
ಹುಬ್ಬಳ್ಳಿ, ಜನವರಿ 11: ಮಹಿಳೆಗೆ ಮದ್ಯ ಕುಡಿಸಿ ಆಕೆಯ ಮೇಲೆ ಗ್ಯಾಂಗ್ ರೇಪ್ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಸಂತ್ರಸ್ತೆ ನೀಡಿದ್ದ ದೂರಿನ ಆಧಾರದಲ್ಲಿ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಕಾಮುಕರು ಕೃತ್ಯದ ವಿಡಿಯೋ ಕೂಡ ಮಾಡಿಕೊಂಡು ಅದನ್ನು ಹರಿಬಿಟ್ಟಿದ್ದರು ಎನ್ನಲಾಗಿದೆ. ಇನ್ನು ಸಂತ್ರಸ್ತೆಗೆ ಅಗತ್ಯ ಚಿಕಿತ್ಸೆಯನ್ನು ನೀಡಲಾಗ್ತಿದೆ.
ಘಟನೆ ಬಗ್ಗೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಪ್ರತಿಕ್ರಿಯಿಸಿದ್ದು, ಜ.9ರಂದು ಅಂಬೇಡ್ಕರ್ ಮೈದಾನದಿಂದ ಇಬ್ಬರು ಯುವಕರು ಆಟೋದಲ್ಲಿ ಮಹಿಳೆಯನ್ನು ಕರೆದೊಯ್ದಿದ್ದರು. ಮದ್ಯ ಕುಡಿಸಿ ಅನುಚಿತವಾಗಿ ವರ್ತಿಸಿ ವಿಡಿಯೋ ಮಾಡಿಕೊಂಡಿದ್ದಾರೆ. ಒಂದು ದಿನದ ನಂತರ ಮಹಿಳೆ ಠಾಣೆಗೆ ಬಂದು ಅತ್ಯಾಚಾರ ಮಾಡಿ ವಿಡಿಯೋ ಮಾಡಿ ಹರಿಬಿಟ್ಟ ಬಗ್ಗೆ ದೂರು ನೀಡಿದ್ದಾಳೆ. ಪ್ರಕರಣ ಸಂಬಂಧ ಆರೋಪಿಗಳಾದ ಶಿವಾನಂದ, ಗಣೇಶ್ಗೆ ಸ್ಥಳೀಯರು ಥಳಿಸಿದ್ದಾರೆ. ಕಟ್ಟಿಹಾಕಿ ತಲೆ ಬೋಳಿಸಿದ್ದಾರೆ. ಹಲ್ಲೆ ಸಂಬಂಧ ನಾಲ್ವರ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಪ್ರತ್ಯೇಕ ಘಟನೆ; ರಸ್ತೆ ಅಪಘಾತದಲ್ಲಿ ನಾಲ್ವರು ದಾರುಣ ಸಾವು; ಮೂವರು ಗಂಭೀರ
ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪಿಗಳನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದ ನಾಲ್ವರ ವಿರುದ್ಧ ದೂರು ದಾಖಲಾಗಿರೋದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಹುಬ್ಬಳ್ಳಿ ನಗರದ ಶಿವಶಂಕರ ಕಾಲೋನಿಯ ನಾಲ್ವರ ವಿರುದ್ಧ ಪ್ರಕರಣ ಖಂಡಿಸಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಬಳಿ ಸ್ಥಳೀಯರು ಕಿಡಿ ಕಾರಿದ್ದಾರೆ. ಆರೋಪಿಗಳನ್ನು ಹಿಡಿದು ಕೊಟ್ಟವರ ವಿರುದ್ಧ ಕೇಸ್ ಹಾಕಲಾಗಿದ್ದು, ಕೂಡಲೇ ಅವರನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 12:39 pm, Sun, 11 January 26