AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಯಕ್ತಿಕ ಕಾರಣಕ್ಕೆ ಆದ ಕೊಲೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ನೇಹಾ ತಂದೆ, ಕಾಂಗ್ರೆಸ್​ ಕಾರ್ಪೊರೇಟರ್​ ನಿರಂಜನ್​ ಆಕ್ರೋಶ

ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಬಿವಿಬಿ ಕಾಲೇಜು ಆವರಣದಲ್ಲಿ ಗುರುವಾರ ಮಧ್ಯಾಹ್ನ ಎಂಸಿಎ ವಿದ್ಯಾರ್ಥಿನಿ ನೇಹಾ ಎಂಬುವರನ್ನು ಫಯಾಜ್​ ಕೊಲೆ ಮಾಡಿದ್ದನು. ಕೊಲೆ ಪ್ರಕರಣ ಸಂಬಂಧ ವಿದ್ಯಾನಗರ ಪೊಲೀಸರು ಆರೋಪಿ ಫಯಾಜನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಇದು ವೈಯಕ್ತಿಕ ಕಾರಣಕ್ಕೆ ನಡೆದ ಕೊಲೆ ಎಂದರು. ಸಿಎಂ ಅವರ ಈ ಹೇಳಿಕೆಯನ್ನು ನೇಹಾ ತಂದೆ, ಕಾಂಗ್ರೆಸ್​ ಕಾರ್ಪೊರೇಟರ್​ ನಿರಂಜನ್​ ಹಿರೇಮಠ ವಿರೋಧಿಸಿದ್ದಾರೆ.

ವೈಯಕ್ತಿಕ ಕಾರಣಕ್ಕೆ ಆದ ಕೊಲೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ನೇಹಾ ತಂದೆ, ಕಾಂಗ್ರೆಸ್​ ಕಾರ್ಪೊರೇಟರ್​ ನಿರಂಜನ್​ ಆಕ್ರೋಶ
ನೇಹಾ ತಂದೆ ನಿರಂಜನ ಹಿರೇಮಠ, ಸಿದ್ದರಾಮಯ್ಯ
TV9 Web
| Updated By: ವಿವೇಕ ಬಿರಾದಾರ|

Updated on:Apr 19, 2024 | 2:44 PM

Share

ಹುಬ್ಬಳ್ಳಿ, ಏಪ್ರಿಲ್​ 19: ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ಕೊಲೆ (Student Neha) ವೈಯಕ್ತಿಕ ಕಾರಣಕ್ಕೆ ಆಗಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramiah) ಹೇಳಿಕೆಗೆ ನೇಹಾ ತಂದೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (HDMC) ಕಾಂಗ್ರೆಸ್ ​ಸದಸ್ಯ (Congress Corporator) ನಿರಂಜನ್​ ಹಿರೇಮಠ (Niranjan Hiremath) ವಿರೋಧ ವ್ಯಕ್ತಪಡಿಸಿದ್ದಾರೆ. ಇದು ವೈಯಕ್ತಿಕ ಕಾರಣಕ್ಕೆ ಆಗಿರುವ ಕೊಲೆ ಅಲ್ಲ. ನಾನು ಕಾರ್ಪೊರೇಟರ್, ನನಗೆ ಹೀಗಾದರೆ ಬೇರೆಯವರ ಕಥೆ ಏನು? ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಕೆ ಹೀಗೆ ಹೇಳಿಕೆ ನೀಡುತ್ತಿದ್ದಾರೆ. ನಮಗೂ ಅವರ ಕುಟುಂಬಕ್ಕೂ ಏನು ಸಂಬಂಧ? ತನಿಖೆ ದಿಕ್ಕು ತಪ್ಪಿಸಬೇಡಿ, ಇದು ವೈಯಕ್ತಿಕ ಕಾರಣಕ್ಕೆ ಆದ ಹತ್ಯೆಯಲ್ಲ ಎಂದು ನೇಹಾ ತಂದೆ ನಿರಂಜನ್ ಹಿರೇಮಠ ಹೇಳಿದರು.

ಮಣ್ಣಲ್ಲಿ ಮಣ್ಣಾದ ನೇಹಾ ಹಿರೇಮಠ

ಗುರುವಾರ ಮಧ್ಯಾಹ್ನ ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಬಿವಿಬಿ ಕಾಲೇಜಿನ ಆವರಣದಲ್ಲಿ ದುಷ್ಕರ್ಮಿ ಫಯಾಜ್​ ಕೈಯಲ್ಲಿ ನೇಹಾ ಹಿರೇಮಠ ಎಂಬ ಎಂಸಿಎ ವಿದ್ಯಾರ್ಥಿನಿ ಕೊಲೆಯಾದಳು. ನೇಹಾ ಹಿರೇಮಠ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯ ನಿರಂಜನ್​ ಹಿರೇಮಠ ಅವರ ಮಗಳು. ಇಂದು (ಏ.19) ವೀರಶೈವ ಜಂಗಮ ವಿಧಿವಿಧಾನಗಳಂತೆ ಮಂಟೂರು ರಸ್ತೆ ಕಲಬುರಗಿ ಮಠದ ರುದ್ರಭೂಮಿಯಲ್ಲಿ ನೇಹಾ ಹಿರೇಮಠ ಅವರ ಅಂತ್ಯಸಂಸ್ಕಾರ ನೆರವೇರಿತು. ಬದುಕಿ ಬಾಳ ಬೇಕಿದ್ದ ಕಟ್ಟುಕೊಳ್ಳಬೇಕಿದ್ದ ನೇಹಾ ಹಿರೇಮಠ ದಾರುಣ ಅಂತ್ಯ ಕಂಡಿದ್ದಂತು ದುರಂತ.

ನೇಹಾ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ

ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಕೊಲೆಯನ್ನು ಖಂಡಿಸಿ  ಅಖಿಲ ಭಾರತ ವಿದ್ಯಾರ್ಥಿ ಪರಿಷತ್​ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು. ಹುಬ್ಬಳ್ಳಿ, ರಾಯಚೂರು, ಬೆಳಗಾವಿ, ಬೆಂಗಳೂರು ಹೀಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿತು.

ಹುಬ್ಬಳ್ಳಿಯಲ್ಲಿನ ಎಲ್ಲ ಕಾಲೇಜುಗಳನ್ನು ಬಂದ್​ ಮಾಡುವಂತೆ ಎಬಿವಿಪಿ ಕರೆನೀಡಿತು. ಅಲ್ಲದೆ ನಗರದ ಎಲ್ಲ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಹೇಳಿತ್ತು. ಎಬಿವಿಪಿ ಕರೆಗೆ ಓಗೊಟ್ಟ ವಿದ್ಯಾರ್ಥಿಗಳು ಇಂದು (ಏ.19) ಕಾಲೇಜಿಗೆ ಹೋಗದೆ ಪ್ರತಿಭಟನೆಯಲ್ಲಿ ಭಾಗವಹಿಸಿದರು.

ಇದನ್ನೂ ಓದಿ: ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಬೊಮ್ಮಾಯಿ, ಮುತಾಲಿಕ್​ ವಾಗ್ದಾಳಿ

ಎಬಿವಿಪಿ ಕಾರ್ಯಕರ್ತರು ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆರೋಪಿ ಫಯಾಜ್​ನನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿದರು. ವಿದ್ಯಾರ್ಥಿನಿ ಕೊಲೆ ಪ್ರಕರಣವನ್ನ ಸರ್ಕಾರದ ಗಂಭೀರವಾಗಿ ಪರಿಗಣಿಸಬೇಕು. ನೇಹಾ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿದರು.

ರಾಯಚೂರು ಎಬಿವಿಪಿ ಘಟಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿತು. ಕಾಲೇಜು ಕ್ಯಾಂಪಸ್ ಬಳಿ ಸೂಕ್ತ ಭದ್ರತೆ ಒದಗಿಸುವಂತೆ ಒತ್ತಾಯಿಸಿತು. ಪ್ರಕರಣವನ್ನು ಸಿಬಿಐಗೆ ನೀಡುವಂತೆ  ಜಿಲ್ಲಾಧಿಕಾರಿಗಳಿಗೆ ದೂರು ನೀಡಿದರು.

ಹತ್ಯೆ ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದರು.

ಘಟನೆ ಖಂಡಿಸಿದ ಕಾಂಗ್ರೆಸ್ ಶಾಸಕ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ್ ಅವರ ಪುತ್ರಿ ನೇಹಾ ಸಾವು ಮನಸಿಗೆ ನೋವು, ಆಘಾತ ಉಂಟು ಮಾಡಿದೆ. ಈ ಘಟನೆಯನ್ನ ದೊಡ್ಡ ಪ್ರಮಾಣದಲ್ಲಿ ಖಂಡಿಸುತ್ತೇವೆ. ನನಗೂ ಓರ್ವ ಹೆಣ್ಣು ಮಗಳಿದ್ದಾಳೆ ತಂದೆಯ ಸ್ಥಾನದಲ್ಲಿ ನಿಂತು ಇದನ್ನು ಖಂಡಿಸುತ್ತೇನೆ. ಆರೋಪಿಗೆ ತಕ್ಕ ಶಿಕ್ಷೆ ನೀಡಬೇಕು. ಈಗಾಗಲೇ ಕಠಿಣ ಶಿಕ್ಷೆ ವಿಧಿಸುತ್ತೇವೆ ಅಂತ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ಸವದತ್ತಿ ಕ್ಷೇತ್ರದ ಶಾಸಕ ವಿಶ್ವಾಸ ವೈದ್ಯ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:33 pm, Fri, 19 April 24