AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಬಾಲಕಿ ಹತ್ಯೆ, ಎನ್ಕೌಂಟರ್:​ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಐದು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಆರೋಪಿ ರಿತೇಶ್ ಕುಮಾರ್ ಪೊಲೀಸ್ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದಾನೆ. ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದೆ. ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿ, ತನಿಖೆಯಲ್ಲಿ ಪಾರದರ್ಶಕತೆಗೆ ಒತ್ತಾಯಿಸಿದೆ. ಪೊಲೀಸರ ಕ್ರಮದ ಬಗ್ಗೆ ವಿವಿಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಹುಬ್ಬಳ್ಳಿ ಬಾಲಕಿ ಹತ್ಯೆ, ಎನ್ಕೌಂಟರ್:​ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ
ಬಾಲಕಿಯನ್ನು ಹೊತ್ತೊಯ್ದ ಆರೋಪಿ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ವಿವೇಕ ಬಿರಾದಾರ

Updated on:Apr 15, 2025 | 3:58 PM

ಹುಬ್ಬಳ್ಳಿ, ಏಪ್ರಿಲ್​ 15: ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಹತ್ಯೆ ಮಾಡಿದ್ದ ಆರೋಪಿ, ಬಿಹಾರ ಮೂಲದ ರಿತೇಶ್​ ಕುಮಾರ್​​ ಹುಬ್ಬಳ್ಳಿ ಪೊಲೀಸರ (Hubballi Police) ಗುಂಡಿಗೆ ಬಲಿಯಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ (Karnataka Government) ಸಿಐಡಿಗೆ (CID) ವರ್ಗಾಯಿಸಿದೆ. ಇನ್ನೇರಡು ದಿನಗಳಲ್ಲಿ ಸಿಐಡಿ ತನಿಖೆ ಆರಂಭಿಸುವ ಸಾಧ್ಯತೆ ಇದೆ.

ಇನ್ನು, ಪ್ರಕರಣದ ತನಿಖೆಗಾಗಿ ತಜ್ಞರ ತಂಡ ರಚಿಸುವಂತೆ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್​ ಪಿಐಎಲ್ ಸಲ್ಲಿಸಿದೆ. ಎನ್ಕೌಂಟರ್​ನಲ್ಲಿ ಭಾಗಿಯಾದ ಪೊಲೀಸ್ ಅಧಿಕಾರಿಗಳ ದೂರವಾಣಿ ಕರೆ ವಿವರ (ಸಿಡಿಆರ್) ಪರಿಶೀಲಿಸಬೇಕು. ವೈರ್​ಲೆಸ್ ಲಾಗ್ ಬುಕ್ ಪರಿಶೀಲನೆಗೆ ನಿರ್ದೇಶಿಸಲು ಮನವಿ ಮಾಡಿದೆ. ಮೃತನ ದೇಹದ ಅಂತ್ಯಕ್ರಿಯೆ ಮಾಡದಂತೆ ತಡೆಗೆ ಮತ್ತು ಸಾಕ್ಷ್ಯನಾಶ ಆಗದಂತೆ ಕ್ರಮಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿಕೊಂಡಿದೆ.

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್​ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ,  ಸುಪ್ರೀಂಕೋರ್ಟ್​ ಮಾರ್ಗಸೂಚಿ ಪಾಲಿಸಲು ಸೂಚನೆ ನೀಡಿದೆ. ಮರಣೋತ್ತರ ಪರೀಕ್ಷೆಯ ವಿಡಿಯೋಗ್ರಾಫ್ ಮಾಡಿ. ಮರಣೋತ್ತರ ಪರರೀಕ್ಷೆ ವೇಳೆ ಸಂಗ್ರಹಿಸಿದ ಭಾಗ ರಕ್ಷಿಸಿಡುವಂತೆ ಆದೇಶಿಸಿದೆ.

ಇದನ್ನೂ ಓದಿ
Image
ಹುಬ್ಬಳ್ಳಿ ಎನ್‌ಕೌಂಟರ್‌ ಕೇಸ್​: ಪಿಎಸ್​ಐ ಅನ್ನಪೂರ್ಣಗೆ ಮೆಚ್ಚುಗೆಯ ಮಹಾಪೂರ
Image
ಹೊರ ರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಕೃತ್ಯ: ಗೃಹ ಸಚಿವ ಪರಮೇಶ್ವರ್
Image
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
Image
ಹುಬ್ಬಳ್ಳಿ: ಬಾಲಕಿಯನ್ನ ಕೊಲೆಗೈದಿದ್ದ ಆರೋಪಿ ಪೊಲೀಸ್​ ಗುಂಡಿಗೆ ಬಲಿ

5 ವರ್ಷದ ಬಾಲಕಿಯ ಹತ್ಯೆ

ಹುಬ್ಬಳ್ಳಿಯ ವಿಜಯನಗರ ಬಡಾವಣೆಯಲ್ಲಿ ಏಪ್ರಿಲ್​ 13 ರಂದು ಮನೆಯ ಕಂಪೌಂಡ್​ನಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಆರೋಪಿ ರಿತೇಶ್ ಕುಮಾರ್ ಪುಸಲಾಯಿಸಿ ಕರೆದುಕೊಂಡು ಹೋಗಿದ್ದನು. ನಂತರ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬಳಿಕ ಕತ್ತು ಹಿಸುಕಿ ಕೊಲೆ ಮಾಡಿದ್ದನು. ಬಾಲಕಿಯ ರೇಪ್ ಆ್ಯಂಡ್​ ಮರ್ಡರ್ ವಿಚಾರ ಇಡೀ ಹುಬ್ಬಳ್ಳಿ ನಗರದಲ್ಲಿ ಕಾಡ್ಗಿಚ್ಚಿನಂತೆ ಹಬ್ಬಿತ್ತು. ಹೀಗಾಗಿ, ಅಶೋಕ ನಗರ ಠಾಣೆ ಮುಂದೆ ಸೇರಿದಂತೆ ಹಲವಡೆ ದೊಡ್ಡ ಮಟ್ಟದ ಹೋರಾಟಗಳು ನಡೆದಿದ್ದವು. ಆರೋಪಿಯನ್ನು ಎನ್ಕೌಂಟರ್​ ಮಾಡುವಂತೆ ಸಾರ್ವಜನಿಕರು ಆಗ್ರಹಿಸಿದ್ದರು. ಸಾರ್ವಜನಿಕರು ಟೈರ್​ಗೆ ಬೆಂಕಿ ಹಚ್ಚಿ, ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದ್ದರು. ಆದರೆ, ಘಟನೆ ನಡೆದ ಒಂಬತ್ತು ಗಂಟೆಗಳಲ್ಲಿ ಆರೋಪಿ ಬಾರದ ಲೋಕಕ್ಕೆ ಹೋಗಿದ್ದನು.

ಇದನ್ನೂ ನೋಡಿ: ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ

ಪೊಲೀಸರು ಆರೋಪಿಯನ್ನು ಬಂಧಿಸಿ, ಸ್ಥಳ ಮಹಜರಿಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ತಪ್ಪಿಸಿಕೊಂಡು ಹೋಗಲು ಮುಂದಾಗಿದನು. ಈ ವೇಳೆ ಆರೋಪಿ ರಿತೇಶ್ ಕುಮಾರ್ ಮೇಲೆ ಅಶೋಕ ನಗರ ಠಾಣೆಯ ಪಿಎಸ್​ಐ ಅನ್ನಪೂರ್ಣ ಗುಂಡು ಹಾರಿಸಿದ್ದರು. ಆರೋಪಿ ರಿತೇಶ್​ ಕುಮಾರ್​ನನ್ನು ಕಿಮ್ಸ್​ಗೆ ಸಾಗಿಸುವ ಮುನ್ನವೇ ಹಂತಕನ ಉಸಿರು ನಿಂತಿತ್ತು. ಹೀಗಾಗಿ ಪೊಲೀಸರ ಕೆಲಸಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇನ್ನು ಪೈರಿಂಗ್ ನೆಡದ ಸ್ಥಳಕ್ಕೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎನ್​. ಶಶಿಕುಮಾರ್ ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:08 pm, Tue, 15 April 25