Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ರೇಪ್​​ ಕೇಸ್​: ಬಂಧಿತ ಮುಫ್ತಿ ಗುಲಾಮ ಜಿಲಾನಿ ಅಜಹರಿ ಭಾರತದವನೇ ಅಲ್ಲ; ತನಿಖೆ ವೇಳೆ ಹಲವು ಅಂಶ ಬಯಲು

ಹುಬ್ಬಳ್ಳಿ ಮೂಲದ ಯುವತಿಗೆ ತನ್ನ ಮದರಸಾದಲ್ಲಿ ಕೆಲಸ ಕೊಟ್ಟು, ಬಳಿಕ ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ ನಿರಂತರವಾಗಿ ಅತ್ಯಾಚರವೆಸಗಿದ್ದ ಮುಫ್ತಿ ಗುಲಾಮ ಜಿಲಾನಿ ಅಜಹರಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ತನಿಖೆ ವೇಳೆ ಪೊಲೀಸರಿಗೆ ಹಲವು ಅಂಶ ತಿಳಿದುಬಂದಿದೆ.

ಹುಬ್ಬಳ್ಳಿ ರೇಪ್​​ ಕೇಸ್​: ಬಂಧಿತ ಮುಫ್ತಿ ಗುಲಾಮ ಜಿಲಾನಿ ಅಜಹರಿ ಭಾರತದವನೇ ಅಲ್ಲ; ತನಿಖೆ ವೇಳೆ ಹಲವು ಅಂಶ ಬಯಲು
ಆರೋಪಿ ಮುಫ್ತಿ ಗುಲಾಮ ಜಿಲಾನಿ ಅಜಹರಿ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ವಿವೇಕ ಬಿರಾದಾರ

Updated on:Jan 01, 2024 | 11:14 AM

ಹುಬ್ಬಳ್ಳಿ, ಜನವರಿ 01: ಯುವತಿಗೆ ಮತ್ತು ಬರುವ ಔಷಧಿ ಕೊಟ್ಟು ಅತ್ಯಾಚಾರವೆಸಿಗಿದ್ದ ಆರೋಪಿ ಮುಫ್ತಿ (ಮುಸ್ಲಿಂ ಧರ್ಮ ಗುರು) ಗುಲಾಮ ಜಿಲಾನಿ ಅಜಹರಿ ಭಾರತದವನೇ (India) ಅಲ್ಲ ಎಂಬ ಅಂಶ ಪೊಲೀಸರ (Police) ತನಿಖೆಯಲ್ಲಿ ತಿಳಿದುಬಂದಿದೆ. ಹೌದು ಮುಫ್ತಿ ಗುಲಾಮ ಜಿಲಾನಿ ಅಜಹರಿ ಮೂಲತಃ ನೇಪಾಳದವನು. ಈತನನ್ನು ಅಲ್ಲಿ ಶೇರ್ ಎ ನೇಪಾಳ (Nepal) ಎಂದು ಕರೆಯಲಾಗುತ್ತಿತ್ತು. ಕಳೆದ ಆರು ವರ್ಷಗಳ ಹಿಂದೆ ಮಧ್ಯಪ್ರದೇಶದ ಖಂಡವಾ ಎಂಬ ಪಟ್ಟಣಕ್ಕೆ ಬಂದು ನೆಲೆಸಿದ್ದಾನೆ. ಮುಫ್ತಿ ಗುಲಾಮ ಜಿಲಾನಿ ಅಜಹರಿ ನಕಲಿ‌ ದಾಖಲೆಗಳನ್ನು ಸೃಷ್ಟಿಸಿ ಭಾರತದಲ್ಲಿ ನೆಲೆಸಿದ್ದಾನೆ. ಖಂಡವಾದಲ್ಲಿ ಮದರಸಾವೊಂದನ್ನು ಪ್ರಾರಂಭಿಸಿದ್ದಾನೆ.

ಮುಫ್ತಿ ಗುಲಾಮ ಜಿಲಾನಿ ಅಜಹರಿ ಈಗಾಗಲೇ ಎರಡು ಮದುವೆಯಾಗಿದ್ದಾನೆ. ಮೊದಲನೇ ಪತ್ನಿ ನೇಪಾಳದವಳು. ಮೊದಲ ಪತ್ನಿಗೆ ವಿಚ್ಛೇದನ ನೀಡಿ ಬಳಿಕ ಈತ ನೇಪಾಳದಿಂದ ಭಾರತಕ್ಕೆ ಬಂದು ನೆಲೆಸಿದ್ದಾನೆ. ನೇಪಾಳ ಪೌರತ್ವ ಹೊಂದಿರುವ ಈತ, ಖಂಡವಾಗೆ ಬಂದು ನೆಲೆಸಿದ ಬಳಿಕ ನಕಲಿ ಆಧಾರ್ ಕಾರ್ಡ್, ಪ್ಯಾನ್​ ಕಾರ್ಡ್ ಹಾಗೂ ಮತದಾರರ ಗುರುತಿನ ಚೀಟಿ ಮಾಡಿಸಿಕೊಂಡಿದ್ದಾನೆ. ನೇಪಾಳದಲ್ಲಿ ಈತನ ಕುಟುಂಬವಿದ್ದು, ಅಲ್ಲಿಗೆ ಆಗಾಗ ಹೋಗಿ ಬರುತ್ತಿದ್ದನು.

ಗುಲಾಮ ಜಿಲಾನಿ ಅಜಹರಿ ದೇಶದ ವಿವಿಧ ರಾಜ್ಯಗಳಿಗೆ ಹೋಗಿ ಧಾರ್ಮಿಕ ಪ್ರವಚನ ನೀಡಿ ಜನಮನ್ನಣೆ ಗಳಿಸಿದ್ದಾನೆ. ಅಲ್ಲದೆ ಭಾರತದ ಹೆಸರಾಂತ ಧಾರ್ಮಿಕ ಪ್ರವಚನಕಾರರ ವಿರುದ್ಧ ಹೇಳಿಕೆಗಳನ್ನು ಕೊಡುತ್ತಿದ್ದನು ಎಂದು ಹಳೇ ಹುಬ್ಬಳ್ಳಿ ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಸದ್ಯ ಈತನ ಭಾರತೀಯ ಪೌರತ್ವದ ಬಗ್ಗೆಯೂ ತನಿಖೆಯಾಗಬೇಕಾಗಿದೆ.

ಇದನ್ನೂ ಓದಿ: ಕಲಬುರಗಿ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷ ಜೈಲು; ಕೋರ್ಟ್​

ಇನ್ನು ನೇಪಾಳದವನಾದ ಗುಲಾಮ ಜಿಲಾನಿ ಅಜಹರಿ ಭಾರತದೊಳಗೆ ನುಸುಳಿ ಇಂತಹ ಕೃತ್ಯ ಮಾಡಿದ್ದನ್ನು ಮೌಲ್ವಿಗಳು ಖಂಡಿಸಿದ್ದಾರೆ.

ಏನಿದು ಪ್ರಕರಣ

ಹುಬ್ಬಳ್ಳಿ ಮೂಲದ 23 ವರ್ಷದ ಯುವತಿ, ಮಧ್ಯಪ್ರದೇಶದ ಖಂಡವಾದಲ್ಲಿರುವ ಮುಫ್ತಿ ಗುಲಾಮ ಜಿಲಾನಿ ಅಜಹರಿಯ ಮದರಸಾದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಗುಲಾಮ ಜಿಲಾನಿ ಅಜಹರಿ ಯುವತಿಯ ತಂದೆಗೆ ಪರಿಚಯಸ್ಥನಾಗಿದ್ದನು. ಹೀಗಾಗಿ ಗುಲಾಮ ಜಿಲಾನಿ ಅಜಹರಿ ಯುವತಿಯ ತಂದೆಗೆ ನಿಮ್ಮ ಮಗಳಿಗೆ ನಮ್ಮ ಮದರಸಾದಲ್ಲಿ ಕೆಲಸ ಕೊಡಿಸುತ್ತೇನೆ ಎಂದು ಹೇಳಿ ಖಂಡವಾ ಪಟ್ಟಣಕ್ಕೆ ಕರೆಸಿಕೊಂಡಿದ್ದನು. ಖಂಡವಾದಲ್ಲಿ  ಮುಫ್ತಿ ಯುವತಿಗೆ ಮದರಸಾದಲ್ಲಿ ಕೆಲಸ ಕೊಡಸಿದ್ದನು.

ಬಳಿಕ ಯುವತಿಯನ್ನು ಪುಸಲಾಯಿಸಿದ ಮುಫ್ತಿ ಗುಲಾಮ ಜಿಲಾನಿ ಅಜಹರಿ, ನನ್ನ ಮೊದಲ ಹೆಂಡತಿಗೆ ವಿಚ್ಚೆದನ ನೀಡಿದ್ದೇನೆ. ನಾನು ನಿನ್ನನ್ನು ಮದುವೆಯಾಗುತ್ತೇನೆ ಎಂದು ಹೇಳುತ್ತಲೇ ಯುವತಿಗೆ ಮತ್ತು ಬರುವ ಔಷಧ ಕೊಟ್ಟು ನಿರಂತರವಾಗಿ ಅತ್ಯಾಚಾರವೆಸಗಿದ್ದನು. ಈ ಬಗ್ಗೆ ಸಂತ್ರಸ್ತೆ ಹಳ್ಳೇ ಹುಬ್ಬಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಳು. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:13 am, Mon, 1 January 24

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ