕರೆಸಿದರು. ಪೋಷಕರ ಸಮ್ಮುಖದಲ್ಲೇ ವ್ಯಸನಿಗಳಿಗೆ ಪೊಲೀಸರು ಬುದ್ದಿವಾದ ಹೇಳಿದರು. ಈ ವೇಳೆ ಕಮಿಷನರ್ ಎದುರು ಪೋಷಕರು ಕಣ್ಣೀರು ಹಾಕಿದರು.

ನಕಲಿ ಸಿಗರೇಟ್ ಮಾರಾಟ ಜಾಲ ಪತ್ತೆ

ಧಾರವಾಡ: ನವಲಗುಂದದಲ್ಲಿ ನಕಲಿ ಸಿಗರೇಟ್ ಮಾರಾಟ ಜಾಲ ಪತ್ತೆಯಾಗಿದೆ. ಆರೋಪಿಗಳು ಕ್ರೇಟಾ ಕಾರ್​ನಲ್ಲಿ ಐಟಿಸಿ ಕಂಪನಿಯ ನಕಲಿ ಗೋಲ್ಡ್ ಪ್ಯಾಕ್ ಕಿಂಗ್ಸ್ ಮತ್ತು ಲೈಟ್ಸ್ ಸಿಗರೇಟ್​ಗಳನ್ನು ಹುಬ್ಬಳ್ಳಿ-ವಿಜಯಪುರ ಹೆದ್ದಾರಿಯಲ್ಲಿ ಸಾಗಿಸುತ್ತಿದ್ದರು. ಈ ವಿಚಾರವನ್ನು ಐಟಿಸಿ ಕಂಪನಿ ಪೊಲೀಸರಿಗೆ ಮಾಹಿತಿ ನೀಡಿದೆ. ಮಾಹಿತಿ ಆಧರಿಸಿ ಪೊಲೀಸರು ನವಲಗುಂದ ಶೆಟ್ಟರ್ ಕೆರೆ ಬಳಿ ತಡೆದು ತಪಾಸಣೆ ನಡೆಸಿದ್ದಾರೆ. ಈ ವೇಳೆ ಒಟ್ಟು 5.44 ಲಕ್ಷ ರೂ. ಮೌಲ್ಯದ ನಕಲಿ ಸಿಗರೇಟ್ ಪತ್ತೆಯಾಗಿದೆ.

ಬಳಿಕ, ಪೊಲೀಸರು ಕಾರಿನಲ್ಲಿದ್ದ ಉಡುಪಿ ಮೂಲದ ಮಹಮ್ಮದ ನೌಶಾದ ಮೋಹಿದ್ದಿನ್ ಎಂಬುವನನ್ನು ಬಂಧಿಸಿದ್ದಾರೆ. ನಕಲಿ ಸಿಗರೇಟ್ ವಶಕ್ಕೆ ಪಡೆದರು. ಕಾರು ವಿಜಯಪುರದಿಂದ ಹುಬ್ಬಳ್ಳಿಯತ್ತ ಹೋಗುತ್ತಿದ್ದಾಗ, ಕಾರ್ಯಾಚರಣೆ ನಡೆದಿದೆ.

ಬೆಳಗಾವಿ, ವಿಜಯಪುರ, ಹುಬ್ಬಳ್ಳಿ ಭಾಗದಲ್ಲಿ ನಕಲಿ ಸಿಗರೇಟ್ ಜಾಲ ಹೆಚ್ಚಾಗಿದೆ. ಬೆಂಗಳೂರಿನಿಂದ ನಕಲಿ ಸಿಗರೇಟ್ ತಂದು ಮಾರಾಟ ಮಾಡುತ್ತಿತ್ತು. ಈಗಾಗಲೇ ಲಕ್ಷಾಂತರ ರೂಪಾಯಿ ಸಿಗರೇಟ್ ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ. ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:39 pm, Sun, 29 September 24

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ