ಹುಬ್ಬಳ್ಳಿಯಲ್ಲಿ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು: ಸಾವಿನ ಸಂಖ್ಯೆ 4ಕ್ಕೆ ಏರಿಕೆ

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟದಿಂದಾಗಿ ಮೃತಪಟ್ಟ ಅಯ್ಯಪ್ಪ ಮಾಲಾಧಾರಿಗಳ ಸಂಖ್ಯೆ ನಾಲ್ಕಕ್ಕೆ ಏರಿದೆ. ಇನ್ನೂ ಐದು ಜನರ ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಇಂದು ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸರ್ಕಾರ ತಜ್ಞ ವೈದ್ಯರನ್ನು ನೇಮಿಸಿದ್ದರೂ, ಹೆಚ್ಚಿನ ಸುಟ್ಟ ಗಾಯಗಳಿಂದಾಗಿ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎನ್ನಲಾಗುತ್ತಿದೆ.

ಹುಬ್ಬಳ್ಳಿಯಲ್ಲಿ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು: ಸಾವಿನ ಸಂಖ್ಯೆ 4ಕ್ಕೆ ಏರಿಕೆ
ಹುಬ್ಬಳ್ಳಿಯಲ್ಲಿ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು: ಸಾವಿನ ಸಂಖ್ಯೆ 4ಕ್ಕೆ ಏರಿಕೆ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on:Dec 27, 2024 | 4:57 PM

ಹುಬ್ಬಳ್ಳಿ, ಡಿಸೆಂಬರ್​​ 27: ನಗರದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು (Cylinder Blast) ದುರಂತ ಪ್ರಕರಣಕ್ಕೆ ಸಂಬಂಧಿಸಿಂತೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಆ ಮೂಲಕ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೇರಿಕೆ ಆಗಿದೆ. ಲಿಂಗರಾಜ ಬೀರನೂರ(19) ಮೃತ ಅಯ್ಯಪ್ಪ ಮಾಲಾಧಾರಿ. ಬಾಕಿ ಐವರಿಗೆ ಚಿಕಿತ್ಸೆ ಮುಂದುವರೆದಿದೆ.

ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಭಾನುವಾರ ಸಿಲಿಂಡರ್ ಸ್ಫೋಟಗೊಂಡು 9 ಜನ ಅಯ್ಯಪ್ಪ ಮಾಲಾಧಾರಿ ಗಾಯಗೊಂಡಿದ್ದರು. 9 ಜನರ ಪೈಕಿ ನಿನ್ನೆ ನಿಜಲಿಂಗಪ್ಪ ಬೇಪುರಿ (58), ಸಂಜಯ್​​ ಸವದತ್ತಿ (18) ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದರೆ, ಇಂದು ಬೆಳಿಗ್ಗೆ ರಾಜು ಮೂಗೇರಿ ಸಾವನ್ನಪ್ಪಿದ್ದ. ಮೃತ ರಾಜು ಮೋಗೇರಿ ಮೊದಲ ಬಾರಿ ಅಯ್ಯಪ್ಪ ಮಾಲೆ ಧರಿಸಿದ್ದ. ರಾಜು‌ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

ಇದನ್ನೂ ಓದಿ: ಹುಬ್ಬಳ್ಳಿ ಸಿಲಿಂಡರ್​ ಬ್ಲಾಸ್ಟ್​: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು

ಹುಬ್ಬಳ್ಳಿಯ ಉಣಕಲ್ ಸಮೀಪ ಇರುವ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಘೋರ ದುರಂತವನ್ನು ಸರ್ಕಾರ ಗಂಭೀರವಾಗಿ ಪರಿಣಮಿಸಿತ್ತು. ಹೀಗಾಗಿ ಬೆಂಗಳೂರಿನಿಂದ ತಜ್ಞ ವೈದ್ಯರನ್ನು ಕರೆಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದಲ್ಲದೆ ಕಿಮ್ಸ್ ವೈದ್ಯರು ರಾಜ್ಯ ಮತ್ತು ದೇಶದ ನಾನಾ ಭಾಗದ ಎಕ್ಸಪರ್ಟ್ ವೈದ್ಯರಿಂದ ಮಾಹಿತಿ ಪಡೆದುಕೊಂಡು ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ ಮಾಲಾಧಾರಿಗಳಿಗೆ ಶೇ 70 ಕ್ಕಿಂತ ಹೆಚ್ಚು ಸುಟ್ಡ ಗಾಯವಾದ ಕಾರಣ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ.

9 ಜನರ ಪೈಕಿ ನಾಲ್ಕು ಜನ‌ ಸಾವನ್ನಪ್ಪಿದ್ದು, ಐದು‌ ಜನರ ಸ್ಥಿತಿ ಬಹಳ ಗಂಭೀರವಾಗಿದೆ. 9 ಜನ ಮೂಲಾಧಾರಿಗಳ ಪೈಕಿ 12 ವರ್ಷದ ವಿನಾಯಕ್ ಬಾರಕೇರ ಮಾತ್ರ ಚಿಕಿತ್ಸೆಗೆ ಸ್ಪಂದಿಸಿದ್ದಾನೆ. ಹೀಗಾಗಿ ಬಾಲಕ ನನ್ನ ಐಸೋಲೇಶನ್ ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆ. ಕಿಮ್ಸ್ ವೈದ್ಯರು ಉಳಿದ ಐದು ಜನರಿಗೆ ತೀವೃ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದು, ಇಂದು ಕಿಮ್ಸ್ ನಿರ್ದೇಶಕ ಡಾ. ಕಮ್ಮಾರ್ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಭೇಟಿಯಾಗಿ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ದುರಂತ: ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು

ಇದೇ ವೇಳೆ ಮಾತಾನಡಿದ ನಿರ್ದೇಶಕರು, ಉಳಿದ ಐದು ಜನರ ಸ್ಥಿತಿ ಗಂಭೀರವಾಗಿದೆ ಎಂದರು‌. ಇನ್ನು ಮಾಲಾಧಾರಿಗಳ ಸಾವಿನ ಸುದ್ದಿ ತಿಳಿದ ತಕ್ಷಣ ಸಚಿವ ಸಂತೋಷ್ ಲಾಡ, ಸ್ಥಳಿಯ ಶಾಸಕ‌ ಮಹೇಶ್ ಟೆಂಗಿನಕಾಯಿ ಶವಾಗಾರಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 4:57 pm, Fri, 27 December 24