AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ನೇಹಾ ಹಿರೇಮಠ ಕೊಲೆ ಪ್ರಕರಣ: ಹಂತಕ ಫಯಾಜ್ ಜಾಮೀನು ಅರ್ಜಿ ವಜಾ

Hubballi Neha Hiremath Murder Case: ಕರ್ನಾಟಕದಾದ್ಯಂತ ಭಾರೀ ಸುದ್ದಿಯಾಗಿದ್ದ ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕ ಫಯಾಜ್ ಗೆ ಕೋರ್ಟ್​ ಶಾಕ್ ಕೊಟ್ಟಿದೆ. ಕಾಲೇಜಿನೊಳಗೆ ನುಗ್ಗಿ ನೇಹಾಳನ್ನು ಹತ್ಯೆಗೈದಿದ್ದ ಫಯಾಜ್ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್‌ ಪೀಠ ಸಹ ವಜಾ ಮಾಡಿದೆ.

ಹುಬ್ಬಳ್ಳಿ ನೇಹಾ ಹಿರೇಮಠ ಕೊಲೆ ಪ್ರಕರಣ: ಹಂತಕ ಫಯಾಜ್ ಜಾಮೀನು ಅರ್ಜಿ ವಜಾ
Neha Hiremath-fayaz
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ರಮೇಶ್ ಬಿ. ಜವಳಗೇರಾ|

Updated on: Sep 03, 2025 | 2:58 PM

Share

ಧಾರವಾಡ, (ಸೆಪ್ಟೆಂಬರ್ 03): ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣದ (Neha Hiremath Murder Case) ಆರೋಪಿ ಫಯಾಜ್ ( accused fayaz)ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್​ ಪೀಠ ವಜಾಗೊಳಿಸಿದೆ. 2024ರ ಏಪ್ರಿಲ್ 18ರಂದು ನಡೆದಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸಹ ತಿರಸ್ಕೃತಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ (Dharwad High Court) ಸಹ ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಹಂತಕ ಫಯಾಜ್ ಗೆ ಜೈಲೇ ಗತಿ.

2024ರ ಏಪ್ರಿಲ್ 18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಹಾಳನ್ನು ಫಯಾಜ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಈ ಸಂಬಂಧ ಜೈಲಿನಲ್ಲಿರುವ ಫಯಾಜ್, ಜಾಮೀನಿಗಾಗಿ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ. ಈ ಅರ್ಜಿ ವಿಚಾರಣೆ ನಡೆಸಿದ್ದ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಕೋರ್ಟ್, ಜಾಮೀನು ನೀಡಲು ನಿರಾಕರಿಸಿತ್ತು. ಈ ಸಂಬಂಧ ಇದನ್ನ ಪ್ರಶ್ನಿಸಿ ಧಾರವಾಡ ಹೈಕೋರ್ಟ್ ಮೊರೆ ಹೋಗಿದ್ದ. ಆದ್ರೆ, ಇಂದು ಧಾರವಾಡ ಕೋರ್ಟ್ ಸಹ ಫಯಾಜ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ: ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ 

ಪ್ರಕರಣದ ಹಿನ್ನೆಲೆ

ಏಪ್ರಿಲ್ 18, 2024ರಂದು, ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ 24 ವರ್ಷದ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ ಹತ್ಯೆ ನಡೆದಿತ್ತು. ಫಯಾಜ್ ಎನ್ನುವ ಯುವಕ 10 ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಹಿರಿದು ನೇಹಾಳನ್ನ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಬಳಿಕ ಪೊಲಿಸರು ಕಾರ್ಯಚರಣೆ ನಡೆಸಿ ಆರೋಪಿ ಬೆಳಗಾವಿ ಜಿಲ್ಲೆಯ ಫಯಾಜ್ ಕೊಂಡುನಾಯ್ಕ್ (24) ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಇನ್ನು ಪ್ರಕರಣವು ರಾಜ್ಯಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆ ಖಂಡಿಸಿ ಸಾವಿರಾರು ವಿದ್ಯಾರ್ಥಿಗಳು ಮತ್ತು ನಾಗರಿಕರು ಪ್ರತಿಭಟನೆ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ