ನನ್ನ ಪ್ರಾಣ ಹೋದರೂ ಪರವಾಗಿಲ್ಲ, ಫಯಾಜ್​ ಪ್ರಾಣ ತಗೊಳ್ಳುವೆ; ಮಗಳ ಶವದ ಮೇಲೆ ಶಪಥ ಮಾಡಿದ್ದೇನೆಂದ ನೇಹಾ ತಂದೆ ಹಿರೇಮಠ

ಆರೋಪಿ ಫಯಾಜ್ ನನ್ನ ಮಗಳನ್ನು ಅಪಹರಿಸಿಕೊಂಡು ಹೋಗಲು ಯತ್ನಿಸಿದ್ದ. ನನ್ನ ಪ್ರಾಣ ಹೋದರೂ ಪರವಾಗಿಲ್ಲ, ಫಯಾಜ್​ ಪ್ರಾಣ ತಗೊಳ್ಳುತ್ತೇನೆ ಎಂದು ಶಪಥ ಮಾಡಿರುವ ನಿರಂಜನ್ ಹಿರೇಮಠ, ಆರೋಪಿ ಫಯಾಜ್​ಗೆ ಸಹಾಯ‌ ಮಾಡಿದವರನ್ನೂ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ನನ್ನ ಪ್ರಾಣ ಹೋದರೂ ಪರವಾಗಿಲ್ಲ, ಫಯಾಜ್​ ಪ್ರಾಣ ತಗೊಳ್ಳುವೆ; ಮಗಳ ಶವದ ಮೇಲೆ ಶಪಥ ಮಾಡಿದ್ದೇನೆಂದ ನೇಹಾ ತಂದೆ ಹಿರೇಮಠ
ನಿರಂಜನ ಹಿರೇಮಠ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: Ganapathi Sharma

Updated on:Apr 25, 2024 | 2:44 PM

ಹುಬ್ಬಳ್ಳಿ, ಏಪ್ರಿಲ್ 25: ರಾಜ್ಯದಾದ್ಯಂತ ಸಂಚಲನ ಮೂಡಿಸಿದ್ದ ಹುಬ್ಬಳ್ಳಿ (Hubballi) ವಿದ್ಯಾರ್ಥಿನಿ ನೇಹಾ ಕೊಲೆ (Neha Murder) ಪ್ರಕರಣ ದಿಢೀರಾಗಿ ಸಂಭವಿಸಿದ್ದಲ್ಲ. ಆರೋಪಿ ಫಯಾಜ್ ವಾರದ ಮೊದಲೇ ಸಿದ್ಧತೆ ಮಾಡಿಕೊಂಡಿದ್ದ ಎಂಬ ವಿಚಾರ ಬೆಳಕಿಗೆ ಬಂದ ಬೆನ್ನಲ್ಲೇ, ನೇಹಾಳನ್ನು ಅಪಹರಿಸಲು ಆತ ಯತ್ನಿಸಿದ್ದ ಎಂದು ಆಕೆಯ ತಂದೆ ನಿರಂಜನ ಹಿರೇಮಠ ಆರೋಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ತಂಡದಿಂದ ನೇಹಾ ತಂದೆ ನಿರಂಜನ, ತಾಯಿ ಗೀತಾ ವಿಚಾರಣೆ ನಡೆಯಿತು. ಬಳಿಕ ನಿರಂಜನ ಹಿರೇಮಠ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ನನ್ನ ಪ್ರಾಣ ಹೋದರೂ ಪರವಾಗಿಲ್ಲ, ಫಯಾಜ್​ ಪ್ರಾಣ ತಗೊಳ್ಳುತ್ತೇನೆ. ನನ್ನ ಮಗಳ ಶವದ ಮೇಲೆ ನಾನು ಶಪಥ ಮಾಡಿದ್ದೇನೆ. ಆರೋಪಿ ಫಯಾಜ್​ಗೆ ಸಹಾಯ‌ ಮಾಡಿದವರನ್ನೂ ಬಂಧಿಸಬೇಕು ಎಂದು ನಿರಂಜನ ಹಿರೇಮಠ ಆಗ್ರಹಿಸಿದ್ದಾರೆ.

ಎಲ್ಲ ವಿಷಯಗಳನ್ನು ಸಿಐಡಿ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ನಿನ್ನೆ ಫಯಾಜ್​ನನ್ನು ಮಹಜರು ಮಾಡಿರುವ ಬಗ್ಗೆಯೂ ಅವರು ತಿಳಿಸಿದರು. ಹಂತಕ ಫಯಾಜ್ ನನ್ನ ಮಗಳನ್ನು ಕಿಡ್ನ್ಯಾಪ್ ಮಾಡಲು ಯತ್ನಿಸಿದ್ದ. ಕೆಲ ದಿನಗಳಿಂದ ನಮಗೆ ಬೆದರಿಕೆ ಇದೆ. ಯಾಱರೋ ಮನೆಗೆ ಬಂದು ವಿಡಿಯೋ ಮಾಡುತ್ತಿದ್ದಾರೆ. ಕೆಲ ದಿನಗಳಿಂದ ಅನಾಮಿಕರು ಮನೆ ಸುತ್ತಮುತ್ತ ಒಡಾಡುತ್ತಿದ್ದಾರೆ. ಇದನ್ನು ಸಿಐಡಿ ಅಧಿಕಾರಿಗಳ ಗಮನಕ್ಕೂ ತಂದಿದ್ದೇನೆ‌ ಎಂದು ನಿರಂಜನ ಹಿರೇಮಠ ಹೇಳಿದ್ದಾರೆ.

ಇದನ್ನೂ ಓದಿ: ನೇಹಾಳ ಹತ್ಯೆ ಕೋಪದಲ್ಲಿ ಮಾಡಿದ್ದಲ್ಲ! ಸ್ಪಾಟ್​​ ಇನ್ಸ್​​​​ಪೆಕ್ಷನ್​ ಮಾಡಿ, ವಾರದಿಂದ ಪೂರ್ವ ತಯಾರಿ ನಡೆಸಿದ್ದ ಫಯಾಜ್​

ಸದ್ಯ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದ್ದು, ಆರೋಪಿ ಫಯಾಜ್​​ನನ್ನು 6 ದಿನಗಳ ಕಾಲ ವಶಕ್ಕೆ ಪಡೆದಿದೆ. ಕೊಲೆ ಮಾಡುವ ಕೆಲವು ದಿನಗಳ ಮುನ್ನ ಆರೋಪಿ ಫಯಾಜ್​​ ನೇಹಾ ಹಿರೇಮಠ ಮನೆ ಬಳಿಯೇ ಓಡಾಡಿದ್ದ. ಆ ಮೂಲಕ ನೇಹಾ ಚಲನವಲನವನ್ನು ಗಮನಿಸಿದ್ದ. ಆಕೆಯ ಪ್ರತಿಯೊಂದು ವಿಚಾರಗಳನ್ನು ಗಮನಿಸುತ್ತಿದ್ದ. ಇನ್ನು ಕೊಲೆ ಮಾಡುವ ಐದು ದಿನಗಳ ಮೊದಲೇ ಚಾಕುವೊಂದನ್ನು ಖರೀದಿ ಮಾಡಿದ್ದ ಎಂಬ ವಿಚಾರ ಆರಂಭಿಕ ಹಂತದ ತನಿಖೆ ವೇಳೆ ಬೆಳಕಿಗೆ ಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:28 pm, Thu, 25 April 24

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ