ಹುಬ್ಬಳ್ಳಿ ಗೋಕುಲ್ ರಸ್ತೆಯ ಬಳಿ ಭೀಕರ ಅಪಘಾತ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು!
ಹುಬ್ಬಳ್ಳಿ ಗೋಕುಲ್ ರಸ್ತೆಯ ಅರ್ಬನ್ ಓಯಸಿಸ್ ಮಾಲ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ರಸ್ತೆಯ ಮೇಲೆ ಹರಿದುಬಿದ್ದ ಕೇಬಲ್ ವೈರ್‌ಗೆ ಸಿಲುಕಿ ನಿಯಂತ್ರಣ ಕಳೆದುಕೊಂಡ ಬೈಕ್ ಸವಾರರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರು. ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಹುಬ್ಬಳ್ಳಿ, ಮಾರ್ಚ್ 24: ನಗರದ ಗೋಕುಲ್ ರಸ್ತೆಯಲ್ಲಿರುವ ಅರ್ಬನ್ ಓಯಸಿಸ್ ಮಾಲ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road accident) ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಸ್ತೆ ಮೇಲೆ ಕೆಬಲ್ ವೈರ್ ಹರಿದು ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದ್ದು, ಕಳೆದ ರಾತ್ರಿ ನಡೆದ ಈ ದುರ್ಘಟನೆಯು ಪ್ರದೇಶದಲ್ಲಿ ಆಘಾತ ಮೂಡಿಸಿದೆ.
ಮೃತರನ್ನು ತಾಜ್ ನಗರ ನಿವಾಸಿಗಳಾದ ಫಯಾಜ್ (25) ಮತ್ತು ಮೋಹಿದ್ (27) ಎಂದು ಗುರುತಿಸಲಾಗಿದೆ. ರಸ್ತೆ ಮೇಲೆ ಕೇಬಲ್ ವೈರ್ ಹರಿದು ಬಿದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿ ಸಾಗುತ್ತಿದ್ದ ಇಬ್ಬರು ಯುವಕರು ಆ ವೈರ್‌ಗೆ ಸಿಲುಕಿ ನಿಯಂತ್ರಣ ಕಳೆದುಕೊಂಡು ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ಪರಿಣಾಮವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಹುಬ್ಬಳ್ಳಿ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಬಳಿ ಖಾಸಗಿ ಬಸ್ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಕುಂದಾಪುರ ಮೂಲದ ಕೃಷ್ಣಶೆಟ್ಟಿ (42) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಹಿರಿಸಾವೆ ಹಾಗೂ ಬೆಳ್ಳೂರು ಕ್ರಾಸ್‌ನ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಿದ್ರೆ ಮಂಪರಿನಿಂದ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:31 am, Tue, 24 March 26



