ಹುಬ್ಬಳ್ಳಿ: ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಬಾಲಕನ ಮೇಲೆ ಹಲ್ಲೆ

ಹುಬ್ಬಳ್ಳಿಯಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಕೊಲೆಗಳಾದವು. ಇದೀಗ, ಕ್ಷುಲ್ಲಕ ಕಾರಣಕ್ಕೆ ಶಾಲಾ ವಿದ್ಯಾರ್ಥಿಗೆ ಐವರು ಹಲ್ಲೆ ಮಾಡಲಾಗಿದೆ. ಅಶೋಕ ನಗರ ​ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸುತ್ತಿದ್ದಾರೆ.

ಹುಬ್ಬಳ್ಳಿ: ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಬಾಲಕನ ಮೇಲೆ ಹಲ್ಲೆ
ಬಾಲಕನ ಮೇಲೆ ಹಲ್ಲೆ ದೃಶ್ಯ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ವಿವೇಕ ಬಿರಾದಾರ

Updated on: Jul 08, 2024 | 10:39 AM

ಹುಬ್ಬಳ್ಳಿ, ಜುಲೈ 08: ಕ್ಷುಲ್ಲಕ ಕಾರಣಕ್ಕೆ ಬಾಲಕನ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಹುಬ್ಬಳ್ಳಿಯ (Hubballi) ಅಶೋಕನಗರ ಠಾಣೆ ಪೊಲೀಸರು (Police) ವಶಕ್ಕೆ ಪಡೆದುಕೊಂಡಿದ್ದಾರೆ. ಶಾಲಾ ವಿದ್ಯಾರ್ಥಿ ಓರ್ವ ಯುವತಿಯೊಂದಿಗೆ ಮಾತನಾಡುತ್ತಿದ್ದನು. ಇದನ್ನು ಕಂಡ ಕೆಲ ಹುಡುಗರು ಯುವತಿಯೊಂದಿಗೆ ಏಕೆ ಮಾತನಾಡಿದ್ದಿ ಎಂದು ಪ್ರಶ್ನಿಸಿದ್ದಾರೆ. ಈ ವಿಚಾರವಾಗಿ ಮಾತಿನ ಚಕಮಕಿ ಆಗಿದೆ. ಇದು ವಿಕೋಪಕ್ಕೆ ತಿರುಗಿದ್ದು, ವಿದ್ಯಾರ್ಥಿಗೆ ಮನಬಂದಂತೆ ಥಳಿಸಿ, ಕಾಲಿನಿಂದ ಒದ್ದಿದ್ದಾರೆ.

ಈ ವಿಚಾರ ವಿದ್ಯಾರ್ಥಿಯ ಶಾಲೆಯ ಪ್ರಾಂಶುಪಾಲರಿಗೆ ತಿಳಿದಿದೆ. ಪ್ರಾಂಶುಪಾಲರು ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಾಂಶುಪಾಲರು ನೀಡಿದ ದೂರಿನ ಅನ್ವಯ ಪೋಲೀಸರ ತನಿಖೆ ನಡೆಸಿ, ಹಲ್ಲೆ ಮಾಡಿದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಲ್ಲೆ ಮಾಡಿದವರು ವಿವಿಧ ಶಾಲೆ ಮತ್ತು ಕಾಲೇಜಿಗೆ ಸೇರಿದವರೆಂಬ ಮಾಹಿತಿ ದೊರೆತಿದ್ದು, ಒಟ್ಟು ಐವರು ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ: ಎಣ್ಣೆ ಹೊಡೆಯುವ ವಿಚಾರಕ್ಕಾಗಿ ನಡೆಯಿತು ಆಕಾಶ್​ ಮಠಪತಿ ಕೊಲೆ!

ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿ ಫ್ರಾನ್ಸಿಸ್ ಉಡುಮಿಲ ಸೇರಿದಂತೆ ಐವರನ್ನೂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಶಾಲಾ – ಕಾಲೇಜು ಪ್ರಾಂಶುಪಾಲರಿಗೆ, ಪೋಷಕರಿಗೆ ಪೊಲೀಸರು ಮಕ್ಕಳ ಮೇಲೆ ನಿಗಾ ಇರಲಿ ಎಂದು ಸೂಚನೆ ನೀಡಿದ್ದಾರೆ.

ಮದ್ಯ ಕುಡಿಯುವ ವಿಚಾರವಾಗಿ ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಸ್ನೇಹಿತರ ನಡುವೆ ಗಲಾಟೆಯಾಗಿತ್ತು. ಈ ಗಲಾಟೆಯಲ್ಲಿ ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಪತ್ರ ಆಕಾಶ್​ನ ಕೊಲೆಯಾಗಿತ್ತು.

ಗ್ರಾಮ ಪಂಚಾಯತಿ ಸದಸ್ಯನ ಕೊಲೆ

ಹೊಸಕೋಟೆ: ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯನನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬೈಲನರಸಾಪುರ ಗ್ರಾಮದಲ್ಲಿ ನಡೆದಿದೆ. ಅಪಾಕ್ ಅಮಿರ್ ಖಾನ್ (45) ಮೃತ ಗ್ರಾಮ ಪಂಚಾಯತಿ ಸದಸ್ಯ.

ಅಪಾಕ್ ಅಮಿರ್ ಖಾನ್ ಗ್ರಾಮ ಪಂಚಾಯತಿ ಮುಂದೆ ಪೋನ್ ಮಾತನಾಡುತ್ತಾ ನಿಂತಿದ್ದ ವೇಳೆ ಗ್ರಾಮದ ಮೆಹಬೂಬ್ ಎಂಬುವನು ಏಕಾಏಕಿ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಕೊಲೆ ಮಾಡಿದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್