Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಪ್ರಕರಣ ಖಂಡಿತವಾಗಿ ಬಿದ್ದು ಹೋಗುತ್ತದೆ: ಕರಸೇವಕ ಶ್ರೀಕಾಂತ್ ಪರ ವಕೀಲರು ಹೀಗೆ ಹೇಳಿದ್ದೇಕೆ?

ಡಿಸೆಂಬರ್​ 5, 1992 ರಂದು ಹುಬ್ಬಳ್ಳಿ ನಗರದಲ್ಲಿ ದೊಡ್ಡ ಗಲಭೆಯೇ ಸಂಭವಿಸಿತ್ತು. ಈ ಗಲಭೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದಡಿ ಶ್ರೀಕಾಂತ ಪೂಜಾರಿ ಎಂಬುವರನ್ನು ಪೊಲೀಸರು 30 ವರ್ಷದ ಬಳಿಕ ಬಂಧಿಸಿದ್ದಾರೆ. ಇದಕ್ಕೆ ರಾಜ್ಯ ಬಿಜೆಪಿ ನಾಯಕರು ಮತ್ತು ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ.

ಈ ಪ್ರಕರಣ ಖಂಡಿತವಾಗಿ ಬಿದ್ದು ಹೋಗುತ್ತದೆ: ಕರಸೇವಕ ಶ್ರೀಕಾಂತ್ ಪರ ವಕೀಲರು ಹೀಗೆ ಹೇಳಿದ್ದೇಕೆ?
ಶ್ರೀಕಾಂತ್ ಪೂಜಾರಿ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ವಿವೇಕ ಬಿರಾದಾರ

Updated on: Jan 05, 2024 | 10:09 AM

ಹುಬ್ಬಳ್ಳಿ, ಜನವರಿ 05: ಹುಬ್ಬಳ್ಳಿಯಲ್ಲಿ (Hubballi) ನಡೆದಿದ್ದ ಗಲಭೆ ಪ್ರಕರಣವನ್ನು ಪೊಲೀಸರು ರೀ ಓಪನ್ ಮಾಡಿದ್ದು, ಇದಕ್ಕೆ ರೋಚಕ ಟ್ವಿಸ್ಟ್​​ ಸಿಕ್ಕಿದೆ. 1992ರಲ್ಲಿ ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ (Dharwad) ನ್ಯಾಯಲಯದಲ್ಲಿ ಮತ್ತು ಹುಬ್ಬಳ್ಳಿ ಪೊಲೀಸರ ಹತ್ತಿರ ಕಂಪ್ಲೆಂಟ್ ಮತ್ತು ಎಫ್​ಐಆರ್ ಕಾಫಿಯೇ ಇಲ್ಲ. ಇದು ಇಲ್ಲದೆ ಪೊಲೀಸರು ಶ್ರೀಕಾಂತ್ ಪೂಜಾರಿಯನ್ನು ಏಕೆ ಬಂಧನ ಮಾಡಿದರು ಎಂದು ಶ್ರೀಕಾಂತ್ ಪೂಜಾರಿ ಪರ ವಕೀಲ ಸಂಜೀವ್ ಎಂ ಬಡಸ್ಕರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಟಿವಿ9 ಜೊತೆ ಮಾತನಾಡಿದ ಅವರು ಈ ಪ್ರಕರಣ ಖಂಡಿತವಾಗಿ ಬಿದ್ದು ಹೋಗುತ್ತದೆ. ಶ್ರೀಕಾಂತ್ ಪೂಜಾರಿಗೆ ಪ್ರಕರಣದಲ್ಲಿ ಖಂಡಿತವಾಗಿ ಜಾಮೀನು ‌ಸಿಗುತ್ತದೆ ಎಂದರು.

ಶ್ರೀಕಾಂತ್​ ಪೂಜಾರಿ ಬಂಧನವೇಕೆ

ಶ್ರೀಕಾಂತ್​​ ಪೂಜಾರಿ 1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿಯಾಗಿದ್ದಾರೆ. ಗಲಭೆ ವೇಳೆ ಶ್ರೀಕಾಂತ್​ ಪೂಜಾರಿ ಅಡಕೆ ಮಾರಾಟ ಮಳಿಗೆಗೆ ​​ಬೆಂಕಿ ಹಚ್ಚಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣದಲ್ಲಿ ಜಾಮೀನು ಪಡೆದ ನಂತರ ಶ್ರೀಕಾಂತ್ ಪೂಜಾರಿ​ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಹೀಗಾಗಿ ನ್ಯಾಯಾಲಯ ಶ್ರೀಕಾಂತ್ ಪೂಜಾರಿ ವಿರುದ್ಧ ವಾರಂಟ್ ಹೊರಡಿಸಿತ್ತು. ಹೀಗಾಗಿ 31 ವರ್ಷಗಳ ನಂತರ ಹುಬ್ಬಳ್ಳಿ ಶಹರ ಠಾಣೆ ಪೊಲೀಸರು ಶ್ರೀಕಾಂತ್​ ಪೂಜಾರಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಶ್ರೀಕಾಂತ್ ಪೂಜಾರಿ ಬಂಧನ ಕೇಸ್​​: ಆರ್​ ಅಶೋಕ್‌ ಸೇರಿ ಬಿಜೆಪಿಯ 43 ಮುಖಂಡರ ವಿರುದ್ಧ ದೂರು

ಪೊಲೀಸರು ಶ್ರೀಕಾಂತ ಪೂಜಾರಿ 14 ದಿನಗಳವರೆಗೆ ನ್ಯಾಯಾಂಗ ಬಂಧನದಲ್ಲಿದ್ದರು. ಹುಬ್ಬಳ್ಳಿಯ ಉಪ ಕಾರಾಗೃಹದಲ್ಲಿ ಶ್ರೀಕಾಂತ ಪೂಜಾರಿ ಅವರನ್ನು ಇಡಲಾಗಿದೆ. ಶ್ರೀಕಾಂತ್ ಪೂಜಾರಿ ಅವರ ಬಿಡುಗಡೆಗಾಗಿ ಬಿಜೆಪಿ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ಮಾಡಿತ್ತು. ಬಿಜೆಪಿ ನಾಯಕರು ಪೊಲೀಸ್ ಠಾಣೆಗೂ ಮುತ್ತಿಗೆ ಹಾಕಲು ಯತ್ನಿಸಿದ್ದರು.

ಶ್ರೀಕಾಂತ್ ಬಿಡುಗಡೆ ಸಾಧ್ಯತೆ

ಶ್ರೀಕಾಂತ್​ ಪೂಜಾರಿ ಪರ ವಕೀಲರು ಐದನೇಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೆ ಹುಬ್ಬಳ್ಳಿ ಶಹರ ಪೋಲಿಸರಿಂದ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ತುರ್ತು ಪ್ರಕರಣ ಎಂದು ಪರಿಗಣಿಸಿ ನ್ಯಾಯಾಲಯ ಗುರುವಾರ (ಜ.05) ಮಧ್ಯಾಹ್ನ ವಿಚಾರಣೆ ಕೈಗೆತ್ತಿಕೊಂಡಿತ್ತು.

ಶ್ರೀಕಾಂತ್ ಪೂಜಾರಿಗೆ ಜಾಮೀನು ನೀಡುವಂತೆ ವಕೀಲ ಸಂಜೀವ್ ಬಡಸ್ಕರ್ ವಾದ ಮಂಡಿಸಿದ್ದರು. ಪ್ರತಿವಾದಿಯಾಗಿ ಸರ್ಕಾರಿ ವಕೀಲರು 31 ವರ್ಷದಿಂದ ತಲೆಮರೆಸಿಕೊಂಡಿದ್ದು, ಜಾಮೀನು ನೀಡದಂತೆ ವಾದ ಮಂಡಿಸಿದ್ದರು. ಇದಕ್ಕೆ ಶ್ರೀಕಾಂತ್ ಪರ ವಕೀಲರು, ಶ್ರೀಕಾಂತ್ ಪೂಜಾರಿ ಎಲ್ಲಿಯೂ ಹೋಗಿಲ್ಲ, ಕಳೆದ‌ 40 ವರ್ಷದಿಂದ‌ ಒಂದೇ ವಿಳಾಸದಲ್ಲಿದ್ದಾರೆ. ಈಗಾಗಲೇ ಆತನ ವಿವಿಧ ಪ್ರಕರಣ ದಾಖಲಿಸಿದಾಗಲೂ‌ ಕೋರ್ಟ್​ಗೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದಾರೆ. ವಿಚಾರಣೆಗೆ ಕರೆದಾಗ ಪೊಲೀಸರ ಮುಂದೆಯೂ ಹಾಜರಾಗಿದ್ದಾರೆ. ಹೀಗಾಗಿ ಶ್ರೀಕಾಂತ್ ಪೂಜಾರಿ ಅವರಿಗೆ ಜಾಮೀನು ನೀಡುವಂತೆ ವಾದ ಮಂಡಿಸಿದ್ದಾರೆ. ಎರಡೂ ಕಡೆಯ ವಾದ – ಪ್ರತಿವಾದವನ್ನು ಆಲಿಸಿರುವ ನ್ಯಾಯಾಧೀಶರು ಇಂದು ತೀರ್ಪು ನೀಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ