AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಲವ್​​​ ಜಿಹಾದ್​ ಪ್ರಕರಣ: ಸಮೀರ್ ಲೀಲೆಗಳು ಒಂದೊಂದಾಗಿ ಬಯಲು: ಮತ್ತೊಂದು ವಿಡಿಯೋ ವೈರಲ್

ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣದಲ್ಲಿ ಜಿಮ್ ಟ್ರೈನರ್ ಸಮೀರ್ ಮುಲ್ಲಾ ಸಂತ್ರಸ್ತ ಯುವತಿಯರನ್ನು ಹಣಕ್ಕಾಗಿ ಬಳಸಿಕೊಂಡಿದ್ದು, 'ಎಟಿಎಂ'ನಂತೆ ದುರುಪಯೋಗ ಪಡಿಸಿಕೊಂಡಿದ್ದಾನೆ. ವಿಡಿಯೋ ವೈರಲ್ ಬೆದರಿಕೆಯೊಡ್ಡಿ ಲಕ್ಷಾಂತರ ಹಣ ವಸೂಲಿ ಮಾಡಿದ್ದಾನೆ. ಇದೀಗ ಇನ್ನೊಬ್ಬ ಯುವತಿ ಕೂಡ ದೌರ್ಜನ್ಯದ ಬಗ್ಗೆ ದೂರು ನೀಡಿದ್ದು, ಶ್ರೀರಾಮಸೇನೆ ಬೆಂಬಲಕ್ಕೆ ನಿಂತಿದೆ. ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ.

ಹುಬ್ಬಳ್ಳಿಯಲ್ಲಿ ಲವ್​​​ ಜಿಹಾದ್​ ಪ್ರಕರಣ: ಸಮೀರ್ ಲೀಲೆಗಳು ಒಂದೊಂದಾಗಿ ಬಯಲು: ಮತ್ತೊಂದು ವಿಡಿಯೋ ವೈರಲ್
ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣImage Credit source: Tv9 kannada
ಸಂಜಯ್ಯಾ ಚಿಕ್ಕಮಠ
| Edited By: |

Updated on:Apr 06, 2026 | 6:26 AM

Share

ಹುಬ್ಬಳ್ಳಿ, ಏ.6: ಹುಬ್ಬಳ್ಳಿ ಲವ್​​​ ಜಿಹಾದ್​ ಪ್ರಕರಣಕ್ಕೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಮೀರ್ ಲೀಲೆಗಳು ಒಂದೊಂದಾಗಿ ಬಯಲು ಆಗುತ್ತಿದೆ. ಜಿಮ್​​​​ ಟ್ರೈನರ್​ ಮಾಡಿದ ಒಂದೊಂದು ಕಹಾನಿಯ ಬಗ್ಗೆ ದಿನಕ್ಕೊಂದು ಹುಡುಗಿಯರು ಬಂದು ದೂರು ನೀಡುತ್ತಿದ್ದಾರೆ. ಇದೀಗ ಮತ್ತೊಂದು ಹುಡುಗಿ ಬಂದು ದೂರು ನೀಡಿದ್ದಾರೆ. ಈ ಬಗ್ಗೆ ಸಂಪೂರ್ಣ ವರದಿ ಇಲ್ಲಿದೆ ನೋಡಿ. ಇದರ ಜತೆಗೆ ಈಗಾಗಲೇ ದೂರು ನೀಡಿರುವ ಸಂತ್ರಸ್ತ ಯುವತಿಯನ್ನು ತನ್ನ ಐಷಾರಾಮಿ ಜೀವನಕ್ಕಾಗಿ ‘ಎಟಿಎಂ’ ತರಹ ಬಳಸಿಕೊಂಡಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಆರೋಪಿ ಸಮೀರ್ ಮುಲ್ಲಾ ಸಂತ್ರಸ್ತ ಯುವತಿಯಿಂದ ಕಳೆದ ಎರಡು ವರ್ಷಗಳಲ್ಲಿ ಸಾವಿರಾರು ರೂಪಾಯಿಗಳನ್ನು ಹಣ ಪಡೆದಿದ್ದಾನೆ. 30 ರೂಪಾಯಿಯಿಂದ ಹಿಡಿದು 25 ಸಾವಿರ ರೂಪಾಯಿವರೆಗೆ ಫೋನ್ ಪೇ (PhonePe) ಮೂಲಕ ಹಣ ಹಾಕಿಸಿಕೊಂಡಿರುವ ಸ್ಕ್ರೀನ್‌ಶಾಟ್‌ಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. “ನಿನ್ನ ವಿಡಿಯೋಗಳನ್ನು ವೈರಲ್ ಮಾಡುತ್ತೇನೆ” ಎಂದು ಬೆದರಿಸಿ ಯುವತಿಯಿಂದ ಹಣ ಕೀಳುತ್ತಿದ್ದ ಎನ್ನಲಾಗಿದೆ. ಬ್ರ್ಯಾಂಡೆಡ್ ಬಟ್ಟೆಗಳನ್ನು ಧರಿಸಲು ಮತ್ತು ಹೈಫೈ ಜೀವನ ನಡೆಸಲು ಯುವತಿಯ ಹಣವನ್ನೇ ಈತ ಬಳಸುತ್ತಿದ್ದನು.

ಇದನ್ನೂ ಓದಿ: ಹುಬ್ಬಳ್ಳಿ ಲವ್ ಜಿಹಾದ್ ಕೇಸ್​ಗೆ ಟ್ವಿಸ್ಟ್: ಯುವಕನ ವಿರುದ್ಧ ದೂರು ಬೆನ್ನಲ್ಲೇ ಯುವತಿಯ ವಿಡಿಯೋಗಳು ವೈರಲ್

ಕೇವಲ ಈ ಸಂತ್ರಸ್ತ ಯುವತಿ ಮಾತ್ರವಲ್ಲದೆ, ಜಿಮ್‌ಗೆ ಬರುತ್ತಿದ್ದ ಇನ್ನೋರ್ವ ಹಿಂದೂ ಧರ್ಮದ ಯುವತಿಯೊಂದಿಗೂ ಸಮೀರ್ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಆಕೆಯ ಮೇಲೆಯೂ ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೋ ಮಾಡಿಟ್ಟುಕೊಂಡಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಶ್ರೀರಾಮಸೇನೆ ಸಂಘಟನೆ ದೌರ್ಜನ್ಯಕ್ಕೊಳಗಾದ ಇನ್ನೊಬ್ಬ ಯುವತಿಯನ್ನು ಭೇಟಿಯಾಗಲು ಸಂಘಟನೆಯ ಕಾರ್ಯಕರ್ತರು ಯತ್ನಿಸುತ್ತಿದ್ದಾರೆ. “ಧೈರ್ಯವಾಗಿ ಮುಂದೆ ಬಂದು ದೂರು ನೀಡಿ, ನಾವು ನಿಮ್ಮ ಜೊತೆಗಿದ್ದೇವೆ” ಎಂದು ಸಂಘಟನೆಯ ಮುಖಂಡರು ಯುವತಿಯ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:21 am, Mon, 6 April 26

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!