AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ನನ್ನ ಮಗಳ ಕೊಲೆ ಹಿಂದೆ ಶಾಸಕರ ಕೈವಾಡವಿದೆ, ನೇಹಾ ತಂದೆ ಆರೋಪ

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆಯಾಗಿ 9 ತಿಂಗಳುಗಳಾದರೂ ನ್ಯಾಯ ದೊರೆತಿಲ್ಲ. ಹೀಗಾಗಿ ನೇಹಾರ ತಂದೆ ನಿರಂಜನ್ ಹಿರೇಮಠ ಸಿಬಿಐ ತನಿಖೆಗೆ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರ 120 ದಿನಗಳಲ್ಲಿ ನ್ಯಾಯ ಒದಗಿಸುವ ಭರವಸೆ ನೀಡಿದ್ದರೂ ಯಾವುದೇ ಪ್ರಗತಿ ಕಂಡುಬಂದಿಲ್ಲ. ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್ ಕೂಡ ಸಿಬಿಐ ತನಿಖೆಗೆ ಆಗ್ರಹಿಸಿದ್ದಾರೆ. ಪ್ರಕರಣದಲ್ಲಿ ಪ್ರಭಾವಿಗಳ ಕೈವಾಡದ ಆರೋಪಗಳಿವೆ.

ಹುಬ್ಬಳ್ಳಿ: ನನ್ನ ಮಗಳ ಕೊಲೆ ಹಿಂದೆ ಶಾಸಕರ ಕೈವಾಡವಿದೆ, ನೇಹಾ ತಂದೆ ಆರೋಪ
ನೇಹಾ ಹಿರೇಮಠ, ನಿರಂಜನ್​ ಹಿರೇಮಠ
ಶಿವಕುಮಾರ್ ಪತ್ತಾರ್
| Edited By: |

Updated on:Feb 03, 2025 | 8:38 AM

Share

ಹುಬ್ಬಳ್ಳಿ, ಫೆಬ್ರವರಿ 03: ಹುಬ್ಬಳ್ಳಿಯ (Hubballi) ನೇಹಾ ಹಿರೇಮಠ (Neha Hiremath) ಹತ್ಯೆ ಪ್ರಕರಣ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ನೇಹಾ ಹಿರೇಮಠ ಹಂತಕನಿಗೆ ಶಿಕ್ಷೆಯಾಗಿಲ್ಲ. 120 ದಿನಗಳಲ್ಲಿ ನೇಹಾಳ ಸಾವಿಗೆ ನ್ಯಾಯ ಕೊಡಿಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೆ, ಇನ್ನೂವರೆಗೂ ನ್ಯಾಯ ದೊರೆತಿಲ್ಲ. ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ನನ್ನ ಮಗಳ ಆತ್ಮಕ್ಕೆ ಶಾಂತಿ ಸಿಗಬೇಕು ಎಂದು ನೇಹಾಳ ತಂದೆ ನಿರಂಜನ್​ ಹಿರೇಮಠ ಆಗ್ರಹಿಸಿದರು.

2024ರ ಎಪ್ರಿಲ್ 18 ರಂದು ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ವಿದ್ಯಾರ್ಥಿನಿ ನೇಹಾಳ ಕೊಲೆಯಾಗಿತ್ತು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಮತ್ತು ಕಾಂಗ್ರೆಸ್ ಮುಖಂಡ ನಿರಂಜನ ಹಿರೇಮಠ ಅವರ ಮಗಳು ನೇಹಾಳನ್ನ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಪ್ರೀತಿ ನಿರಾಕರಿಸಿದ್ದಕ್ಕೆ ಆರೋಪಿ ಫಯಾಜ್ ನೇಹಾಳನ್ನು ಕೊಲೆ ಮಾಡಿದ್ದನು. ಕೊಲೆ‌ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕೊಲೆ ಆರೋಪಿ ಫಯಾಜ್​ನನ್ನು ಕೆಲವೇ ಕ್ಷಣಗಳಲ್ಲಿ ಪೊಲೀಸರು ಬಂಧಿಸಿದ್ದರು.

ವಿದ್ಯಾರ್ಥಿನಿ ನೇಹಾಳ‌ ಕೊಲೆ ಮಾತ್ರ ರಾಜ್ಯ ಸರ್ಕಾರಕ್ಕೆ ದೊಡ್ಡಮಟ್ಟದ ಇರಿಸುಮುರಿಸು ಮಾಡಿತ್ತು. ನೇಹಾಳ ಕೊಲೆ ಖಂಡಿಸಿ ಅನೇಕ ಸಂಘಟನೆಗಳು ಬೀದಿಗಿಳಿದು ಹೋರಾಟ ಮಾಡಿದ್ದವು. ಅಲ್ಲದೆ, ಕಾಂಗ್ರೆಸ್ ಮುಖಂಡ ಮತ್ತು ಪಾಲಿಕೆ ಸದಸ್ಯ, ನೇಹಾ ತಂದೆ ನಿರಂಜನ್​ ಹಿರೇಮಠ ತಮ್ಮದೇ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿ, ಮಗಳ ಸಾವಿಗೆ ನ್ಯಾಯ ಕೊಡಿಸಿ ಎಂದು ಅಂಗಲಾಚಿದ್ದರು.

ಇದನ್ನೂ ಓದಿ: ನೇಹಾ, ಅಂಜಲಿ ಕೊಲೆ: ಹುಬ್ಬಳ್ಳಿಯ ಕಾಲೇಜು, ಮನೆಗಳಲ್ಲಾದ ಬದಲಾವಣೆ ಕುರಿತು ಪ್ರಾಂಶುಪಾಲರ, ಪೋಷಕರ ಮಾತು ಟಿವಿ9 ಸಂದರ್ಶನದಲ್ಲಿ

ಆಗ, ಸರ್ಕಾರ ನೇಹಾಳ ಕೊಲೆ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಿತ್ತು. ಅಲ್ಲದೇ ಪಾಸ್ಟ್‌ಟ್ರ್ಯಾಕ್ ನಿರ್ಮಿಸಿ 120 ದಿನಗಳಲ್ಲಿಯೇ ನೇಹಾಳ ಸಾವಿಗೆ ನ್ಯಾಯ ದೊರಕಿಸಿಕೊಡುವ ಬರವಸೆ ನೀಡಿತ್ತು. ಆದರೆ, ಇಲ್ಲಿಯವರೆಗೂ ಈ ಪ್ರಕರಣದಲ್ಲಿ ಯಾವುದೇ ಬೆಳವಣಿಗೆ ಕಂಡಿಲ್ಲ ಮತ್ತು ಪಾಸ್ಟ್‌ಟ್ರ್ಯಾಕ್ ಕೋರ್ಟ್ ನಿರ್ಮಾಣವಾಗಿಲ್ಲ. ಹೀಗಾಗಿ ನೇಹಾ ಹತ್ಯೆ ಪ್ರಕರಣವನ್ನ ಸಿಬಿಐಗೆ ವಹಿಸಬೇಕೆಂದು ನೇಹಾ ತಂದೆ ನಿರಂಜನ್​ ಆಗ್ರಹಿಸಿದ್ದಾರೆ.

ಮೊನ್ನೆಯಷ್ಟೇ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ನೇಹಾ ಪ್ರಕರಣವನ್ನ ಸಿಬಿಐಗೆ ವಹಿಸುವಂತೆ ಆಗ್ರಹಿಸಿದ್ದರು. ಶ್ರೀರಾಮಸೇನೆ ಬೆನ್ನಲ್ಲೇ ನೇಹಾ ತಂದೆಯಿಂದಲೂ ಸಿಬಿಐ ತನಿಖೆಗೆ ಆಗ್ರಹ ಕೇಳಿ ಬಂದಿದೆ.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು, ನನ್ನ ಮಗಳ ಹತ್ಯೆ ನಡೆದು 9 ತಿಂಗಳು ಕಳೆದರೂ ನ್ಯಾಯ ಸಿಗುತ್ತಿಲ್ಲ. ಈ‌ ತನಿಖೆಯ ಹಾದಿ‌ ಎತ್ತ ಸಾಗುತ್ತಿದೆ ಅನ್ನೋದೇ ಗೊತ್ತಾಗುತ್ತಿಲ್ಲ. ಹತ್ಯೆ ಪ್ರಕರಣವನ್ನ ಸಿಬಿಐಗೆ ವಹಿಸಬೇಕೆಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಆಗ್ರಹಿಸಿದ್ದಾರೆ. ಈ ಪ್ರಕರಣದ ತನಿಖೆಯ ಬಗ್ಗೆ ಶ್ರೀರಾಮಸೇನೆ ಅಷ್ಟೇ ಅಲ್ದೇ ಸಾರ್ವಜನಿಕರಲ್ಲಿಯೂ ಹಲವು ಪ್ರಶ್ನೆ ಮೂಡಿಸಿದೆ. ಆದ್ದರಿಂದ ಸಿಬಿಐ ತನಿಖೆ ಆಗಲಿ ಎಂದಿದ್ದಾರೆ. ಕೊಲೆ ಕೇಸ್​ನಲ್ಲಿ ಶಾಸಕರ ಕೈವಾಡ ಇರುವುದು ಸತ್ಯ ಎಂದು ಕಣ್ಣೀರು ಹಾಕಿದ್ದಾರೆ.

ರಾಜ್ಯ ಸರ್ಕಾರ 120 ದಿನಗಳಲ್ಲಿ ನನ್ನ ಮಗಳ ಸಾವಿಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿತ್ತು. ಆದರೆ, ಒಂಬತ್ತು ತಿಂಗಳು ಕಳೆದರೂ ನನ್ನ ಮಗಳ‌ ಸಾವಿಗೆ ನ್ಯಾಯ ಸಿಗುವ ಭರವಸೆ ಸಿಗುತ್ತಿಲ್ಲ. ರಾಜ್ಯ ಸರ್ಕಾರ ಹಾಗೂ ಸಿಐಡಿಯಿಂದ ನ್ಯಾಯ ಸಿಗುವ ಭರವಸೆ ಕ್ಷೀಣಿಸುತ್ತಿದೆ. ಈ‌ ಕಾರಣದಿಂದಾಗಿಯೇ ಈ‌ ಪ್ರಕರಣವನ್ನ ಸಿಬಿಐಗೆ ವಹಿಸಬೇಕು. ಸಿಬಿಐಗೆ ವಹಿಸಿದರೆ ಮಾತ್ರ ನನ್ನ ಮಗಳ‌ ಸಾವಿಗೆ ನ್ಯಾಯ ಸಿಗುತ್ತದೆ ಎಂದರು.

ಮತ್ತೊಂದು ಕಡೆ ನೇಹಾ ಕೊಲೆ ಕೇಸ್ ವಿಚಾರವಾಗಿ ಶ್ರೀರಾಮಸೇನೆ ಹೋರಾಟದ ಹಾದಿ ಹಿಡಿದಿದೆ. ಈಗಾಗಲೇ ಕೊಲೆ ಹಂತಕ‌‌ ಫಯಾಜ್ ವ್ಯಾಸಂಗ ಮಾಡತಿದ್ದ ಕಾಲೇಜ್​ಗೆ ಭೇಟಿ ನೀಡಿದ ಪ್ರಮೋದ್​ ಮುತಾಲಿಕ್ ಶಾಶ್ವತವಾಗಿ‌ ಫಯಾಜ್ ನನ್ನ ಸಸ್ಪೆಂಡ್ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ನೇಹಾ ಹತ್ಯೆಯಲ್ಲಿ ಕೆಲ‌ ಪ್ರಭಾವಿಗಳು, ಶಾಸಕರು ಕೈವಾಡವಿರುವ ಬಗ್ಗೆ ನನ್ನ ಬಳಿ‌ ಸಾಕ್ಷಿ ಇವೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್​ ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:32 am, Mon, 3 February 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್