AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಒಬ್ಬ ವ್ಯಕ್ತಿ ಹೆಸರಲ್ಲಿ ಐದಾರು ಸಿಮ್: ಪಾಕ್ ಪರ ಕೃತ್ಯಕ್ಕೆ ಬಳಸಿರುವ ಅನುಮಾನ ವ್ಯಕ್ತಪಡಿಸಿದ ಬೆಲ್ಲದ್

ಹುಬ್ಬಳ್ಳಿ-ಧಾರವಾಡದಲ್ಲಿ ಒಬ್ಬ ವ್ಯಕ್ತಿಯ ಹೆಸರಿನಲ್ಲಿ ಅತಿ ಹೆಚ್ಚು ಸಿಮ್ ಕಾರ್ಡ್‌ಗಳು ಮಾರಾಟವಾಗಿರುವುದರಿಂದ ರಾಷ್ಟ್ರೀಯ ಭದ್ರತೆಗೆ ಅಪಾಯವಿದೆ ಎಂದು ವಿರೋಧ ಪಕ್ಷದ ಉಪನಾಯಕರು ಆರೋಪಿಸಿದ್ದಾರೆ. ಪಾಕಿಸ್ತಾನ ಸಂಪರ್ಕದ ಅನುಮಾನವಿದೆ ಎಂದು ಅವರು ಹೇಳಿದ್ದು, ಈ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಪೊಲೀಸರ ನಿಷ್ಕ್ರಿಯತೆಗೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಒಬ್ಬ ವ್ಯಕ್ತಿ ಹೆಸರಲ್ಲಿ ಐದಾರು ಸಿಮ್: ಪಾಕ್ ಪರ ಕೃತ್ಯಕ್ಕೆ ಬಳಸಿರುವ ಅನುಮಾನ ವ್ಯಕ್ತಪಡಿಸಿದ ಬೆಲ್ಲದ್
ಅರವಿಂದ್ ಬೆಲ್ಲದ್
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: Ganapathi Sharma|

Updated on:May 19, 2025 | 12:41 PM

Share

ಹುಬ್ಬಳ್ಳಿ, ಮೇ 19: ಹುಬ್ಬಳ್ಳಿ ಧಾರವಾಡ (Hubballi-Dharwad) ನಗರದಲ್ಲಿ ಮೇ 2 ರಿಂದ 10 ರವರಗೆ ಒಬ್ಬನೇ ವ್ಯಕ್ತಿಯ ಹೆಸರಿನಲ್ಲಿ ಅತಿ ಹೆಚ್ಚು ಸಿಮ್​​ಗಳು ಮಾರಾಟವಾಗಿವೆ. ಅನೇಕ ಅಂಗಡಿಗಳಲ್ಲಿ ಹೆಚ್ಚಿನ ಸಿಮ್ ಮಾರಾಟವಾಗಿದ್ದರ ಬಗ್ಗೆ ಮಾಹಿತಿ ಇದೆ. ಯಾರು ಖರೀದಿ ಮಾಡಿದ್ದಾರೆ, ಯಾಕೆ ಖರೀದಿ ಮಾಡಿದ್ದಾರೆ, ದೇಶದ್ರೋಹಿ ಕೆಲಸಕ್ಕೆ ಅಥವಾ ಪಾಕಿಸ್ತಾನ ಪರ ಚಟುವಟಿಕೆಗಳಿಗೆ ಆ ಸಿಮ್ ಬಳಕೆಯಾಗುತ್ತಿದೆಯಾ ಎಂಬ ಬಗ್ಗೆ ತನಿಖೆ ಮಾಡಬೇಕಿದೆ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ (Arvind Bellad) ಆಗ್ರಹಿಸಿದ್ದಾರೆ.

ಹುಬ್ಬಳ್ಳಿ ಧಾರವಾಡ ದಲ್ಲಿ ಪಾಕಿಸ್ತಾನಿ ಪ್ರಜೆಗಳು ಇದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮೇ 10 ಕ್ಕೆ ಈ ಸಂಬಂಧ ಧಾರವಾಡದ ಆಯುಕ್ತ ಶಶಿಕುಮಾರ್ ಅವರಿಗೆ ಪತ್ರ ಬರೆದಿದ್ದೆ. ಕೆಲವು ಮಸೀದಿಗಳಿಗೆ ಅಪರಿಚಿತರು ಬರುತ್ತಿದ್ದಾರೆ. ಅವರು ನಮ್ಮ ದೇಶದವರು ಅನಿಸುತ್ತಿಲ್ಲ. ಪಾಕಿಸ್ತಾನ ದವರು ಇರಬಹುದು ಎಂದು ಮಾಹಿತಿ ನೀಡಿದ್ದೆ. ಕಮಿಷನರ್ ಮಾತ್ರವಲ್ಲದೆ ಗೃಹ ಸಚಿವರಿಗೂ ಪತ್ರ ಬರೆದಿದ್ದೆ. ಇವತ್ತಿನವರಗೆ ಯಾವುದೇ ಕ್ರಮವನ್ನು ಪೊಲೀಸರು ಕೈಗೊಂಡಿಲ್ಲ ಎಂದು ಬೆಲ್ಲದ್ ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಪೊಲೀಸರು ವಸೂಲಿ ದಂಧೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಸಿಎಂ ಮಾಹಿತಿ ಪಡೆದು ಕ್ರಮ ಕೈಗೊಳ್ಳಬೇಕು ಎಂದು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.

ಇದನ್ನೂ ಓದಿ
Image
ಕೇಂದ್ರ ಕೊಟ್ಟ ಹಣ ಬಳಸುವಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ವಿಫಲ: ಜೋಶಿ
Image
ಮಳೆ ಅಬ್ಬರಕ್ಕೆ ಶಾಂತಿನಗರದಲ್ಲಿ ಭಾಗಶಃ ಮುಳುಗಿದ ಬಸ್​ಗಳು
Image
ಭಾರಿ ಮಳೆಗೆ ಬೆಂಗಳೂರು ಹೈರಾಣ, ಹಲವೆಡೆ ಸಂಚಾರಕ್ಕೆ ಅಡಚಣೆ: ಇಲ್ಲಿದೆ ವಿವರ
Image
ಹುಬ್ಬಳ್ಳಿ-ಧಾರವಾಡದ ಕೆಲ ಮಸೀದಿಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ

ಎಷ್ಟು ಜನ ಪಾಕಿಸ್ತಾನಿ ಪ್ರಜೆಗಳನ್ನು ಮರಳಿ ಅವರ ದೇಶಕ್ಕೆ ಕಳುಹಿಸಲಾಗಿದೆ? ವಿಸಾ ಇಲ್ಲದ ಎಷ್ಟು ಪಾಕಿಸ್ತಾನಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪ್ರಶ್ನಿಸಿರುವ ಬೆಲ್ಲದ್, ಮಾಹಿತಿ ನೀಡಿದರೂ ಕೂಡಾ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗೃಹ ಮಂತ್ರಿಗಳಿಗೆ ಹಾಗೂ ಕಮಿಷನರ್​​ಗೆ ಪತ್ರ ಬರೆದ ವಿಚಾರವನ್ನು ಮತ್ಯಾರಿಗೂ ಇದನ್ನು ಹೇಳಿರಲಿಲ್ಲ. ಮಾಧ್ಯಮಗಳಿಗೂ ಪತ್ರ ಬಿಡುಗಡೆ ಮಾಡಿರಲಿಲ್ಲ. ಆದರೆ ಪತ್ರ ಬರೆದು ಎಂಟು ದಿನಗಳಾದ ನಂತರ ಅದು ಬಹಿರಂಗವಾಗಿದೆ. ಬಹುಶಃ ಕಮಿಷನರ್ ಕಚೇರಿಯಿಂದಲೇ ಲೀಕ್ ಆಗಿರಬಹುದು. ಆದರೆ ಆಯುಕ್ತರು ಇದರ ಬಗ್ಗೆ ನನಗೇನೂ ಗೊತ್ತಿಲ್ಲ ಎಂದಿದ್ದಾರೆ. ಇದೊಂದು ಬೇಜವಾಬ್ದಾರಿ ಹೇಳಿಕೆ ಎಂದು ಬೆಲ್ಲದ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡದ ಕೆಲ ಮಸೀದಿಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ: ಪೊಲೀಸರಿಗೆ ಬೆಲ್ಲದ್ ಪತ್ರ

ಇಷ್ಟೊಂದು ಗಂಭೀರವಾದ ಆರೋಪ ಮಾಡಿದ್ದೇನೆ. ಆದರೂ ಅವರು ಏನು ಕ್ರಮ ಕೈಗೊಂಡರು ಎಂಬುದನ್ನು ಹೇಳಿಲ್ಲ. ವಿಚಾರಣೆ ಮಾಡಬೇಕೆಂಬ ಮನಸ್ಥಿತಿಯೂ ಅವರಲ್ಲಿಲ್ಲ. ಇದು ಕಾಂಗ್ರೆಸ್ ಸರಕಾರದ ಆಡಳಿತ ವೈಖರಿ ಎಂದು ಬೆಲ್ಲದ್ ಭಾನುವಾರ ಕಿಡಿ ಕಾರಿದ್ದರು.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:38 pm, Mon, 19 May 25

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ