Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಫ್ಲೈಓವರ್ ಕಾಮಗಾರಿ ರಾಡ್​ ಬಿದ್ದು ಗಾಯಗೊಂಡಿದ್ದ ಎಎಸ್​ಐ ಸಾವು

ಫ್ಲೈಓವರ್ ಕಾಮಗಾರಿಯ ರಾಡ್​ ಬಿದ್ದು ಗಾಯಗೊಂಡಿದ್ದ ಹುಬ್ಬಳ್ಳಿ ಉಪನಗರ ಠಾಣೆಯ ಎಎಸ್​ಐ ನಾಭಿರಾಜ್ ದಯಣ್ಣವರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಎಎಸ್​ಐ ನಾಭಿರಾಜ್ ದಯಣ್ಣವರ ಮೇಲೆ ಕೋರ್ಟ್ ವೃತ್ತದ ಬಳಿ ಫ್ಲೈ ಓವರ್ ಕಾಮಗಾರಿಯ ರಾಡ್ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.

ಹುಬ್ಬಳ್ಳಿ: ಫ್ಲೈಓವರ್ ಕಾಮಗಾರಿ ರಾಡ್​ ಬಿದ್ದು ಗಾಯಗೊಂಡಿದ್ದ ಎಎಸ್​ಐ ಸಾವು
ಎಎಸ್​ಐ ನಾಭಿರಾಜ್ ದಯಣ್ಣವರ
Follow us
ವಿವೇಕ ಬಿರಾದಾರ
|

Updated on:Sep 15, 2024 | 9:46 AM

ಹುಬ್ಬಳ್ಳಿ, ಸೆಪ್ಟೆಂಬರ್​​ 15: ಫ್ಲೈಓವರ್ ಕಾಮಗಾರಿಯ (Flyover Construction) ರಾಡ್​ ಬಿದ್ದು ಗಾಯಗೊಂಡಿದ್ದ ಹುಬ್ಬಳ್ಳಿ ಉಪನಗರ ಠಾಣೆಯ ಎಎಸ್​ಐ ನಾಭಿರಾಜ್ ದಯಣ್ಣವರ (59) (Hubballi ASI Nabhiraj Dayannavar) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸೆಪ್ಟೆಂಬರ್​ 10ರಂದು ಕೋರ್ಟ್ ವೃತ್ತದ ಬಳಿ ಕರ್ತವ್ಯದ ವೇಳೆ ಫ್ಲೈಓವರ್ ಕಾಮಗಾರಿಯ ರಾಡ್​ ಬಿದ್ದು ಎಎಸ್​ಐ ನಾಭಿರಾಜ್ ದಯಣ್ಣವರ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೆ ಅವರನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಇಂದು (ಸೆ.15) ಚಿಕಿತ್ಸೆ ಫಲಿಸದೆ ಎಎಸ್​ಐ ನಾಭಿರಾಜ್ ದಯಣ್ಣವರ ಕೊನೆಯುಸಿರೆಳೆದಿದ್ದಾರೆ.

ಗುತ್ತಿಗೆದಾರರ ನಿರ್ಲಕ್ಷ್ಯ ಹಿನ್ನೆಲೆ ಅವಘಡ ಸಂಭವಿಸಿದೆ ಎಂದು ಝಂಡು ಕನ್​ಸ್ಟ್ರಕ್ಷನ್ ನಿರ್ದೇಶಕರಾದ ರಾಮ್‌ಕುಮಾರ್, ಮೋಹಿತ್ ಮತ್ತು ಮನುದೀಪ್, ಯೋಜನಾ ನಿರ್ದೇಶಕ, ಎಂಜಿನಿಯರ್, ಸುರಕ್ಷತಾ ಅಧಿಕಾರಿ, ಕ್ರೇನ್ ಆಪರೇಟರ್ ಮತ್ತು ಕಾರ್ಮಿಕರ ವಿರುದ್ಧ ಎಎಸ್‌ಐ ಪುತ್ರ ರುಷಭ್ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಪ್ರೇಮ ವೈಫಲ್ಯ; ಲಾಡ್ಜ್​ಗೆ​​ ಹೋಗಿ ಪ್ರಾಣ ಬಿಟ್ಟ ಯುವಕ

ಸಂತೋಷ್​ ಲಾಡ್​ ಸಂತಾಪ

ಎಎಸ್​ಐ ನಾಭಿರಾಜ್ ದಯಣ್ಣವರ ಗುಣಮುಖರಾಗಲು ವೈದ್ಯರು ಸಾಕಷ್ಟು ಪ್ರಯತ್ನಪಟ್ಟರು. ಆದರೆ, ಈ ತರಹ ಆಗಬಾರದಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಎಎಸ್​ಐ ನಾಭಿರಾಜ್ ದಯಣ್ಣವರ ಕುಟುಂಬಸ್ಥರನ್ನು ಭೇಟಿ ಮಾಡಿದ್ದೇನೆ. ಕರ್ನಾಟಕದಲ್ಲಿ ಎಲ್ಲೆಲ್ಲಿ ಕಾಮಗಾರಿ ನಡೆಯುತ್ತಿದೆ, ಅಲ್ಲಿ ಗುತ್ತಿಗೆದಾರರು ಮುಂಜಾಗೃತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

19 ಜನರ ವಿರುದ್ಧ ಪ್ರಕರಣ ದಾಖಲು

ಎಎಸ್​ಐ ನಾಭಿರಾಜ್ ದಯಣ್ಣವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕಿಮ್ಸ್ ಆಸ್ಪತ್ರೆಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಭೇಟಿ ನೀಡಿ, ಮಾಹಿತಿ ಪಡೆದರು. ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ, ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು, ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ ನಾಭಿರಾಜ್ ಮೃತಪಟ್ಟಿದ್ದಾರೆ. ಪೊಲೀಸ್ ಮತ್ತು ಜಿಲ್ಲಾಡಳಿತ ಅವರನ್ನು ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿತು. ಆದರೆ ನಮ್ಮ ಶ್ರಮ ಫಲಿಸಲಿಲ್ಲ. ಈಗಾಗಲೇ 19 ಜನರ ಮೇಲೆ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗ ಎಎಸ್ಐ ಸಾವಿನಪ್ಪಿದ್ದಾರೆ. ಹೀಗಾಗಿ ಇದನ್ನು ಗಂಭೀರ ಸ್ವರೂಪದ ಪ್ರಕರಣ ಎಂದು ಪರಿಗಣಸಲಾಗುತ್ತದೆ ಎಂದು ಹೇಳಿದರು.

ಈ ಕಾಮಗಾರಿಯಲ್ಲಿ ಯಾವ ಯಾವ ಇಲಾಖೆ ಬರುತ್ತೆ, ಎಲ್ಲವೂ ಹೊಣೆ ಹೊರಬೇಕಾಗುತ್ತದೆ. ಸಂಬಂಧಿತ ಗುತ್ತಿಗೆದಾರ ಕಂಪನಿ, ಮಾಲೀಕ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಗಳ ಮೇಲೂ ಪ್ರಕರಣ ದಾಖಲಾಗುತ್ತದೆ. ಇದು ನಮ್ಮದೆ ಇಲಾಖೆ ಪ್ರಕರಣ, ಹೀಗಾಗಿ ಯಾವುದೇ ಲೋಪದೋಷವಾಗಲು ಬಿಡಲ್ಲ. ಝಾಂಡು ಕಂಪನಿಯ ಎರಡು ಕಚೇರಿಗಳು ಬಂದ್ ಆಗಿವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:52 am, Sun, 15 September 24

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ