Hubballi News: ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಟಿಕೆಟ್‌ಗಾಗಿ ಕಾಂಗ್ರೆಸ್ ಕಚೇರಿಯಲ್ಲಿ ಕಿತ್ತಾಟ, ಜಯಘೋಷ

ನಮ್ ನಾಯಕರಿಗೆ ಟಿಕೆಟ್ ಕೊಡಿ, ಇಲ್ಲ ಇಲ್ಲ.. ನಮ್ ನಾಯಕರಿಗೆ ಟಿಕೆಟ್ ಕೊಡಿ.. ಇದು ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಚುನಾವಣೆ ಟಿಕೆಟ್​ಗಾಗಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ರಜತ್ ಉಳ್ಳಾಗಡ್ಡಿಮಠ, ಅನಿಲಕುಮಾರ್ ಪಾಟೀಲ್ ಬೆಂಬಲಿಕರ ನಡುವಿನ ಕಿತ್ತಾಟ.

Hubballi News: ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಟಿಕೆಟ್‌ಗಾಗಿ ಕಾಂಗ್ರೆಸ್ ಕಚೇರಿಯಲ್ಲಿ ಕಿತ್ತಾಟ, ಜಯಘೋಷ
ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದ ರಜತ್ ಉಳ್ಳಾಗಡ್ಡಿಮಠ ಮತ್ತು ಅನಿಲಕುಮಾರ್ ಪಾಟೀಲ್ ಬೆಂಬಲಿಗರ ನಡುವೆ ಕಿತ್ತಾಟ
Follow us
TV9 Web
| Updated By: Digi Tech Desk

Updated on:Dec 27, 2022 | 11:43 AM

ಹುಬ್ಬಳ್ಳಿ: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Election 2023) ಸಮೀಪಿಸುತ್ತಿದ್ದಂತೆ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳ ನಡುವೆ ಪೈಪೋಟಿ ನಡೆಯಲು ಆರಂಭವಾಗಿದೆ. ತಮ್ಮ ನಾಯಕರಿಗೆ ಟಿಕೆಟ್ ಕೊಡುವಂತೆ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ (Hubballi Congress Office)ಯಲ್ಲಿ ಕಿತ್ತಾಟ ನಡೆದಿದೆ. ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದ ರಜತ್ ಉಳ್ಳಾಗಡ್ಡಿಮಠ (Rajat Ullagaddimath) ಮತ್ತು ಅನಿಲಕುಮಾರ್ ಪಾಟೀಲ್ (Anil Kuma Patil) ಬೆಂಬಲಿಗರ ನಡುವೆ ಗಲಾಟೆ ನಡೆದಿದ್ದು, ತನ್ನ ನಾಯಕರಿಗೆ ಜಯಘೋಷಗಳನ್ನು ಕೂಡ ಕೂಗಿದ್ದಾರೆ.

ಅಭ್ಯರ್ಥಿಗಳ ಆಯ್ಕೆ ಕುರಿತು ಹುಬ್ಬಳ್ಳಿಯ ಕಾರವಾರ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ನಿನ್ನೆ (ಡಿ.26) ಸಂಜೆ ಸಭೆ ನಡೆಸಲಾಯಿತು. ಮಾಜಿ ಸಚಿವ ಆರ್.ವಿ. ದೇಶಪಾಂಡೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ, ಗ್ರಾಮೀಣ ಜಿಲ್ಲಾ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಮಿತಿ ಸಭೆ ಮತ್ತು ಪ್ರಕ್ರಿಯೆ ನಡೆಯಿತು. ಕಾಂಗ್ರೆಸ್‌ನ ಹಿರಿಯ ಮುಖಂಡರು ಸಂದರ್ಶನದ ರೀತಿಯಲ್ಲಿ ಕೆಪಿಸಿಸಿಗೆ ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ್ದ ಆಕಾಂಕ್ಷಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ: ಕೊಡಗಿನಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆ ಪ್ರಕ್ರಿಯೆ ಬಿರುಸು: ಮೂವರ ಹೆಸರು ಎಐಸಿಸಿ ಚುನಾವಣಾ ಘಟಕಕ್ಕೆ

ಟಿಕೆಟ್ ಆಕಾಂಕ್ಷಿಗಳಾದ ರಜತ್ ಉಳ್ಳಾಗಡ್ಡಿಮಠ ಮತ್ತು ಅನಿಲಕುಮಾರ್ ಪಾಟೀಲ್ ಅವರು ಕೆಪಿಸಿಸಿಗೆ ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ್ದು, ಸಭೆಯಲ್ಲಿ ಬೆಂಬಲಿಗ ಕಾರ್ಯಕರ್ತರ ದಂಡೇ ಆಗಮಿಸಿತ್ತು. ಟಿಕೆಟ್ ಆಕಾಂಕ್ಷಿಗಳು ತಮ್ಮ ಹತ್ತಾರು ಬೆಂಬಲಿಗರೊಂದಿಗೆ ಬಂದು ಶಕ್ತಿಪ್ರದರ್ಶನ ಮಾಡಿದರು. ಇದೇ ವೇಳೆ ಕಾಂಗ್ರೆಸ್ ಕಚೇರಿಯಲ್ಲಿ ಆಕಾಂಕ್ಷಿಗಳ ಬೆಂಬಲಿಗರ ನಡುವೆ ಮಾತಿನ ಚಕಮಕಿಯೂ ನಡೆಯಿತು.

ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದ ರಜತ್ ಉಳ್ಳಾಗಡ್ಡಿಮಠ, ಅನಿಲಕುಮಾರ್ ಪಾಟೀಲ್ ಬೆಂಬಲಿಗರ ನಡುವೆ ಗಲಾಟೆ ನಡೆದಿದ್ದು, ಪಕ್ಷದ ವೀಕ್ಷಕರ ಎದುರು ರಜತ್​​ಗೆ ಟಿಕೆಟ್ ನೀಡಬೇಕೆಂದು ಕೆಲವರು ಹೇಳಿದರೆ, ಇನ್ನೂ ಕೆಲವರು ಅನಿಲಕುಮಾರ್‌ಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು. ಅಲ್ಲದೆ ತಮ್ಮ ನಾಯಕರಿಗೆ ಟಿಕೆಟ್‌‌ ನೀಡಬೇಕೆಂದು ಜಯಘೋಷ ಹಾಕಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:06 am, Tue, 27 December 22

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ