ಹುಬ್ಬಳ್ಳಿಯಿಂದ ಶಬರಿಮಲೆಗೆ ವಿಶೇಷ ರೈಲು: ವೇಳಾಪಟ್ಟಿ ಮತ್ತು ನಿಲ್ದಾಣಗಳ ಮಾಹಿತಿ ಇಲ್ಲಿದೆ

ನೈಋತ್ಯ ರೈಲ್ವೆ, ಶಬರಿಮಲೆ ಯಾತ್ರಿಕರಿಗೆ ಅನುಕೂಲವಾಗುವಂತೆ ಹುಬ್ಬಳ್ಳಿ-ಕೊಟ್ಟಾಯಂ ನಡುವೆ ವಿಶೇಷ ರೈಲು ಸೇವೆಯನ್ನು ಪ್ರಾರಂಭಿಸಿದೆ. ನವೆಂಬರ್ 19 ರಿಂದ ಜನವರಿ 15ರವರೆಗೆ ಈ ರೈಲು ಸಂಚರಿಸಲಿದೆ. ವಾರಕ್ಕೊಮ್ಮೆ ಹೆಚ್ಚುವರಿ ರೈಲು ಸಹ ಸಂಚರಿಸಲಿದೆ.

ಹುಬ್ಬಳ್ಳಿಯಿಂದ ಶಬರಿಮಲೆಗೆ ವಿಶೇಷ ರೈಲು: ವೇಳಾಪಟ್ಟಿ ಮತ್ತು ನಿಲ್ದಾಣಗಳ ಮಾಹಿತಿ ಇಲ್ಲಿದೆ
ರೈಲು
Follow us
ವಿವೇಕ ಬಿರಾದಾರ
|

Updated on:Nov 17, 2024 | 9:16 AM

ಹುಬ್ಬಳ್ಳಿ, ನವೆಂಬರ್​ 17: ಶಬರಿಮಲೆ (Sabarimala) ಭಕ್ತರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ (South Westran Railway) ಕರ್ನಾಟಕದಿಂದ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ. ಮೂರು ತಿಂಗಳು ರೈಲು ಓಡಲಿದೆ. ಈ ಕುರಿತು ನೈಋತ್ಯ ರೈಲ್ವೆ ವಲಯವು ಸಾಮಾಜಿಕ ಮಾಧ್ಯಮ ಎಕ್ಸ್​ ಮುಖಾಂತರ ತಿಳಿಸಿದೆ.

ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಕೇರಳದ ಕೊಟ್ಟಾಯಂ ನಿಲ್ದಾಣಗಳ ನಡುವೆ ಒಂಬತ್ತು ಟ್ರಿಪ್ ವಿಶೇಷ ಎಕ್ಸ್​​ಪ್ರೆಸ್ ರೈಲು ಸೇವೆ ಒದಗಿಸಲು ನೈಋತ್ಯ ರೈಲ್ವೆ ತೀರ್ಮಾನಿಸಿದೆ.

  1. ರೈಲು ಸಂಖ್ಯೆ 07371 ಎಸ್​ಎಸ್​ಎಸ್​ ಹುಬ್ಬಳ್ಳಿ-ಕೊಟ್ಟಾಯಂ ವಿಶೇಷ ಎಕ್ಸ್​ಪ್ರೆಸ್​ ರೈಲು ನವೆಂಬರ್​ 19 ರಿಂದ 2025ರ ಜನವರಿ 14ರವರೆಗೆ ಸಂಚರಿಸಲಿದೆ.
  2. ರೈಲು ಸಂಖ್ಯೆ 07372 ಎಸ್​ಎಸ್​ಎಸ್​ ಹುಬ್ಬಳ್ಳಿ-ಕೊಟ್ಟಾಯಂ ವಿಶೇಷ ಎಕ್ಸ್​ಪ್ರೆಸ್​ ರೈಲು ನವೆಂಬರ್​ 20 ರಿಂದ 2025ರ ಜನವರಿ 15ರವರೆಗೆ ಸಂಚರಿಸಲಿದೆ.

2 ಎಸಿ ಟು ಐಉರ್​, 2 ಎಸಿ ತ್ರಿ ಟೈಯರ್​, 6 ಸ್ಲೀಪರ್​ ಕ್ಲಾಸ್​, 6 ಜನರಲ್​ ಸೆಕೆಂಡ್​ ಕ್ಲಾಸ್​ ಮತ್ತು 2 ಎಸ್​ಎಲ್​ಆರ್​ಡಿ ಸೇರಿದಂತೆ 18 ಬೋಗಿಗಳನ್ನು ಹೊಂದಿರಲಿದೆ.

ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ಹುಬ್ಬಳ್ಳಿ-ಬೆಂಗಳೂರು ರೈಲು ಸಮಯ ಬದಲಾವಣೆ

ವಾರಕ್ಕೊಮ್ಮೆ ವಿಶೇಷ ರೈಲು

ಹೆಚ್ಚುವರಿಯಾಗಿ ಇನ್ಮುಂದೆ ಹುಬ್ಬಳ್ಳಿ-ಕೊಟ್ಟಾಯಂ ನಡುವೆ ವಾರಕ್ಕೋಮ್ಮೆ ಒಂದು ವಿಶೇಷ ರೈಲು ಸಂಚರಲಿಸಲಿದೆ. ಈ ರೈಲು ಹುಬ್ಬಳ್ಳಿಯಿಂದ ಪ್ರತಿ ಮಂಗಳವಾರ ಹೊರಟು ಮರುದಿನ ಬುಧವಾರ ಕೊಟ್ಟಾಯಂ ತಲುಪಲಿದೆ.

  1. ರೈಲು ಸಂಖ್ಯೆ 07371 ಹುಬ್ಬಳ್ಳಿ-ಕೊಟ್ಟಾಯಂ ವಾರಕ್ಕೊಮ್ಮೆ ವಿಶೇಷ ರೈಲು ಪ್ರತಿ ಮಂಗಳವಾರ ಮಧ್ಯಾಹ್ನ 3:15ಕ್ಕೆ ಎಸ್​ಎಸ್​ಎಸ್ ಹುಬ್ಬಳ್ಳಿಯಿಂದ ಹೊರಟು ಮರುದಿನ ಬುಧವಾರ ಮಧ್ಯರಾತ್ರಿ 12ಕ್ಕೆ ಕೊಟ್ಟಾಯಂ ತಲುಪಲಿದೆ.
  2. ರೈಲು ಸಂಖ್ಯೆ 07372 ಕೊಟ್ಟಾಯಂ-ಹುಬ್ಬಳ್ಳಿ ವಾರಕ್ಕೊಮ್ಮೆ ವಿಶೇಷ ರೈಲು ಪ್ರತಿ ಮಂಗಳವಾರ ಮಧ್ಯರಾತ್ರಿ 12:50ಕ್ಕೆ ಕೊಟ್ಟಾಯಂನಿಂದ ಹೊರಟು ಮರುದಿನ ಬುಧವಾರ ಮಧ್ಯಾಹ್ನ 03:00ಕ್ಕೆ ಹುಬ್ಬಳ್ಳಿ ತಲುಪಲಿದೆ. ಈ ರೈಲು ಎಸಿ ಟು ಟೈಯರ್​​, ಎಸಿ ತ್ರೀ ಟೈಯರ್​​, ಸ್ಲೀಪರ್​​ ಕ್ಲಾಸ್​, ಜನರಲ್​ ಸೆಕೆಂಡ್​ ಕ್ಲಾಸ್​ ಮತ್ತು ಎಸ್​ಎಲ್​ಆರ್​ಡಿ ಬೋಗಿಗಳನ್ನು ಹೊಂದಿದೆ.

ಟ್ವಿಟರ್​ ಪೋಸ್ಟ್​

ಎಲ್ಲೆಲ್ಲಿ ನಿಲುಗಡೆ?

ಎಸ್​ಎಸ್​ಎಸ್​ ಹುಬ್ಬಳ್ಳಿ, ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸಿಕೆರೆ, ತುಮಕೂರು, ಚಿಕ್ಕಬಣಾವರ, ಎಸ್​ಎಂಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್​, ತಿರುಪ್ಪೂರು, ಪೋದನೂರು, ಪಾಲಕ್ಕಾಡ್​, ತ್ರಿಶೂರ್​, ಅಲುವ, ಎರ್ನಾಕುಲಂ ಟೌನ್​, ಎಟ್ಟುಮನೂರ್​ ಮತ್ತು ಕೊಟ್ಟಾಯಂ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ರೈಲುಗಳಗಳ ನಿಲುಗಡೆಗಳು ಮತ್ತು ಸಮಯಗಳ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​ ಆದ www.enquiry.indianrail.gov.in ಗೆ ಅಥವಾ NTES ಆ್ಯಪ್​ ಮೂಲಕ ಅಥವಾ 139ಕ್ಕೆ ಡಯಲ್​ ಮಾಡುವ ಮೂಲಕ ತಿಳಿದುಕೊಳ್ಳಬಹುದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:36 am, Sun, 17 November 24

ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?