ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ವಿರೋಧ: ಅಂಜುಮನ್ ಸಂಸ್ಥೆ ಸಲ್ಲಿಸಿದ್ದ ಅರ್ಜಿ ವಜಾ

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ಹುಬ್ಬಳ್ಳಿ-ಧಾರವಾಡ ಪಾಲಿಕೆ ಠರಾವಿಗೆ ತಡೆಯಾಜ್ಞೆ ಕೋರಿ ಅಂಜುಮನ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್​​ ವಜಾಗೊಳಿಸಿದೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ವಿರೋಧ: ಅಂಜುಮನ್ ಸಂಸ್ಥೆ ಸಲ್ಲಿಸಿದ್ದ ಅರ್ಜಿ ವಜಾ
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ರಮೇಶ್ ಬಿ. ಜವಳಗೇರಾ

Updated on:Sep 15, 2023 | 2:53 PM

ಧಾರವಾಡ, (ಸೆಪ್ಟೆಂಬರ್ 15): ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ಹುಬ್ಬಳ್ಳಿ-ಧಾರವಾಡ ಪಾಲಿಕೆ ಠರಾವಿಗೆ ತಡೆಯಾಜ್ಞೆ ಕೋರಿ ಅಂಜುಮನ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್​​ ವಜಾಗೊಳಿಸಿದೆ.  ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಐದು ವರ್ಷಗಳ ಅನುಮತಿಗೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಠರಾವು ಪಾಸ್ ಮಾಡಿತ್ತು. ಇದನ್ನು ವಿರೋಧಿಸಿದ ಅಂಜುಮನ್ ಸಂಸ್ಥೆ, ಹುಬ್ಬಳ್ಳಿ-ಧಾರವಾಡ ಪಾಲಿಕೆ ಠರಾವಿಗೆ ತಡೆಯಾಜ್ಞೆ ನೀಡುವಂತೆ ಧಾರವಾಡ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಇಂದು (ಸೆಪ್ಟೆಂಬರ್ 15) ಈ ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಕೋರ್ಟ್, ಅಂಜುಮನ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೇ ಪಾಲಿಕೆ ಆಯುಕ್ತರಿಗೆ ಅರ್ಜಿ ಸಲ್ಲಿಸಿ ಎಂದು ಸೂಚನೆ ನೀಡಿದೆ.  ಇದರೊಂದಿಗೆ ವಿಘ್ನೇಶ್ವರನಿಗೆ ಎದುರಾಗಿದ್ದ ಒಂದು ಹಂತದ ವಿಘ್ನ ನಿವಾರಣೆಯಾದಂತಾಗಿದೆ.

ಇನ್ನು ಅಂಜುಮಾನ್​ ಸಂಸ್ಥೆಯ ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಇತ್ತ ಬಿಜೆಪಿ ಹಾಗೂ ಹಿಂದೂಪರ ಪರ ಸಂಘಟನೆ ಮುಖಂಡರು ಸಿಹಿ ಹಂಚಿ ಸಂಭ್ರಮಿಸಿದರು. ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹಾಗೂ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್​ ಸೇರಿದಂತೆ ಹಲವರು ಪರಸ್ಪರ ಸಿಹಿ ಹಂಚಿ ಸಂಭ್ರಮ ಪಟ್ಟರು.

ಇದನ್ನೂ ಓದಿ: ಸರ್ಕಾರದ ಕುಮ್ಮಕ್ಕಿನಿಂದ ಹು-ಧಾ ಪಾಲಿಕೆ ಆಯುಕ್ತರು ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡುತ್ತಿಲ್ಲ: ಮಹೇಶ್​ ಟೆಂಗಿನಕಾಯಿ

ಇನ್ನು ಇದೇ ವೇಳೆ ಮಾತನಾಡಿದ ಮುತಾಲಿಕ್, ಹಿಂದೂ ವಿರೋಧಿ ನೀತಿ ಕಾರಣಕ್ಕೆ ಕೋರ್ಟ್​ಗೆ ಹೋಗಿದ್ದಾರೆ. ಅಂಜುಮನ್ ಕಮೀಟಿ ಅವರು ಈ ನೆಲದ ಸಂಸ್ಕೃತಿಗೆ ವಿರೋಧ ಮಾಡಿದ್ದಾರೆ. ಅಂಜುಮನ್ ಕಮೀಟಿಯನ್ನು ನಾವು ಮೆಟ್ಟಿ ನಿಲ್ಲಬೇಕು. ಇದನ್ನು ಹಿಂದೂಗಳು ಅರ್ಥ ಮಾಡಕೊಬೇಕು ಎಂದರು.

ಅಂಜುಮನ್ ಕಮಿಟಿಯವರು ನೀವು ಈ ನೆಲದಲ್ಲಿ ಹುಟ್ಟಿದೀರಾ ಎಂದು ಪ್ರಶ್ನಿಸಿದ ಮುತಾಲಿಕ್, ಇದು ಪಾಕಿಸ್ತಾನ ಅಲ್ಲ,ಅಪಘಾನಿಸ್ತಾನ ಅಲ್ಲ. ನೀವು ಗಣೇಶನಿಗೆ ವಿರೋಧ ಮಾಡುವುದಕ್ಕೆ ಕ್ಷಮೆ ಇಲ್ಲ. ಮುಂದಿನ ದಿನ ನಮ್ಮ ತಾಕತ್ ತೋರಿಸುತ್ತೇವೆ. ನಮ್ಮ ಸಂಘಟನೆಗೆ ಗೆಲವು ಸಿಕ್ಕಿದ್ದು, 11 ದಿನ ಗಣೇಶ ಆಚರಣೆಗೆ ಅವಕಾಶ ಕೊಡಬೇಕೆಂದು ಆಗ್ರಹಿಸಿದರು.

ಹಿಂದೂ ಸಮಾಜ ಬಹಳ ಶಾಂತವಾಗಿದೆ. ಇವರು ನಮ್ಮ ತಲೆ ಮೇಲೆ ಕೂರುವುದಕ್ಕೆ ಹೊರಟಿದ್ದಾರೆ. ಇವತ್ತು ನ್ಯಾಯಾಲಯ ನಮಗೆ ಶಕ್ತಿ ಕೊಟ್ಟಿದೆ. ಈ‌ ದೇಶದ ನಿಲುವಿಗೆ ನೀವು ಬದ್ದರಾಗಿರಿ. ಕೋರ್ಟ್ ಗೆ ಹೋಗಿರೋದ ತಪ್ಪು. ಚೆನ್ನಮ್ಮ ಮೈದಾನ ಪಾಲಿಕೆ ಆಸ್ತಿ. ಕಳೆದ ವರ್ಷ ಹಬ್ಬ ಆಗಿದೆ. ಈ ಬಾರಿ ಯಾಕೆ ವಿರೋಧ ಎಂದ ಪ್ರಶ್ನಿಸಿದರು.

ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡುವಂತೆ ಪಟ್ಟು ಹಿಡಿದಿವೆ. ಆದ್ರೆ ಅನುಮತಿ ಕೊಟ್ರೆ ಕೋಮುಗಲಭೆಗೆ ಅವಕಾಶ ಮಾಡಿಕೊಟ್ಟಂತಾಗುತ್ತೆ ಅಂತ ಕೆಲ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:26 pm, Fri, 15 September 23

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?