ನಿವೃತ್ತಿ ಹೊಂದಬೇಕಿದ್ದ ಯೋಧ ಆತ್ಮಹತ್ಯೆ, ಇಂದು ಸ್ವಗ್ರಾಮಕ್ಕೆ ಪಾರ್ಥಿವ ಶರೀರ

|

Updated on: Feb 01, 2020 | 2:23 PM

ಹುಬ್ಬಳ್ಳಿ: ಜಮು ಕಾಶ್ಮೀರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಯೋಧನ ಪಾರ್ಥಿವ ಶರೀರ ಕುಂದಗೋಳ ತಾಲೂಕಿನ ಬರದ್ವಾಡ ಸ್ವಗ್ರಾಮಕ್ಕೆ ಆಗಮಿಸಿದೆ. ಮೃತ ಯೋಧ ಈಶ್ವರಪ್ಪ ಸೂರಣಗಿ ಜನವರಿ 30 ರಂದು ಜಮ್ಮು ಕಾಶ್ಮೀರದಲ್ಲಿ ತಮ್ಮ ಸರ್ವಿಸ್ ರೈಫಲ್​ನಿಂದ ತಲೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇಂದು ಬೆಳಿಗ್ಗೆ ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ ಮೂಲಕ ಗುಡಗೇರಿ ಗ್ರಾಮಕ್ಕೆ ಪಾರ್ಥಿವ ಶರೀರ ಆಗಮಿಸಿದೆ. ಗುಡಗೇರಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ‌ಯೋಧನ ಪಾರ್ಥಿವ ಶರೀರದ ಮೆರವಣಿಗೆ ಮಾಡಲಾಗುತ್ತಿದೆ. ಬಳಿಕ ಯೋಧನ ಸ್ವಗ್ರಾಮದಲ್ಲಿ […]

ನಿವೃತ್ತಿ ಹೊಂದಬೇಕಿದ್ದ ಯೋಧ ಆತ್ಮಹತ್ಯೆ, ಇಂದು ಸ್ವಗ್ರಾಮಕ್ಕೆ ಪಾರ್ಥಿವ ಶರೀರ
Follow us on

ಹುಬ್ಬಳ್ಳಿ: ಜಮು ಕಾಶ್ಮೀರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಯೋಧನ ಪಾರ್ಥಿವ ಶರೀರ ಕುಂದಗೋಳ ತಾಲೂಕಿನ ಬರದ್ವಾಡ ಸ್ವಗ್ರಾಮಕ್ಕೆ ಆಗಮಿಸಿದೆ. ಮೃತ ಯೋಧ ಈಶ್ವರಪ್ಪ ಸೂರಣಗಿ ಜನವರಿ 30 ರಂದು ಜಮ್ಮು ಕಾಶ್ಮೀರದಲ್ಲಿ ತಮ್ಮ ಸರ್ವಿಸ್ ರೈಫಲ್​ನಿಂದ ತಲೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇಂದು ಬೆಳಿಗ್ಗೆ ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ ಮೂಲಕ ಗುಡಗೇರಿ ಗ್ರಾಮಕ್ಕೆ ಪಾರ್ಥಿವ ಶರೀರ ಆಗಮಿಸಿದೆ. ಗುಡಗೇರಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ‌ಯೋಧನ ಪಾರ್ಥಿವ ಶರೀರದ ಮೆರವಣಿಗೆ ಮಾಡಲಾಗುತ್ತಿದೆ. ಬಳಿಕ ಯೋಧನ ಸ್ವಗ್ರಾಮದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು ನಂತರ ಅಂತ್ಯಕ್ರಿಯೇ ನಡೆಯಲಿದೆ.

ಮೃತ ಯೋಧ ಕಳೆದ 21 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಜನವರಿ 7 ರಂದು ಊರಿಗೆ ಬಂದು ಹೋಗಿದ್ದರು. ಪ್ರಸ್ತುತ ಜಮ್ಮುವಿನ ಸಿ.ಆರ್.ಪಿ.ಎಫ್. ಬೆಟಾಲಿಯನ್​ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕೆಲವೇ ತಿಂಗಳುಗಳಲ್ಲೇ ನಿವೃತ್ತಿ ಕೂಡ ಹೊಂದುವವರಿದ್ದರು.  ಇದೀಗ ಯೋಧನ ಸಾವು ಗ್ರಾಮವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಮೃತ ಯೋಧ ಹೆಂಡತಿ, ಇಬ್ಬರು ಮಕ್ಕಳು ಹಾಗೂ ತಂದೆ-ತಾಯಿಯನ್ನು ಅಗಲಿದ್ದಾರೆ. ಯೋಧನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Published On - 12:52 pm, Sat, 1 February 20