AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ನಕಲಿ ಆಹಾರ ಇಲಾಖೆ ಅಧಿಕಾರಿಗಳ ಹಾವಳಿ: ಇಬ್ಬರ ಬಂಧನ

ನಕಲಿ ಆಹಾರ ಇಲಾಖೆ ಅಧಿಕಾರಿಗಳು ಹುಬ್ಬಳ್ಳಿಯಲ್ಲಿನ ಕಿರಾಣಿ ಅಂಗಡಿಗಳ ಮೇಲೆ ದಾಳಿ ಮಾಡಿ ಹಣ ವಸೂಲಿ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ ಮತ್ತು ಲಕ್ಷ್ಮಣ ಎಂಬ ಇಬ್ಬರು ಆರೋಪಿಗಳು ಆಹಾರ ಇಲಾಖೆ ಅಧಿಕಾರಿಗಳು ಎಂದು ಹೇಳಿಕೊಂಡು ಕಿರಾಣಿ ಅಂಗಡಿಗಳ ಮೇಲೆ ದಾಳಿ ಮಾಡಿದ್ದರು. ಈ ಘಟನೆಯಿಂದ ನಕಲಿ ಅಧಿಕಾರಿಗಳ ಚಟುವಟಿಕೆ ಬಯಲಾಗಿದೆ ಮತ್ತು ಕಿರಾಣಿ ವ್ಯಾಪಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹುಬ್ಬಳ್ಳಿಯಲ್ಲಿ ನಕಲಿ ಆಹಾರ ಇಲಾಖೆ ಅಧಿಕಾರಿಗಳ ಹಾವಳಿ: ಇಬ್ಬರ ಬಂಧನ
ಘಂಟಿಗೇರಿ ಪೊಲೀಸ್​ ಠಾಣೆ, ನಕಲಿ ಅಧಿಕಾರಿಗಳು
ಶಿವಕುಮಾರ್ ಪತ್ತಾರ್
| Edited By: |

Updated on:Mar 12, 2025 | 8:55 AM

Share

ಹುಬ್ಬಳ್ಳಿ, ಮಾರ್ಚ್​ 12: ಕಳೆದ ಕೆಲ ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ (Hubballi) ನಕಲಿ ‌ಮದ್ಯ ತಯಾರಿಕೆ ಗ್ಯಾಂಗ್ ಅಬಕಾರಿ ಅಧಿಕಾರಿಗಳ ಬಲೆಗೆ ಬಿದ್ದಿದ್ದರು. ಇದಕ್ಕೂ ಮುನ್ನ ಅಂಗನವಾಡಿ ಮಕ್ಕಳ ಪೌಷ್ಠಿಕ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಆರೋಪದ ಮೇಲೆ ಹಲವರನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ, ಹುಬ್ಬಳ್ಳಿಯಲ್ಲಿ ನಕಲಿ ಅಧಿಕಾರಿಗಳು ತಲೆ ಎತ್ತಿದ್ದಾರೆ.ಹಣ ಮಾಡೋ ಉದ್ದೇಶಕ್ಕೆ ಕೆಲವರು ಅಧಿಕಾರಿಗಳ ಸೋಗಿನಲ್ಲಿ ರೋಲ್ ಕಾಲ್​ಗೆ ಇಳದಿದ್ದಾರೆ. ಆಹಾರ ಇಲಾಖೆ ಹೆಸರಿನಲ್ಲಿ ದುರ್ಗದ ಬೈಲ್​ನಲ್ಲಿನ ಕಿರಾಣಿ ಅಂಗಡಿಗಳ ಮೇಲೆ ಏಕಾಏಕಿ ದಾಳಿ ಮಾಡಿದ್ದ ನಕಲಿ ಅಧಿಕಾರಿಗಳನ್ನು (Fake Food Officers) ಪೊಲೀಸರು ಬಂಧಿಸಿದ್ದಾರೆ.

ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿದ ಮಂಜುನಾಥ ಹಾಗೂ ಲಕ್ಷ್ಮಣ ಹಣಕ್ಕೆ ಬೇಡಿಕೆ ಇಟ್ಟಿದ್ದರಂತೆ. ಹಣ ಕೇಳುತ್ತಲೇ ಕಿರಾಣಿ ಅಂಗಡಿ ಮಾಲೀಕರು ನಕಲಿ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡಿದ್ದಾರೆ. ಕೊನೆಗೆ ಇವರಿಬ್ಬರು ನಕಲಿ ಅಧಿಕಾರಿಗಳು ಎಂದು ಅಂಗಡಿ ಮಾಲೀಕರಿಗೆ ತಿಳಿಯುತ್ತಿದ್ದಂತೆ ಲಕ್ಷ್ಮಣ ಅಲ್ಲಿಂದ ಕಾಲ್ಕಿತ್ತಿದ್ದಾನೆ. ನಕಲಿ ಅಧಿಕಾರಿ ಮಂಜುನಾಥನನ್ನು ಕಿರಾಣಿ ಅಂಗಡಿ ಮಾಲೀಕರು ಹುಬ್ಬಳ್ಳಿಯ ಘಂಟಿಕೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ನಕಲಿ ಅಧಿಕಾರಿಗಳ ಗ್ಯಾಂಗ್​ಗೆ ಕಿರಾಣಿ ಅಂಗಡಿ ಮಾಲೀಕರು ರೋಸಿ ಹೋಗಿದ್ದರು. ಕಳೆದ ಕೆಲ ದಿನಗಳಿಂದ ಒಂದಲ್ಲಾ ಒಂದು ಅಂಗಡಿ ಇವರ ಟಾರ್ಗೆಟ್ ಆಗಿತ್ತು. ಅಂಗಡಿಗೆ ಹೋಗಿ, ಆಹಾರ ಇಲಾಖೆ ಅಧಿಕಾರಿಗಳು ಅಂತ ಸುಳ್ಳು ಹೇಳಿ, ಬಿಲ್ ಕೇಳುವುದು, ಲೇಬಲ್ ಬಗ್ಗೆ ವಿಚಾರಣೆ ಮಾಡುವುದು, ಅದು ಸರಿ ಇಲ್ಲ, ಇದು ಸರಿ ಇಲ್ಲ ಅಂತ ಹೇಳಿ, ಹಣ ಕೇಳುತ್ತಿದ್ದರು. ಆರೋಪಿಗಳು ಕೇವಲ ಕಿರಾಣಿ ಅಂಗಡಿಗಳ ಮೇಲೆ ದಾಳಿ ಮಾಡಿ, ಮಾಲೀಕರಿಂದ ಹಣ ವಸೂಲಿ‌ ಮಾಡತಿದ್ದರಂತೆ. ನಕಲಿ ಅಧಿಕಾರಿಗಳ ಬಂಡವಾಳ ಬಯಲಾಗುತ್ತಲೇ ಕಿರಾಣಿ ಅಂಗಡಿ ಮಾಲೀಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ
Image
ಹುಬ್ಬಳ್ಳಿ: ತೋಟದ ಮನೆಯಲ್ಲಿ ಸಿಕ್ತು 5 ಲಕ್ಷ ರೂ. ಮೌಲ್ಯದ ನಕಲಿ ಮದ್ಯ
Image
ಪೌಷ್ಟಿಕ ಆಹಾರ ಅಕ್ರಮ ಸಾಗಾಟ: ಕಿಂಗ್​ಪಿನ್ ಕೈ ನಾಯಕಿಗೆ ದರ್ಗಾದಲ್ಲಿ ಆಶ್ರಯ?
Image
ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ 4 ಲಕ್ಷ ರೂ. ಮೌಲ್ಯದ ಗಾಂಜಾ ಪತ್ತೆ
Image
ಅಂಗನವಾಡಿ ಆಹಾರ ಅಕ್ರಮವಾಗಿ ಸಂಗ್ರಹ: 18 ಅಂಗನವಾಡಿ ಕಾರ್ಯಕರ್ತೆಯರ ಬಂಧನ

ಇದನ್ನೂ ಓದಿ: ಮಕ್ಕಳ ಅನ್ನಕ್ಕೂ ಕನ್ನ ಹಾಕಿದ ‘ಕೈ’ ನಾಯಕಿ, ಗೋಡೌನ್​ನಲ್ಲಿ ಸಂಗ್ರಹಿಸಿದ್ದ ಪೌಷ್ಟಿಕ ಆಹಾರ ಜಪ್ತಿ

ಕಿರಾಣಿ ಅಂಗಡಿ ಮಾಲೀಕರು ಬಳಿ ತಗಲಾಕೊಂಡಿದ್ದೇ, ತಡ ನಕಲಿ‌ ಅಧಿಕಾರಿಗಳು ಮಾದ್ಯಮದ ಹೆಸರು ಬಳಕೆ‌ ಮಾಡಿಕೊಂಡಿದ್ದಾರೆ. ಕಿರಾಣಿ ಅಂಗಡಿ‌ ಮಾಲೀಕರು ಘಂಟಿಕೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:27 am, Wed, 12 March 25

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ