ಹುಬ್ಬಳ್ಳಿ: ಬಸವಣ್ಣ ದೇವಸ್ಥಾನದಲ್ಲಿ ಪೂಜೆ ವಿಚಾರದಲ್ಲಿ ವಿವಾದ, ಅರ್ಚಕನಿಗೆ ಗ್ರಾಮಸ್ಥರಿಂದ ಥಳಿತ

ದೇವಸ್ಥಾನದ ಪೂಜೆ ವಿಚಾರಕ್ಕೆ ಆಕ್ರೋಶಗೊಂಡ ಸ್ಥಳೀಯ ಗುಂಪೊಂದು ಅರ್ಚಕನ ಮೇಲೆ ಹಲ್ಲೆ ನಡೆಸಿದ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಂಪ್ಲಿಕೊಪ್ಪದಲ್ಲಿ ನಡೆದಿದೆ. ದೇವಸ್ಥಾನಕ್ಕೆ ಬೇರೆ ಅರ್ಚಕನನ್ನು ನೇಮಿಸಲು ಗ್ರಾಮಸ್ಥರು ಮುಂದಾಗಿದ್ದಾರೆ. ಆದರೆ ಅರ್ಚಕರು ಇದಕ್ಕೆ ಒಪ್ಪುತ್ತಿಲ್ಲ. ಈ ವಿಚಾರವಾಗಿ ಹಲವು ಬಾರಿ ವಾಗ್ವಾದಗಳು ನಡೆದಿವೆ.

ಹುಬ್ಬಳ್ಳಿ: ಬಸವಣ್ಣ ದೇವಸ್ಥಾನದಲ್ಲಿ ಪೂಜೆ ವಿಚಾರದಲ್ಲಿ ವಿವಾದ, ಅರ್ಚಕನಿಗೆ ಗ್ರಾಮಸ್ಥರಿಂದ ಥಳಿತ
ಕಂಪ್ಲಿಕೊಪ್ಪ ಬಸವಣ್ಣ ದೇವಸ್ಥಾನದ ಅರ್ಚಕನ ಮೇಲೆ ಹಲ್ಲೆ
Follow us
Rakesh Nayak Manchi
|

Updated on:Feb 20, 2023 | 11:00 PM

ಹುಬ್ಬಳ್ಳಿ: ಅರ್ಚಕರನ್ನು ಬದಲಾವಣೆ ಮಾಡುವ ವಿಚಾರದಲ್ಲಿ ಉಂಟಾದ ವಿವಾದ ವಾಗ್ವಾದ ರೂಪದಿಂದ ಹಲ್ಲೆ (Assault on Priest) ರೂಪಕ್ಕೆ ತಿರುಗಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಂಪ್ಲಿಕೊಪ್ಪ ಗ್ರಾಮದಲ್ಲಿರುವ ಬಸವಣ್ಣ ದೇವಸ್ಥಾನ (Basavanna Temple)ದಲ್ಲಿ ಇಂದು ಪೂಜಾ ವಿಚಾರದಲ್ಲಿ ನಡೆದ ವಾಗ್ವಾದ ತಾರಕಕ್ಕೇರಿದ್ದು, ಆಕ್ರೋಶಗೊಂಡಿರುವ ಕೆಲವು ಗ್ರಾಮಸ್ಥರು ಅರ್ಚಕನ ಮೇಲೆ ಹಲ್ಲೆ ನಡೆಸಿದ್ದು, ಓಡೋಡಿ ಬಂದು ಹಲ್ಲೆ ನಡೆಸುತ್ತಿವುದನ್ನು ಕೆಲವು ಸ್ಥಳೀಯರು ತಮ್ಮ ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ.

ಹುಬ್ಬಳ್ಳಿ ತಾಲೂಕಿನ ಕಂಪ್ಲಿಕೊಪ್ಪ ಗ್ರಾಮದಲ್ಲಿರುವ ಬಸವಣ್ಣ ದೇವಸ್ಥಾನದಲ್ಲಿ ಪ್ರಕಾಶ್ ಕುಂದಗೋಳ ಮಠ ಅವರು ಅರ್ಚಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ಐವತ್ತಕ್ಕೂ ಹೆಚ್ಚು ವರ್ಷಗಳಿಂದ ದೇವಸ್ಥಾನದ ಅರ್ಚಕರಾಗಿರುವ ಇವರೊಂದಿಗೆ ಇಂದು ಪೂಜೆ ವಿಷಯವಾಗಿ ದೇವಸ್ಥಾನದಲ್ಲೇ ಗ್ರಾಮಸ್ಥರು ಗಲಾಟೆ ನಡೆಸಿದ್ದಾರೆ. ಓಡೋಡಿ ಬಂದು ಹಾರಿ ಅರ್ಚಕ ಪ್ರಕಾಶ್​ಗೆ ಒದಿದ್ದು, ಈ ದೃಶ್ಯಾವಳಿಗಳು ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: Video: ಮದುವೆಯಾಗಲು ಒಪ್ಪದ ಅಪ್ರಾಪ್ತ ಬಾಲಕಿ ಮೇಲೆ ಹಲ್ಲೆ ನಡೆಸಿ, ಜುಟ್ಟು ಹಿಡಿದು ರಸ್ತೆಯಲ್ಲಿ ಎಳೆದುಕೊಂಡು ಹೋದ ವ್ಯಕ್ತಿ

ಕಳೆದ ಹಲವು ವರ್ಷಗಳಿಂದ ದೇವಸ್ಥಾನದಲ್ಲಿ ಪೂಜೆ ವಿಚಾರದಲ್ಲಿ ವಿವಾದ ಉಂಟಾಗಿದ್ದು, ದೇವಸ್ಥಾನಕ್ಕೆ ಬೇರೆ ಅರ್ಚಕನನ್ನು ನೇಮಿಸಲು ಗ್ರಾಮಸ್ಥರು ಮುಂದಾಗಿದ್ದಾರೆ. ಆದರೆ ನಾನೇ ಪೂಜೆ ಮಾಡುತ್ತೇನೆ ಎಂದು ಪಟ್ಟು ಪ್ರಕಾಶ್ ಕುಂದಗೋಳ ಮಠ ಅವರು ಪಟ್ಟು ಹಿಡಿದಿದ್ದಾರೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಅರ್ಚಕರು ಹಾಗೂ ಸ್ಥಳೀಯರ ನಡುವೆ ಹಲವು ಬಾರಿ ವಾಗ್ವಾದಗಳು ನಡೆದಿವೆ.

ಇಂದು ಅಧಿಕಾರಿಗಳ ಗ್ರಾಮ ವಾಸ್ತವ್ಯ ಇರುವ ವೇಳೆಯೇ ಗ್ರಾಮಸ್ಥರು ಅರ್ಚಕರೊಂದಿಗೆ ಜಗಳಕ್ಕೆ ನಿಂತಿದ್ದು, ಅರ್ಚಕ ಪ್ರಕಾಶ್ ಮಾತ್ರವಲ್ಲದೆ ಅವರ ಮಗನಿಗೂ ಥಳಿಸಿದ್ದಾರೆ. ಈ ಬಗ್ಗೆ ಗ್ರಾಮಸ್ಥರ ಮೇಲೆ ಅರ್ಚಕ ಪ್ರಕಾಶ್ ಆರೋಪ ಮಾಡಿದ್ದಾರೆ. ಇನ್ನು, ವಿಚಾರ ತಿಳಿದ ಹುಬ್ಬಳ್ಳಿ ಗ್ರಾಮೀಣ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:59 pm, Mon, 20 February 23

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್