ಹುಬ್ಬಳ್ಳಿ-ಧಾರವಾಡ ಬೈಪಾಸ್​ ರಸ್ತೆಯಲ್ಲಿ ಅಪಘಾತ ತಪ್ಪಿಸಲು ಕಟ್ಟುನಿಟ್ಟಿನ ಕ್ರಮ: ಡಿಸಿ ನೇತೃತ್ವದಲ್ಲಿ ಸಭೆ

ಜನವರಿ 15 ರಂದು ಇಟ್ಟಿಗಟ್ಟಿ ಬಳಿ ನಡೆದ ಅಪಘಾತದ ಬಳಿಕ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ, ಇದೀಗ ಅಪಘಾತ ತಡೆಗೆ ವಿವಿಧ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ.

ಹುಬ್ಬಳ್ಳಿ-ಧಾರವಾಡ ಬೈಪಾಸ್​ ರಸ್ತೆಯಲ್ಲಿ ಅಪಘಾತ ತಪ್ಪಿಸಲು ಕಟ್ಟುನಿಟ್ಟಿನ ಕ್ರಮ: ಡಿಸಿ ನೇತೃತ್ವದಲ್ಲಿ ಸಭೆ
DC ನಿತೇಶ ಪಾಟೀಲ್ ನೇತ್ರತ್ವದಲ್ಲಿ ಅಧಿಕಾರಿಗಳ ಸಭೆ
Follow us
TV9 Web
| Updated By: ganapathi bhat

Updated on:Apr 06, 2022 | 8:48 PM

ಧಾರವಾಡ: ಇತ್ತೀಚೆಗೆ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಂಭವಿಸಿದ್ದ ಅಪಘಾತದಿಂದ ರಾಜ್ಯವೇ ಬೆಚ್ಚಿಬಿದ್ದಿತ್ತು. ಅಪಘಾತದಲ್ಲಿ ದಾವಣಗೆರೆ ಮೂಲದ 11 ಜನರು ಮೃತಪಟ್ಟಿದ್ದರು. ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಸಂತಾಪ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ, ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ‌ ಧಾರವಾಡ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.

ಜನವರಿ 15 ರಂದು ಇಟ್ಟಿಗಟ್ಟಿ ಬಳಿ ನಡೆದ ಅಪಘಾತದ ಬಳಿಕ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ, ಇದೀಗ ಅಪಘಾತ ತಡೆಗೆ ವಿವಿಧ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿ ನೂತನ ಸಭಾಭವನದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷರೂ ಆಗಿರುವ, ನಿತೇಶ ಪಾಟೀಲ್ ನೇತ್ರತ್ವದಲ್ಲಿ ಸಭೆ ನಡೆಸಲಾಗಿದೆ.

ಕಳೆದ ಸಾಲಿಗೆ ಹೋಲಿಸಿದರೆ, ಧಾರವಾಡ ಜಿಲ್ಲೆಯಲ್ಲಿ 2020ನೇ ಸಾಲಿನಲ್ಲಿ ಕಡಿಮೆ ಪ್ರಮಾಣದಲ್ಲಿ ರಸ್ತೆ ಅಪಘಾತ ಪ್ರಕರಣಗಳು ದಾಖಲಾಗಿವೆ. ಸಾರಿಗೆ, ಪೊಲೀಸ್, ಲೊಕೋಪಯೋಗಿ. ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಿದರೆ ರಸ್ತೆ ಅಪಘಾತಗಳು ಸಂಭವಿಸದಂತೆ ಸಂಪೂರ್ಣವಾಗಿ ನಿಯಂತ್ರಿಸಬಹುದು ಎಂದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.

ನಿಯಮಗಳ ಪಾಲನೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಇರುವ ರಾಷ್ಟ್ರೀಯ ಹೆದ್ದಾರಿ 4 ರಲ್ಲಿನ, ಸುಮಾರು 30 ಕಿ.ಮೀ. ರಸ್ತೆಯಲ್ಲಿನ ಅಪಘಾತಗಳನ್ನು ತಪ್ಪಿಸಲು ಸಂಚಾರ ನಿಯಮಗಳ ಪಾಲನೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಪ್ರತಿ ಕಿ.ಮೀ.ಗೆ 60 ವೇಗದ ಮಿತಿ ಇದ್ದರೂ ಬಸ್, ಟ್ರಕ್, ಮಿನಿಬಸ್, ಕಾರ್​ಗಳ ಚಾಲಕರು ನಿಯಮ ಪಾಲಿಸದೇ ವೇಗವಾಗಿ ವಾಹನ ಚಾಲನೆ, ವಾಹನಗಳ ಓವರ್‌ ಟೇಕ್ ಮಾಡುತ್ತಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಅಪಘಾತಗಳು ಸಂಭವಿಸುತ್ತಿವೆ. ರಸ್ತೆ ನಿರ್ವಹಣೆ ಮಾಡುವ ಗುತ್ತಿಗೆದಾರರು, ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹುಬ್ಬಳ್ಳಿ-ಧಾರವಾಡ ಬೈಪಾಸ್‍ನ 30 ಕಿ.ಮೀ ರಸ್ತೆ ಪರಿಶೀಲಿಸಿ ಮುಂದಿನ 72 ಗಂಟೆಗಳಲ್ಲಿ ಅಪಾಯಕಾರಿ ಸ್ಥಳ, ಸೇತುವೆ, ತಿರುವು ಗುರುತಿಸಬೇಕು. ಅಲ್ಲಿ ಕನಿಷ್ಠ 20 ಎಚ್ಚರಿಕೆ ಫಲಕ, ವೇಗದ ಮಿತಿ ಸೂಚಿಸುವ ಮತ್ತು ಸುರಕ್ಷತಾ ನಿಯಮಗಳ ಫಲಕಗಳನ್ನು ಅಳವಡಿಸಿ ವರದಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.

ರಬ್ಬರ್, ಫೈಬರ್ ಬಳಸಿ ರಸ್ತೆ ವಿಭಜಕ ನಿರ್ಮಿಸಲು ಸೂಚನೆ ಹುಬ್ಬಳ್ಳಿ-ಧಾರವಾಡದ 30 ಕಿ.ಮೀ. ಬೈಪಾಸ್ ರಸ್ತೆಯ ಮಧ್ಯದಲ್ಲಿ ರಬ್ಬರ್ ಮತ್ತು ಫೈಬರ್ ಸಾಧನ ಬಳಸಿ, ರಸ್ತೆ ವಿಭಜಕಗಳನ್ನು ನಿರ್ಮಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ರಸ್ತೆ ವಿಸ್ತರಣೆ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಆಗಿದ್ದು, ಅನುಮತಿ ಬಂದ ತಕ್ಷಣ ಈ ಕುರಿತು ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯ ಫುಟ್‍ಪಾತ್ ಅತಿಕ್ರಮಿಸಿ ಅನೇಕ ರೀತಿಯ ಅಂಗಡಿ, ವ್ಯಾಪಾರಗಳು ಅನಧಿಕೃತವಾಗಿ ನಡೆಯುತ್ತಿವೆ. ಟೋಲ್ ಪಕ್ಕದಲ್ಲಿಯೇ ಗುತ್ತಿಗೆದಾರರಿಗೆ ನೀಡಿರುವ ಜಾಗದಲ್ಲಿ, ನಿಯಮ ಉಲ್ಲಂಘಿಸಿ ಅಂಗಡಿ ನಿರ್ಮಾಣ, ವಾಹನ ನಿಲುಗಡೆಗೆ ಸ್ಥಳಾವಕಾಶ ನೀಡಲಾಗಿದೆ. ಈ ಕುರಿತು ರಸ್ತೆ ನಿರ್ವಾಹಕ ಗುತ್ತಿಗೆದಾರ ಸಂಸ್ಥೆಗೆ ನೋಟಿಸ್ ನೀಡಬೇಕು. ಸೂಕ್ತ ಬಂದೋಬಸ್ತ್‌ನಲ್ಲಿ ಎಲ್ಲ ಅತಿಕ್ರಮಣಗಳನ್ನು ಶೀಘ್ರದಲ್ಲಿ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಅಪಘಾತದಲ್ಲಿ ಅಸುನೀಗಿದವರ ಕುರಿತು ವರದಿ ಜ. 15 ರಂದು ಬೈಪಾಸ್ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಅಸುನೀಗಿದವರ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಟಿಪ್ಪರ್ ವಾಹನದ ಚಾಲಕನ ಮೇಲೆ ಅಜಾಗರೂಕತೆಯ ವಾಹನ ಚಾಲನೆ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ವಿಶೇಷ ಆಹ್ವಾನಿತರಾಗಿ ಎಡಿಜಿಪಿ ಪ್ರತಾಪರೆಡ್ಡಿ ಜಿಲ್ಲಾಧಿಕಾರಿಗಳ ನೇತ್ರತ್ವದಲ್ಲಿ ನಡೆದ ಸಭೆಗೆ ವಿಶೇಷ ಆಹ್ವಾನಿತರಾಗಿ ರಾಜ್ಯ ಕಾನೂನು, ಸುವ್ಯವಸ್ಥೆ ಹಾಗೂ ಸಂಚಾರಿ ವಿಭಾಗದ ಅಪರ ಪೊಲೀಸ್ ಮಹಾನಿರ್ದೇಶಕ ಪ್ರತಾಪರೆಡ್ಡಿ ಆಗಮಿಸಿದ್ದರು. ರಸ್ತೆ ಅಪಘಾತಗಳನ್ನು ನಿಯಂತ್ರಿಸಲು, ವಾಹನ ಹಾಗೂ ವಾಹನ ಚಾಲಕರಿಂದ, ಕಾನೂನು ಹಾಗೂ ನಿಯಮಗಳ ಉಲ್ಲಂಘನೆ ಆಗದಂತೆ ಎಚ್ಚರಿಕೆ ವಹಿಸಬೇಕು. ಅಪಾಯಕಾರಿ ರಸ್ತೆ, ತಿರುವು, ಸೇತುವೆಗಳ ಸಮೀಪದಲ್ಲಿ ಪೊಲೀಸ್ ಗಸ್ತು ಹೆಚ್ಚಿಸಬೇಕು. ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯಲ್ಲಿ ಅಪಘಾತ ವಲಯಗಳನ್ನು ಗುರುತಿಸಿ, ಎಚ್ಚರಿಕೆ ಸಂದೇಶಗಳನ್ನು ಚಾಲಕರಿಗೆ ಎದ್ದು ಕಾಣುವಂತೆ ಅಳವಡಿಸಬೇಕು ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಉತ್ತರ ವಲಯದ ಪೊಲೀಸ್ ಮಹಾನಿರೀಕ್ಷಕ ರಾಘವೇಂದ್ರ ಸುಹಾಸ್ ಮಾತನಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ರಸ್ತೆ, ತಿರುವು, ಸೇತುವೆಗಳ, ಸುಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಬೇಕು. ರಸ್ತೆ ಸುರಕ್ಷತೆ ಹಾಗೂ ಎಚ್ಚರಿಕೆ ಸಂದೇಶದ ಫಲಕಗಳ ಅಳವಡಿಕೆ, ನಿರ್ವಹಣೆ ಕುರಿತು ಮೇಲುಸ್ತುವಾರಿ ಮಾಡಿ ನಿಗಾವಹಿಸಬೇಕು. ಗುತ್ತಿಗೆದಾರನ ನಿರ್ವಹಣೆ ಕುರಿತು ನಿಯಮಗಳ ಪಾಲನೆ ಆಗಿರುವುದನ್ನು ಪರಿಶೀಲಿಸಬೇಕು ಎಂದು ತಿಳಿಸಿದ್ದಾರೆ.

ಅವಳಿ ನಗರ ಪೊಲೀಸ್ ಆಯುಕ್ತರ ಸೂಚನೆ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತ ಲಾಬೂರಾಮ ಅವರು ಮಾತನಾಡಿದ್ದಾರೆ. ರಸ್ತೆ ಸುರಕ್ಷತಾ ಹಾಗೂ ಸಂಚಾರಿ ನಿಯಮಗಳ ಪಾಲನೆಗೆ ಆದ್ಯತೆ ನೀಡಬೇಕು. ಹೆದ್ದಾರಿ ಸೇರಿದಂತೆ ನಗರ ಹಾಗೂ ಗ್ರಾಮೀಣ ಭಾಗದ ರಸ್ತೆ ಅಪಘಾತಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ. ಈಗಾಗಲೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಬೈಪಾಸ್ ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳನ್ನು ಪರಿಶೀಲಿಸಿ, ಸೂಕ್ತ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.

ಸಭೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯ, ಜಿಲ್ಲಾ ಪಂಚಾಯತ್ ಸಿಇಓ ಡಾ.ಬಿ. ಸುಶೀಲಾ, ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸದಸ್ಯರು, ರಸ್ತೆ ನಿರ್ವಹಣಾ ಗುತ್ತಿಗೆದಾರರು ಉಪಸ್ಥಿತರಿದ್ದರು.

ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಸಾವಿನ ರಸ್ತೆಯ ಅಟ್ಟಹಾಸ; ಕಣ್ಮುಚ್ಚಿ ಕುಳಿತರಾ ಅಧಿಕಾರಿಗಳು?

ಧಾರವಾಡ ಅಪಘಾತ; ಗಂಟಲುಬ್ಬಿ ಕಣ್ಣೀರಾದ ಗೆಳತಿ ಹಂಚಿಕೊಂಡ ಒಡನಾಡಿಗಳ ನೆನಪು

Published On - 8:46 pm, Mon, 18 January 21

ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ