AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣ: ಮತ್ತೆರಡು ಸ್ಫೋಟಕ ವಿಡಿಯೋ ಬಿಡುಗಡೆ! ಕಾಂಗ್ರೆಸ್ ಮುಖಂಡನ ಕೈವಾಡ ಇದೆ ಎಂದ ಯುವತಿ

ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸಂತ್ರಸ್ತ ಯುವತಿ ಹೊಸ ವಿಡಿಯೋಗಳ ಮೂಲಕ ಬ್ಲ್ಯಾಕ್‌ಮೇಲ್ ಮತ್ತು ಸ್ಥಳೀಯ ಕಾಂಗ್ರೆಸ್ ನಾಯಕನ ಕೈವಾಡದ ಬಗ್ಗೆ ಆರೋಪಿಸಿದ್ದಾರೆ. ಹಳೆಯ ಖಾಸಗಿ ವಿಡಿಯೋಗಳನ್ನು ಬಳಸಿ ಆರೋಪಿ ಮುಪಿಜ್ ಮಿಯಾನವರ ಬೆದರಿಸುತ್ತಿದ್ದು, ಈಗ ಅವುಗಳನ್ನು ವೈರಲ್ ಮಾಡಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಯುವತಿ ಸ್ಪಷ್ಟಪಡಿಸಿದ್ದಾರೆ. ಇದು ನಗರದಲ್ಲಿ ಆತಂಕ ಮೂಡಿಸಿದೆ.

ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣ: ಮತ್ತೆರಡು ಸ್ಫೋಟಕ ವಿಡಿಯೋ ಬಿಡುಗಡೆ! ಕಾಂಗ್ರೆಸ್ ಮುಖಂಡನ ಕೈವಾಡ  ಇದೆ ಎಂದ ಯುವತಿ
ಕಾಂಗ್ರೆಸ್ ಮುಖಂಡ ಆರೋಪ
ಸಂಜಯ್ಯಾ ಚಿಕ್ಕಮಠ
| Edited By: |

Updated on:Apr 06, 2026 | 9:58 AM

Share

ಹುಬ್ಬಳ್ಳಿ, ಏ.6: ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಟ್ವಿಸ್ಟ್​​​ ಪಡೆಯುತ್ತಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆರಡು ವಿಡಿಯೋಗಳನ್ನು ಯುವತಿ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಕಾಂಗ್ರೆಸ್​​​​ ಮುಖಂಡನ ಕೈವಾಡ ಇದೆ ಎಂದು ಆರೋಪ ಮಾಡಲಾಗಿದೆ. ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ದಾಖಲಾಗಿರುವ ಎರಡನೇ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯು ಮತ್ತೊಮ್ಮೆ ವಿಡಿಯೋ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ. ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವಿಡಿಯೋಗಳ ಸತ್ಯಾಸತ್ಯತೆಯನ್ನು ಅವರು ಬಿಚ್ಚಿಟ್ಟಿದ್ದಾರೆ.

“ನಿನ್ನೆ ವೈರಲ್ ಆಗಿರುವ ವಿಡಿಯೋಗಳು ಸುಮಾರು ಒಂದು ವರ್ಷದ ಹಿಂದಿನವು. ಆರೋಪಿ ಮುಪಿಜ್ ಮಿಯಾನವರ ನನ್ನ ಖಾಸಗಿ ಕ್ಷಣಗಳ ವಿಡಿಯೋವನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ. ಆತ ಹೇಳಿದಂತೆ ನಾನು ವಿಡಿಯೋದಲ್ಲಿ ಮಾತನಾಡದಿದ್ದರೆ ಆ ದೃಶ್ಯಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ಆತನ ಒತ್ತಾಯಕ್ಕೆ ಮಣಿದು ನಾನು ಅಂದು ಆತನ ಪರವಾಗಿ ವಿಡಿಯೋ ಮಾಡಿದ್ದೆ. ಆದರೆ ಈಗ ಅದನ್ನೇ ಬಳಸಿಕೊಂಡು ನನ್ನ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ” ಎಂದು ಯುವತಿ ಅಳಲು ತೋಡಿಕೊಂಡಿದ್ದಾರೆ.

ಇನ್ನು ವಿಡಿಯೋ ವೈರಲ್ ಮಾಡುವ ಹಿಂದೆ ಸ್ಥಳೀಯ ಕಾಂಗ್ರೆಸ್ ಮುಖಂಡನ ಕೈವಾಡವಿದೆ ಎಂದು ಯುವತಿ ಗಂಭೀರ ಆರೋಪ ಮಾಡಿದ್ದಾರೆ. “ಅಣ್ಣಾ, ನನಗೆ ಅನ್ಯಾಯವಾದಾಗ ಬಂದು ನನ್ನ ನೋವನ್ನು ಒಮ್ಮೆಯೂ ಕೇಳದ ನೀವು, ಈಗ ಹಳೆ ವಿಡಿಯೋಗಳನ್ನು ವೈರಲ್ ಮಾಡಿಸುತ್ತಿದ್ದೀರಿ. ನಿಮ್ಮ ಮನೆಯವರಿಗೆ ಅಥವಾ ನಿಮ್ಮ ಮಗಳಿಗೆ ಹೀಗಾಗಿದ್ದರೆ ನೀವು ಸುಮ್ಮನಿರುತ್ತಿದ್ದೀರಾ?” ಎಂದು ಯುವತಿ ಆಕ್ರೋಶಭರಿತವಾಗಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಲವ್​​​ ಜಿಹಾದ್​ ಪ್ರಕರಣ: ಸಮೀರ್ ಲೀಲೆಗಳು ಒಂದೊಂದಾಗಿ ಬಯಲು: ಮತ್ತೊಂದು ವಿಡಿಯೋ ವೈರಲ್

ಕೇಶ್ವಾಪುರ ಠಾಣೆಯಲ್ಲಿ ಮುಪಿಜ್ ವಿರುದ್ಧ ಈಗಾಗಲೇ ದೂರು ದಾಖಲಾಗಿದೆ. ಈ ಹಿಂದೆ ಜಿಮ್ ಟ್ರೈನರ್ ಸಮೀರ್ ಮುಲ್ಲಾ ಪ್ರಕರಣದ ಬೆನ್ನಲ್ಲೇ ಈ ಎರಡನೇ ಪ್ರಕರಣ ಬೆಳಕಿಗೆ ಬಂದಿರುವುದು ನಗರದಲ್ಲಿ ಆತಂಕ ಮೂಡಿಸಿದೆ. ಹಳೆಯ ವಿಡಿಯೋಗಳನ್ನು ಬಳಸಿ ಪ್ರಕರಣದ ದಿಕ್ಕು ತಪ್ಪಿಸಲು ಯತ್ನಿಸಲಾಗುತ್ತಿದೆ ಎಂದು ಸಂತ್ರಸ್ತೆಯ ಪರವಾಗಿ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:22 am, Mon, 6 April 26

Follow Us