AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ ಗಿನ್ನಿಸ್ ರೆಕಾರ್ಡ್​ ಪಟ್ಟಿಗೆ; ವಿಶೇಷತೆ ಇಲ್ಲಿದೆ

ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆಗೊಳಿಸಿದ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಜಿ ರೈಲು ನಿಲ್ದಾಣದ ವಿಶ್ವದ ಅತಿ ಉದ್ದದ ಪ್ಲಾಟ್‌​ಫಾರಂ ಗಿನ್ನಿಸ್​ ರೆಕಾರ್ಡ್​ ಸೇರಿದೆ.

ಹುಬ್ಬಳ್ಳಿ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ ಗಿನ್ನಿಸ್ ರೆಕಾರ್ಡ್​ ಪಟ್ಟಿಗೆ; ವಿಶೇಷತೆ ಇಲ್ಲಿದೆ
ಹುಬ್ಬಳ್ಳಿ ರೈಲು ನಿಲ್ದಾಣ
ವಿವೇಕ ಬಿರಾದಾರ
|

Updated on:Mar 17, 2023 | 3:16 PM

Share

ಹುಬ್ಬಳ್ಳಿ: ಮಾ.12 ರಂದು ಪ್ರಧಾನಿ ನರೇಂದ್ರ ಮೋದಿಯವರು (PM Narendera Modi) ಲೋಕಾರ್ಪಣೆಗೊಳಿಸಿದ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಜಿ ರೈಲು ನಿಲ್ದಾಣ(Hubli Shri Siddharoodha Swamiji Railway Station) ವಿಶ್ವದ ಅತಿ ಉದ್ದದ 1ನೇ ಪ್ಲಾಟ್‌​ಫಾರಂ (World’s Longest Railway Platfrom) ಗಿನ್ನಿಸ್​ ರೆಕಾರ್ಡ್ (Guinness Record)​ ಸೇರುವ ಮೂಲಕ ಕರ್ನಾಟಕದ ಹಿರಿಮೆ ಹೆಚ್ಚಿದೆ. ನೈಋತ್ಯ ರೈಲ್ವೆಯ ಅಧಿಕೃತ ಮಾಹಿತಿ ಪ್ರಕಾರ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಸ್ವಾಮಿಜೀ ರೈಲ್ವೆ ನಿಲ್ದಾಣದ ಪ್ಲಾಟ್‌​ಫಾರಂ ಪಾದಚಾರಿ ಸಬ್‌ವೇಯೊಂದಿಗೆ 1507 ಮೀಟರ್ ಉದ್ದವನ್ನು ಹೊಂದಿದೆ. ಭವಿಷ್ಯದ ಸಾರಿಗೆ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಮಾಣ ಮಾಡಲಾಗಿದೆ. ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಜನವರಿ 12 ರಂದು ಪ್ಲಾಟ್‌​ಫಾರಂ​​ ಉದ್ದವನ್ನು ಪರಿಶೀಲಿಸಿದೆ.

ಶ್ರೀ ಸಿದ್ಧಾರೂಢ ಸ್ವಾಮಿಜಿ ಹುಬ್ಬಳ್ಳಿ ರೈಲು ನಿಲ್ದಾಣ ಪ್ಲಾಟ್‌​ಫಾರಂ

ಶ್ರೀ ಸಿದ್ಧಾರೂಢ ಸ್ವಾಮಿಜಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಇದಕ್ಕೂ ಮುನ್ನ 1ನೇ ಪ್ಲಾಟ್‌​ಫಾರಂ 550 ಮೀಟರ್‌ ಉದ್ದ ಹೊಂದಿತ್ತು. ಇದೀಗ ಈ ಪ್ಲಾಟ್​ಫಾರಂನ್ನು ವಿಸ್ತರಿಸಿ 10 ಮೀಟರ್‌ ಅಗಲದೊಂದಿಗೆ 1,505 ಮೀಟರ್​ಗೆ ವಿಸ್ತರಣೆ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ಈ ಹೊಸ ರೈಲು ಪ್ಲಾಟ್​ಫಾರಂ 1,366 ಮೀಟರ್ ಉದ್ದದ ಗೋರಖ್‌ಪುರ ರೈಲು ನಿಲ್ದಾಣವನ್ನು ಇದು ಹಿಂದಿಕ್ಕಿದೆ.

ಇದನ್ನೂ ಓದಿ: ಪ್ರಯಾಣಿಕರಿಗೆ ಬಿಗ್ ಶಾಕ್: ಹುಬ್ಬಳ್ಳಿ-ಬೆಂಗಳೂರು ಸೇರಿದಂತೆ ಇತರೆ ಪ್ಯಾಸೆಂಜರ್ ರೈಲು ಟಿಕೆಟ್​ ದರ ಏರಿಕೆ

ಇದರಿಂದ ಪ್ಲಾಟಫಾರಂಗೆ ವಿರುದ್ಧ ದಿಕ್ಕಿನಿಂದ ಏಕಕಾಲಕ್ಕೆ ಎರಡು ರೈಲುಗಳು ವಿರುದ್ಧ ದಿಕ್ಕಿನಿಂದ ಪ್ರವೇಶಿಸಬಹು ಮತ್ತು ನಿರ್ಗಮಿಸಬಹುದು. ಏಕ ಕಾಲದಲ್ಲಿ ಎರಡು ರೈಲುಗಳ ಕಾರ್ಯಾಚರಣೆಯನ್ನು ನಡೆಸುವುದರಿಂದ ವ್ಯಾಪಾರ, ಪ್ರವಾಸೋದ್ಯಮ, ವಾಣಿಜ್ಯ, ಆರ್ಥಿಕ ಚಟುವಟಿಕೆಗಳಿಗೆ ಸಹಾಯಕವಾಗಲಿದೆ.

ಹುಬ್ಬಳ್ಳಿ ರೈಲು ನಿಲ್ದಾಣ ನವೀಕರಣ, ನವ ಹೆಸರು

ರೈಲು ನಿಲ್ದಾಣ ನವೀಕರಣ ಮಾಡುವ ನಿರ್ಧಾರ ಮಾಡಲಾಗಿತ್ತು. 115 ಕೋಟಿ ರೂಪಾಯಿ ಅನುದಾನದಲ್ಲಿ 2019ರಲ್ಲಿ ಪ್ರಾರಂಭವಾದ ನವೀಕರಣ ಕಾರ್ಯ ಕೇವಲ ಎರಡೇ ವರ್ಷದಲ್ಲಿ ಪೂರ್ಣಗೊಂಡು 24 ಫೆಬ್ರವರಿ 2021ರಂದು ಲೋಕಾರ್ಪಣೆಗೊಂಡಿತ್ತು. ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ಪರಿಗಣಿಸಿ ಈಗಾಗಲೇ 5 ಪ್ಲಾಟಫಾರಂ ಹೊಂದಿದ್ದ ನಿಲ್ದಾಣದಲ್ಲಿ ಇನ್ನೂ 3 ಪ್ಲಾಟಫಾರಂ ನಿರ್ಮಿಸಲಾಗುತ್ತಿದ್ದು, ಕಾಮಗಾರಿ ಮುಗಿಯುವ ಹಂತದಲ್ಲಿದೆ. ಜಂಕ್ಷನ್ ಆಗಿರುವ ಈ ನಿಲ್ದಾಣ, ದಕ್ಷಿಣದಲ್ಲಿ ಬೆಂಗಳೂರು, ಮೈಸೂರು ಹಾಗು ಉತ್ತರದಲ್ಲಿ ಪುಣೆ, ಮುಂಬೈ, ದೆಹಲಿಗೆ ಪ್ರಯಾಣಿಸುವವರಿಗೆ ಕೇಂದ್ರವಾಗಿದೆ. 2020ರ ಸೆಪ್ಟೆಂಬರ್​ ತಿಂಗಳಲ್ಲಿ ರೈಲು ನಿಲ್ದಾಣಕ್ಕೆ ಶ್ರೀ ಸಿದ್ಧಾರೂಢ ಸ್ವಾಮಿಜಿ ರೈಲು ನಿಲ್ದಾಣವೆಂದು ನಾಮಕರಣ ಮಾಡಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:44 pm, Fri, 17 March 23

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ