
ಹುಬ್ಬಳ್ಳಿ, ನವೆಂಬರ್ 17: ಶಬರಿಮಲೆ (Sabarimala) ಭಕ್ತರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ (South Westran Railway) ಕರ್ನಾಟಕದಿಂದ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ. ಮೂರು ತಿಂಗಳು ರೈಲು ಓಡಲಿದೆ. ಈ ಕುರಿತು ನೈಋತ್ಯ ರೈಲ್ವೆ ವಲಯವು ಸಾಮಾಜಿಕ ಮಾಧ್ಯಮ ಎಕ್ಸ್ ಮುಖಾಂತರ ತಿಳಿಸಿದೆ.
ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಕೇರಳದ ಕೊಟ್ಟಾಯಂ ನಿಲ್ದಾಣಗಳ ನಡುವೆ ಒಂಬತ್ತು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆ ಒದಗಿಸಲು ನೈಋತ್ಯ ರೈಲ್ವೆ ತೀರ್ಮಾನಿಸಿದೆ.
2 ಎಸಿ ಟು ಐಉರ್, 2 ಎಸಿ ತ್ರಿ ಟೈಯರ್, 6 ಸ್ಲೀಪರ್ ಕ್ಲಾಸ್, 6 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್ಎಲ್ಆರ್ಡಿ ಸೇರಿದಂತೆ 18 ಬೋಗಿಗಳನ್ನು ಹೊಂದಿರಲಿದೆ.
ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ಹುಬ್ಬಳ್ಳಿ-ಬೆಂಗಳೂರು ರೈಲು ಸಮಯ ಬದಲಾವಣೆ
ಹೆಚ್ಚುವರಿಯಾಗಿ ಇನ್ಮುಂದೆ ಹುಬ್ಬಳ್ಳಿ-ಕೊಟ್ಟಾಯಂ ನಡುವೆ ವಾರಕ್ಕೋಮ್ಮೆ ಒಂದು ವಿಶೇಷ ರೈಲು ಸಂಚರಲಿಸಲಿದೆ. ಈ ರೈಲು ಹುಬ್ಬಳ್ಳಿಯಿಂದ ಪ್ರತಿ ಮಂಗಳವಾರ ಹೊರಟು ಮರುದಿನ ಬುಧವಾರ ಕೊಟ್ಟಾಯಂ ತಲುಪಲಿದೆ.
ಎಸ್ಎಸ್ಎಸ್ ಹುಬ್ಬಳ್ಳಿ, ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸಿಕೆರೆ, ತುಮಕೂರು, ಚಿಕ್ಕಬಣಾವರ, ಎಸ್ಎಂಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರು, ಪೋದನೂರು, ಪಾಲಕ್ಕಾಡ್, ತ್ರಿಶೂರ್, ಅಲುವ, ಎರ್ನಾಕುಲಂ ಟೌನ್, ಎಟ್ಟುಮನೂರ್ ಮತ್ತು ಕೊಟ್ಟಾಯಂ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ರೈಲುಗಳಗಳ ನಿಲುಗಡೆಗಳು ಮತ್ತು ಸಮಯಗಳ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಆದ www.enquiry.indianrail.gov.in ಗೆ ಅಥವಾ NTES ಆ್ಯಪ್ ಮೂಲಕ ಅಥವಾ 139ಕ್ಕೆ ಡಯಲ್ ಮಾಡುವ ಮೂಲಕ ತಿಳಿದುಕೊಳ್ಳಬಹುದು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:36 am, Sun, 17 November 24