Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಎನ್‌ಕೌಂಟರ್‌ ಕೇಸ್​: ಪಿಎಸ್​ಐ ಅನ್ನಪೂರ್ಣಗೆ ಮೆಚ್ಚುಗೆಯ ಮಹಾಪೂರ, ಯಾರೀ ಲೇಡಿ ಸಿಂಗಂ?

ಹುಬ್ಬಳ್ಳಿಯ ಬಾಲಕಿಯ ಹತ್ಯೆ ಆರೋಪಿಯನ್ನು ಎನ್‌ಕೌಂಟರ್‌ ಪ್ರಕರಣ ಸದ್ಯ ದೇಶಾದ್ಯಂತ ಸಾಕಷ್ಟು ಚರ್ಚೆ ಆಗುತ್ತಿದೆ. ಗಟ್ಟಿಗಿತ್ತಿ ಪಿಎಸ್‌ಐ ಅನ್ನಪೂರ್ಣ ‌ಮಾಡಿದ ಸಾಹಸಕ್ಕೆ ಎಲ್ಲೆಡೆ ಅಭಿನಂದನೆಗಳ ಮಹಾಪೂರವೇ ಹರಿದುಬರ್ತಿದೆ. ಆರೋಪಿಯ ಕತೆ ಮುಗಿಸಿದ ಈ ಲೇಡಿ ಪಿಎಸ್‌ಐ ಯಾರು ಎಂದು ಜನರು ತಲೆಕೆಡಿಸಿಕೊಂಡಿದ್ದಾರೆ. ಅದಕ್ಕೆ ಉತ್ತರ ಇಲ್ಲಿದೆ.

ಹುಬ್ಬಳ್ಳಿ ಎನ್‌ಕೌಂಟರ್‌ ಕೇಸ್​: ಪಿಎಸ್​ಐ ಅನ್ನಪೂರ್ಣಗೆ ಮೆಚ್ಚುಗೆಯ ಮಹಾಪೂರ, ಯಾರೀ ಲೇಡಿ ಸಿಂಗಂ?
ಪಿಎಸ್​ಐ ಅನ್ನಪೂರ್ಣ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಗಂಗಾಧರ​ ಬ. ಸಾಬೋಜಿ

Updated on:Apr 14, 2025 | 9:00 PM

ಹುಬ್ಬಳ್ಳಿ, ಏಪ್ರಿಲ್​ 14: ಏನೂ ಅರಿಯದ 5 ವರ್ಷದ ಪುಟ್ಟ ಕಂದನನ್ನು ಅತ್ಯಾಚಾರ ಮಾಡಿ ಕೊಲೆ ಪ್ರಕರಣ ಜನರನ್ನು ಸಾಕಷ್ಟು ಘಾಸಿಗೊಳಿಸಿತ್ತು. ಹುಬ್ಬಳ್ಳಿ (hubballi) ಜನರು ಆರೋಪಿ ರಿತೇಶ್​ನನ್ನು ತಮ್ಮ ಕೈಗೊಪ್ಪಿಸುವಂತೆ ಒತ್ತಾಯಿಸಿದ್ದರು. ಬಳಿಕ ಸ್ಥಳ: ಪರಿಶೀಲನೆ ವೇಳೆ ಪೊಲೀಸರ ಮೇಲೆಯೇ ದಾಳೆಗೆ ಮುಂದಾದ ಆರೋಪಿಗೆ ಪಿಎಸ್​ಐ ಅನ್ನಪೂರ್ಣ (Psi Annapurna) ಗುಂಡು ಹಾರಿಸಿದ್ದರು. ಯಾವಾಗ ಅನ್ನಪೂರ್ಣ ಅಂತಿಮ ತೀರ್ಪು ನೀಡಿದರೋ ಜನರು ಬಹುಪರಾಕ್ ಕೂಗಿದರು. ಹಾಗಾದರೆ ಈ ಲೇಡಿ ಸಿಂಗಂ ಅನ್ನಪೂರ್ಣ ಯಾರು ಗೊತ್ತಾ? ಇಲ್ಲಿದೆ ಉತ್ತರ.

ಯಾರು ಈ ಲೇಡಿ ಸಿಂಗಂ?

ಬಾಲಕಿಯ ಹತ್ಯೆ ಆರೋಪಿಯ ಎನ್‌ಕೌಂಟರ್‌ ಪ್ರಕರಣ ಇದೀಗ ದೇಶಾದ್ಯಂತ ಚರ್ಚೆಯಾಗುತ್ತಿದೆ. ಮಹಿಳಾ ಪಿಎಸ್​ಐ, ಲೇಡಿ ಸಿಂಗಂ ಅನ್ನಪೂರ್ಣಗೆ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ. ಅನ್ನಪೂರ್ಣ ‌ಆರ್.ಮುಕ್ಕಣ್ಣವರ ಎಂಎಸ್​ಸಿ ಪದವೀಧರೆ. 2018ನೇ ಬ್ಯಾಚ್​ನ ಪೊಲೀಸ್ ಅಧಿಕಾರಿ. ಹುಟ್ಟಿದ್ದು ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಗುಜನಟ್ಟಿ ಗ್ರಾಮದಲ್ಲಿ.

ಇದನ್ನೂ ಓದಿ: ಹುಬ್ಬಳ್ಳಿ: ಬಾಲಕಿಯನ್ನು ಕೊಲೆಗೈದಿದ್ದ ಆರೋಪಿ ತಪ್ಪಿಸಿಕೊಳ್ಳಲು ಯತ್ನ, ಪೊಲೀಸ್​ ಗುಂಡಿಗೆ ಬಲಿ

ಇದನ್ನೂ ಓದಿ
Image
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
Image
ಹೊರ ರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಕೃತ್ಯ: ಗೃಹ ಸಚಿವ ಪರಮೇಶ್ವರ್
Image
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
Image
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಪದವಿ ಪಡೆದ ಅನ್ನಪೂರ್ಣ, ಬೆಂಗಳೂರಿನ ಜಿಕೆವಿಕೆಯಲ್ಲಿ ಎಂಎಸ್ಸಿ ಪದವಿ ಪಡೆದುಕೊಂಡರು. ಬಳಿಕ ಎಂಎಸ್​ಸಿಯಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದರು. ಬಾಲ್ಯದಲ್ಲೇ ತಂದೆಯನ್ನ ಕಳೆದುಕೊಂಡ ಅನ್ನಪೂರ್ಣ, ತಾಯಿ ನೆರಳಿನಲ್ಲಿ ಬೆಳೆದು ಪಿಎಸ್‌ಐ ಆಗಿದ್ದಾರೆ. ಸದ್ಯ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪಿಎಸ್​ಐ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ದೇಶದ ಜನರ ಮನ ಗೆದ್ದಿರುವ ಅನ್ನಪೂರ್ಣ ಅವರಿಗೆ ಅಭಿನಂದನೆಗಳ ಸುರಿ ಮಳೆ ಶುರುವಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ ಪಿಎಸ್ಐ ಅನ್ನಪೂರ್ಣ ಸದ್ಯ ಹುಬ್ಬಳ್ಳಿ ಕಿಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

PSIಗೆ ಸಚಿವ ಸಂತೋಷ್ ಲಾಡ್​ ಸೆಲ್ಯೂಟ್

ಹಂತಕನಿಗೆ ಗುಂಡು ಹೊಡೆದ PSIಗೆ ಸಚಿವ ಸಂತೋಷ್ ಲಾಡ್​ ಸೆಲ್ಯೂಟ್ ಹೊಡೆದು ಮೆಚ್ಚುಗೆ ವ್ಯಕ್ತಪಡಿಸಿದರು. ಇಂದು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಲಾಡ್, ಫೈರಿಂಗ್​ನಲ್ಲಿ ಗಾಯಗೊಂಡ ಪೊಲೀಸ್ ಸಿಬ್ಬಂದಿ ಆರೋಗ್ಯ ವಿಚಾರಿಸಿದರು. ಈ ಸಮಯದಲ್ಲಿ ಗುಂಡೇಟು ಹೊಡೆದ ಹುಬ್ಬಳ್ಳಿಯ ಅಶೋಕನಗರ ಠಾಣೆ ಪಿಎಸ್ಐ​ ಅನ್ನಪೂರ್ಣಗೆ ಸೆಲ್ಯೂಟ್ ಹೊಡೆದರು. ಶೇಕ್ ಹ್ಯಾಂಡ್ ಮಾಡಿ ಗೆಟ್​ವೆಲ್ ಸೂನ್ ಎಂದರು.

ಪಂಚಭೂತಗಳಲ್ಲಿ ಕರಗಿದ ಐದರ ಪುಟ್ಟ ಹಸುಗೂಸು!

ಇತ್ತ ಆರೋಪಿಯ ಕ್ರೌರ್ಯಕ್ಕೆ ಬಲಿಯಾದ ಬಾಲಕಿಯ ಅಂತ್ಯಕ್ರಿಯೆ ನಡೆಯಿತು. ಪುಟಾಣಿಯ ಮೃತದೇಹ ನೋಡ್ತಿದ್ದಂತೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಹೆತ್ತವರ ನೋವು ಹೇಳತೀರದಾಗಿತ್ತು. ಹುಬ್ಬಳ್ಳಿ ನಗರದ ದೇವಾಂಗಪೇಟ್​ನ ರುದ್ರಭೂಮಿಯಲ್ಲಿ ಕಂದಮ್ಮನ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಸರ್ಕಾರ ಮೃತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:38 pm, Mon, 14 April 25

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ