AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ತಿರುವು ಪಡೆದುಕೊಂಡ ಹುಬ್ಬಳ್ಳಿಯ ಪುಷ್ಕರಣಿ ವಿವಾದ: ದಾಖಲೆ ಸಮೇತ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು

Hubballi Pushkarani Dispute: ಹುಬ್ಬಳ್ಳಿಯ ಅಸಾರ ಓಣಿಯಲ್ಲಿ ರಸ್ತೆ ನಿರ್ಮಾಣದ ವೇಳೆ ಪುಷ್ಕರಣಿ ಮುಚ್ಚಿರುವುದು ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಹಿಂದೂ ಭಾವನೆಗಳಿಗೆ ಧಕ್ಕೆ ಎಂದು ಆರೋಪಿಸಿದರೆ, ಕಾಂಗ್ರೆಸ್ ಇದು ರಾಜಕೀಯ ಗಿಮಿಕ್ ಎಂದು ತಿರುಗೇಟು ನೀಡಿದೆ. ಬಿಜೆಪಿ ನಾಯಕರೇ ಹಿಂದೂ ದೇಗುಲಗಳು ಮತ್ತು ಐತಿಹಾಸಿಕ ಕಟ್ಟಡಗಳ ಬಳಿ ಅನುಮತಿ ಇಲ್ಲದೆ ಅಭಿವೃದ್ಧಿ ಮಾಡಿದ್ದನ್ನು ಕಾಂಗ್ರೆಸ್ ದಾಖಲೆ ಸಮೇತ ಬಹಿರಂಗಪಡಿಸಿದೆ.

ರಾಜಕೀಯ ತಿರುವು ಪಡೆದುಕೊಂಡ ಹುಬ್ಬಳ್ಳಿಯ ಪುಷ್ಕರಣಿ ವಿವಾದ: ದಾಖಲೆ ಸಮೇತ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು
ಕಾಂಗ್ರೆಸ್​​ ನಾಯಕರಿಂದ ದಾಖಲೆ ಬಿಡುಗಡೆImage Credit source: tv9 kannada
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Aug 29, 2026 | 4:05 PM

Share

ಧಾರವಾಡ, ಆಗಸ್ಟ್​ 29: ಹುಬ್ಬಳ್ಳಿಯ ಅಸಾರ ಓಣಿಯಲ್ಲಿ ಇತ್ತೀಚಿಗೆ ರಸ್ತೆ ನಿರ್ಮಾಣ ಮಾಡುವಾಗ ಅಲ್ಲಿ ಪುರಾತನ ಕಾಲದ ಪುಷ್ಕರಣಿ (Pushkarani Road Row) ಇತ್ತು ಅಂತಾ ಬಿಜೆಪಿ ಕಾಮಗಾರಿಗೆ ವಿರೋಧ ವ್ಯಕ್ತಪಡಿಸಿತ್ತು. ಇದರಿಂದಾಗಿ ಕಳೆದೊಂದು ವಾರದಿಂದ ವಾಣಿಜ್ಯ ನಗರಿ ಹುಬ್ಬಳ್ಳಿ ಕಾದ ಕೆಂಡವಾಗಿತ್ತು. ಆದರೆ ಇದೀಗ ಪುಷ್ಕರಣಿ ವಿಚಾರವಾಗಿಯೇ ಕಾಂಗ್ರೆಸ್ ಪಾಳಯ ಬೀದಿಗೆ ಇಳಿಯಲು ನಿರ್ಧರಿಸಿದೆ. ಈ ಮುಂಚೆ ಅವಳಿ ನಗರದಲ್ಲಿದ್ದ ಪುರಾತನ ಮಂದಿರ ಮತ್ತು ಕಟ್ಟಡಗಳ ಬಳಿಯೇ ಅಭಿವೃದ್ಧಿ ಕಾರ್ಯ ನಡೆಸಿರುವ ಸಂಗತಿಗಳನ್ನು ಮುಂದಿಟ್ಟುಕೊಂಡು ಬಿಜೆಪಿಗೆ ತಿರುಗೇಟು ನೀಡಿದೆ.

ಬಿಜೆಪಿ ಆರೋಪಗಳಿಗೆ ಕಾಂಗ್ರೆಸ್ ಮುಖಂಡರು ತಿರುಗೇಟು

ಹುಬ್ಬಳ್ಳಿಯ ಅಸಾರ ಓಣಿಯಲ್ಲಿ ರಸ್ತೆ ನಿರ್ಮಾಣ ಮಾಡುವಾಗ ಶ್ರೀ ಭವಾನಿ ಶಂಕರ ದೇವಸ್ಥಾನದ ಬಳಿ ಪುಷ್ಕರಣಿ ಇತ್ತು. ಅಲ್ಲಿ ಉತ್ಖನನ ನಡೆಸಬೇಕು. ಅದೊಂದು ಪುರಾತನ ದೇವಾಲಯವಾಗಿದ್ದು, ಅಲ್ಲಿದ್ದ ಪುಷ್ಕರಣಿಯನ್ನು ಮುಚ್ಚಲಾಗಿದೆ. ಇದೀಗ ಅದರ ಮೇಲೆಯೇ ರಸ್ತೆ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದು ನಮ್ಮ ಹಿಂದೂಗಳ ಭಾವನೆಗೆ ಧಕ್ಕೆ ತರುವ ವಿಷಯವಾಗಿದೆ ಅನ್ನೋದು ಬಿಜೆಪಿ ಆರೋಪವಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿಯ ಅಸಾರ ಓಣಿಯ ಪುಷ್ಕರಣಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದೇಕೆ? ಏನಿದರ ಹಿನ್ನೆಲೆ?

ಇದೀಗ ಧಾರವಾಡದ ಕಾಂಗ್ರೆಸ್ ಮುಖಂಡರು ಇದಕ್ಕೆ ತಿರುಗೇಟು ನೀಡಿದ್ದು, ಅಲ್ಲಿ ಪುಷ್ಕರಣಿಯೇ ಇರಲಿಲ್ಲ ಎಂಬ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಇದರೊಂದಿಗೆ ಅವಳಿ ನಗರದಲ್ಲಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಅವರೇ ಅಭಿವೃದ್ಧಿಪಡಿಸಿರುವ ಹುಬ್ಬಳ್ಳಿಯ ಅಮರಗೋಳದಲ್ಲಿರುವ ಬನಶಂಕರಿ ದೇವಸ್ಥಾನ ಹಾಗೂ ಧಾರವಾಡದ ಪುರಾತನ ಕಿಲ್ಲಾಗಳ ಫೋಟೋಗಳನ್ನು ಕಾಂಗ್ರೆಸ್ ನಾಯಕ ದೀಪಕ್ ಚಿಂಚೋರೆ ಬಿಡುಗಡೆ ಮಾಡಿ, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ಮಾಡಿದರು.

ಚುನಾವಣೆ ಬಂದಾಗ ಮಾತ್ರ ಧರ್ಮ ನೆನಪಾಗುತ್ತದೆಯೇ?

ಚುನಾವಣೆ ಬಂದಾಗ ಮಾತ್ರ ಬಿಜೆಪಿಯವರಿಗೆ ಧರ್ಮ ನೆನಪಾಗುತ್ತದೆ ಅಂತಾ ಆರೋಪಿಸುತ್ತಿರುವ ಕಾಂಗ್ರೆಸ್ ನಾಯಕರು, ಅದೇ ರಸ್ತೆಗೆ ಈ ಹಿಂದೆ ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗಲೇ ಅನುದಾನ ನೀಡಲಾಗಿತ್ತು ಅನ್ನೋದರ ಬಗ್ಗೆ ದಾಖಲೆ ಬಿಡುಗಡೆ ಮಾಡುವ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ. 2013 ರಲ್ಲಿಯೇ ಶೆಟ್ಟರ್ ಈ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ನೀಡಿದ್ದರು. ಆಗ ಇವರಿಗೆ ಪುಷ್ಕರಣಿ ಇರುವ ವಿಷಯ ಗೊತ್ತಿರಲಿಲ್ಲವೇ ಅನ್ನೋದು ಕಾಂಗ್ರೆಸ್ ನಾಯಕರ ಪ್ರಶ್ನೆ. ಹಲವು ವರ್ಷಗಳವರೆಗೆ ಹುಬ್ಬಳ್ಳಿಯ ಈದ್ಗಾ ಮೈದಾನದ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿಯವರು ರಾಜಕೀಯ ಮಾಡಿದರು. ಅಲ್ಲಿ ಕೊನೆಗೆ ಗಣೇಶನ ಪ್ರತಿಷ್ಠಾಪನೆ ಮಾಡಿದ ಬಳಿಕ ಇದೀಗ ಮತ್ತೊಂದು ವಿಷಯ ಬೇಕಾಗಿದೆ. ಅದಕ್ಕಾಗಿಯೇ ಪುಷ್ಕರಣಿ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ ಅನ್ನೋದು ಕೈ ನಾಯಕರ ವಾದವಾಗಿದೆ.

ಆರ್‌ಎಸ್‌ಎಸ್ ಕಚೇರಿಯವರೆಗೆ ಪಾದಯಾತ್ರೆಯ ಎಚ್ಚರಿಕೆ

ಇನ್ನು ಧಾರವಾಡದ ಮರಾಠಾ ಗಲ್ಲಿಯಲ್ಲಿರುವ ಅರವಿಂದ ಬೆಲ್ಲದ್ ಅವರ ಮನೆಯ ಬಳಿ ಇದ್ದ ಐತಿಹಾಸಿಕ ಬಾವಿಯನ್ನು ಕೂಡ ಬೆಲ್ಲದ್ ಕುಟುಂಬ ನುಂಗಿದೆ ಅನ್ನೋ ಆರೋಪ ಮಾಡಿರುವ ಕಾಂಗ್ರೆಸ್ ನಾಯಕರು, ಆ ಬಾವಿಯ ನೀರನ್ನು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಕುಡಿದಿರುವ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಒಂದು ವೇಳೆ ಇಂಥ ಪ್ರಕರಣಗಳನ್ನು ರಾಜಕೀಯಕ್ಕಾಗಿ ಎಳೆ ತರೋದು ನಿಲ್ಲಿಸದಿದ್ದರೆ ಹಿಂದೂ ಯುವಕರೊಂದಿಗೆ ಸೇರಿ ಬೆಲ್ಲದ್ ಅವರ ಮನೆಯಿಂದ ಹುಬ್ಬಳ್ಳಿಯ ಆರ್​ಎಸ್​ಎಸ್​ ಕಚೇರಿವರೆಗೆ ಪಾದಯಾತ್ರೆ ಮಾಡುವ ಎಚ್ಚರಿಕೆಯನ್ನು ದೀಪಕ್ ನೀಡಿದ್ದಾರೆ.

ಇದನ್ನೂ ಓದಿ: ಹಳೇ ಹುಬ್ಬಳ್ಳಿ ಆಸಾರ ಓಣಿಯ ಪುಷ್ಕರಣಿ ವಿವಾದ: ಎಂಎಲ್​ಸಿ ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ

ನಿರಂತರವಾಗಿ ಪುಷ್ಕರಣಿ ವಿಚಾರವಾಗಿ ಹೋರಾಟ ಮಾಡುತ್ತಿರುವ ಬಿಜೆಪಿಗೆ ಇದೀಗ ಕಾಂಗ್ರೆಸ್ ನೀಡಿರುವ​ ತಿರುಗೇಟು ಅಚ್ಚರಿ ನೀಡಿದೆ. ಇದಕ್ಕೆ ಕಮಲ ಪಾಳಯ ಯಾವ ರೀತಿ ಕೌಂಟರ್ ನೀಡುತ್ತೆ ಅನ್ನೋದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್