ಹುಬ್ಬಳ್ಳಿ: ವಿದ್ಯಾರ್ಥಿನಿಯರ ಅಶ್ಲೀಲ ಭಾವಚಿತ್ರ ಪೋಸ್ಟ್ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ

ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಭಾವಚಿತ್ರಗಳನ್ನು ಅಶ್ಲೀಲವಾಗಿ ಎಡಿಟ್​ ಮಾಡಿ ಇನ್​​​ಸ್ಟಾಗ್ರಾಮನಲ್ಲಿ ಪೋಸ್ಟ್​ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಠಾಣೆಯ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಹುಬ್ಬಳ್ಳಿ: ವಿದ್ಯಾರ್ಥಿನಿಯರ ಅಶ್ಲೀಲ ಭಾವಚಿತ್ರ ಪೋಸ್ಟ್ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ
ಹುಬ್ಬಳ್ಳಿ ಸೈಬರ್​ ಕ್ರೈಂ ಪೊಲೀಸ್​ ಠಾಣೆ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ವಿವೇಕ ಬಿರಾದಾರ

Updated on: Aug 12, 2023 | 10:33 AM

ಹುಬ್ಬಳ್ಳಿ: ಖಾಸಗಿ ಕಾಲೇಜಿನ (College) ವಿದ್ಯಾರ್ಥಿನಿಯರ (Students) ಭಾವಚಿತ್ರಗಳನ್ನು ಅಶ್ಲೀಲವಾಗಿ ಎಡಿಟ್​ ಮಾಡಿ ಇನ್​​​ಸ್ಟಾಗ್ರಾಮನಲ್ಲಿ (Instagram) ಪೋಸ್ಟ್​ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಠಾಣೆಯ ಪೊಲೀಸರು (Police) ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅದೇ ಕಾಲೇಜಿನಲ್ಲಿ ಓದುತ್ತಿರುವ ಬಿಕಾಂ ದ್ವಿತೀಯ ವರ್ಷದ ವಿದ್ಯಾರ್ಥಿ ನವೀನ ಅಕ್ಕಿ ಹಾಗೂ ಹ್ಯಾಕರ್ ಕಿರಣ ಚೌಹಾನಗೌಡರ ಬಂಧಿತ ಆರೋಪಿಗಳು. ಇತ್ತೀಚಿಗೆ ಪೊಲೀಸರು ಇದೇ ಕಾಲೇಜಿನ ಹಳೇ ವಿದ್ಯಾರ್ಥಿ, ಆರೋಪಿ ರಂಜನಿಕಾಂತ್​ನನ್ನು ಬಂಧಿಸಿದ್ದರು.

ಈ ಮೂವರಲ್ಲಿ ಮಾಸ್ಟರ್ ಮೈಂಡ್ ಕಿರಣ ಚೌಹಾನಗೌಡರ್ ಎಂಬುವುದು ತಿಳಿದುಬಂದಿದೆ. ಹ್ಯಾಕರ್ ಕಿರಣ ಚೌಹಾನಗೌಡರ್ ವಿದ್ಯಾರ್ಥಿನಿಯ ಇನ್​ಸ್ಟಾಗ್ರಾಮ್​ ಖಾತೆಗಳನ್ನು ಹ್ಯಾಕ್ ಮಾಡುತ್ತಿದ್ದನು. ಕಿರಣ ಮಾಡುತ್ತಿದ್ದ ಹ್ಯಾಕ್​ಗೆ ನವೀನ್ ಹಾಗೂ ರಜನಿಕಾಂತ್ ಸಾಥ್ ನೀಡುತ್ತಿದ್ದರು.

ಇದನ್ನೂ ಓದಿ: ತನ್ನೊಂದಿಗೆ ಮಾತನಾಡದ ಹುಡುಗಿಯರೇ ಇವನ ಟಾರ್ಗೆಟ್; ಆರೋಪಿ ಬಗ್ಗೆ ಸ್ಫೋಟಕ ಅಂಶ ಬಿಚ್ಚಿಟ್ಟ ಪೊಲೀಸ್​ ಆಯುಕ್ತ

ಕಿರಣ್ ಚೌಹಾನಗೌಡರ್ ಈವರೆಗೂ ಅನೇಕ‌ ಜನರ ಇನ್​ಸ್ಟಾಗ್ರಾಮ್​​ ಮತ್ತು ಫೇಸ್​​​ಬುಕ್ ಖಾತೆಗಳನ್ನು ಹ್ಯಾಕ್ ಮಾಡಿದ್ದನು. ಇದೀಗ ವಿದ್ಯಾರ್ಥಿನಿಯರ ಇನ್​ಸ್ಟಾಗ್ರಾಮ್​ ಹ್ಯಾಕ್ ಮಾಡಿದ್ದನು. ಸೈಬರ್ ಪೊಲೀಸರು ಮೂವರು ಆರೋಪಿಗಳನ್ನು ಪ್ರತಿಯೊಂದು ಆಯಾಮದಲ್ಲಿ ತನಿಖೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದಾರೆ.

ಏನಿದು ಪ್ರಕರಣ

ಆರೋಪಿ ರಜನಿಕಾಂತ್ ಕಳೆದ ಕೆಲದಿನಗಳ ಹಿಂದೆ ಇನ್​ಸ್ಟಾಗ್ರಾಮನಲ್ಲಿ Kashmira1990_0 ಹೆಸರಿನ ನಕಲಿ ಖಾತೆ ತೆರೆದು ವಿದ್ಯಾರ್ಥಿನಿಯರ ಭಾವಚಿತ್ರಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ‌ ಅಪ್ಲೋಡ್ ಮಾಡಿದ್ದನು. ಅಲ್ಲದೇ ತಾಕತ್​ ಇದ್ದರೇ ತನ್ನನ್ನು ಬಂಧಿಸುವಂತೆ ಪೊಲೀಸರಿಗೆ ಸವಾಲ್ ಹಾಕಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ