AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾತ್ರೆ ವಿಚಾರಕ್ಕೆ ಗಲಾಟೆ: ತಂದೆಗೆ ಚಾಕುವಿನಿಂದ 4 ಬಾರಿ ಇರಿದ ಮಗ

ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ಅದರಗುಂಚಿ ಗ್ರಾಮದಲ್ಲಿ ಪಾತ್ರೆ ವಿವಾದದಿಂದಾಗಿ ಮಗ ತಂದೆಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. 72 ವರ್ಷದ ಯಲ್ಲಪ್ಪ ಸಂಕುದ್ ಅವರಿಗೆ ನಾಲ್ಕು ಕಡೆ ಚಾಕು ಇರಿತವಾಗಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯಿಂದ ಕುಟುಂಬದಲ್ಲಿ ಆತಂಕ ಮನೆ ಮಾಡಿದೆ.

ಪಾತ್ರೆ ವಿಚಾರಕ್ಕೆ ಗಲಾಟೆ: ತಂದೆಗೆ ಚಾಕುವಿನಿಂದ 4 ಬಾರಿ ಇರಿದ ಮಗ
ಆರೋಪಿ ಮಹಾಂತೇಶ್​, ಯಲಪ್ಪ
ಸಂಜಯ್ಯಾ ಚಿಕ್ಕಮಠ
| Edited By: |

Updated on:Aug 22, 2025 | 9:05 PM

Share

ಹುಬ್ಬಳ್ಳಿ, ಆಗಸ್ಟ್​ 22: ಕ್ಷುಲ್ಲಕ ಕಾರಣಕ್ಕೆ ಮಗ ಚಾಕುವಿನಿಂದ ತಂದೆಗೆ ಇರಿದ ಘಟನೆ ಧಾರವಾಡ (Dharwad) ಜಿಲ್ಲೆಯ ಹುಬ್ಬಳ್ಳಿ (Hubballi) ತಾಲೂಕಿನ ಅದರಗುಂಚಿ ಗ್ರಾಮದಲ್ಲಿ ನಡೆದಿದೆ. ಗಾಯಾಳು ಯಲ್ಲಪ್ಪ ಸಂಕುದ್​ (72) ಅವರನ್ನು ಹುಬ್ಬಳ್ಳಿ ಕಿಮ್ಸ್​​ ಆಸ್ಪತ್ರೆಗೆ ದಾಖಲಾಗಿದೆ. ಮಹಾಂತೇಶ್​ ಚಾಕುವಿನಿಂದ ಆರೋಪಿ.

ಶುಕ್ರವಾರ (ಆ.22) ಮುಂಜಾನೆ 8 ಗಂಟೆ ಸುಮಾರಿಗೆ ಯಲ್ಲಪ್ಪ ಮತ್ತು ಪುತ್ರ ಮಹಾಂತೇಶ್​ ನಡುವೆ ಪಾತ್ರೆ ವಿಚಾರಕ್ಕೆ ಗಲಾಟೆಯಾಗಿದೆ. ಗಲಾಟೆ ತಾರಕಕ್ಕೆ ಏರಿದ್ದು, ಮಹಾಂತೇಶ್​ ಚಾಕುವಿನಿಂದ ತಂದೆ ಯಲ್ಲಪ್ಪನಿಗೆ ನಾಲ್ಕು ಕಡೆ ಇರಿದಿದ್ದು, ಚಾಕು ದೇಹದಲ್ಲಿಯೇ ಸಿಲುಕಿತ್ತು. ಚಾಕು ಸಮೇತ ಕುಟುಂಬಸ್ಥರು ಯಲ್ಲಪ್ಪರನ್ನು ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ, ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಯಲ್ಲಿ ಯಲ್ಲಪ್ಪ ಅವರು ಚಿಕಿತ್ಸೆ ಪಡೆಯುತ್ತಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಯಲ್ಲಪ್ಪ ಅವರ ಹೊಟ್ಟೆ, ಬೆನ್ನು, ಎದೆ ಸೇರಿದಂತೆ ನಾಲ್ಕು ಕಡೆ ಚಾಕುವಿನಿಂದ ಇರಿಯಲಾಗಿದೆ.

ಯಲ್ಲಪ್ಪ ದಂಪತಿಗೆ ಮೂರು ಜನ ಮಕ್ಕಳಿದ್ದಾರೆ. ಆರೋಪಿ ಮಹಾಂತೇಶ್​ನೇ ಹಿರಿಯ ಮಗ. ಆದರೆ, ಮಹಾಂತೇಶ್ ತಂದೆಯ ಜೊತೆ ಇಲ್ಲ. ತನ್ನ ಸಹೋದರರು ಮತ್ತು ತಾಯಿ ಜೊತೆ ಬೇರೆ ಮನೆ ಮಾಡಿಕೊಂಡು ಇದ್ದಾನೆ. ಯಲ್ಲಪ್ಪ ತನ್ನ ತಂದೆ-ತಾಯಿ ಜೊತೆ ಪ್ರತ್ಯೇಕ ಮನೆಯಲ್ಲಿ ವಾಸವಾಗಿದ್ದಾರೆ. ಕಳೆದ ಹಲವು ದಿನಗಳಿಂದ ಹಣಕಾಸು ವಿಚಾರಕ್ಕೆ ತಂದೆ ಮತ್ತು ಮಕ್ಕಳ ನಡುವೆ ಗಲಾಟೆ ಆಗುತ್ತಿತ್ತು.

ಇದನ್ನೂ ಓದಿ: ಥಿನ್ನರ್ ತಂದ ಆಪತ್ತು; ಮಗ ಸಾವು, ತಂದೆ ಸ್ಥಿತಿ ಚಿಂತಾಜನಕ

ಶುಕ್ರವಾರ ಮುಂಜಾನೆ ಯಲ್ಲಪ್ಪ ಇದ್ದ ಮನೆಗೆ ಬಂದಿದ್ದ ಮಹಾಂತೇಶ್​, “ನನ್ನ ತಾಯಿ ತವರು ಮನೆಯಿಂದ ತಂದಿದ್ದ ಪಾತ್ರೆಯನ್ನು ಕೊಡುವಂತೆ ಕೇಳಿದ್ದಾನೆ. ಈ ಸಮಯದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿಯಾಗಿದ್ದು, ಜಗಳಕ್ಕೆ ತಿರುಗಿದೆ. ಗಲಾಟೆ ತಾರಕಕ್ಕೆ ಏರಿದ್ದು, ಮಹಾಂತೇಶ್​ ಮನೆಯಿಂದ ತಗೆದುಕೊಂಡು ಬಂದಿದ್ದ ಚಾಕುವಿನಿಂದ ಯಲ್ಲಪ್ಪನಿಗೆ ನಾಲ್ಕು ಕಡೆ ಇರದಿದ್ದಾನೆ. ಬಿಡಿಸಲು ಹೋಗಿದ್ದ ಯಲ್ಲಪ್ಪನ ಹೆತ್ತವರ ಮೇಲೂ ಹಲ್ಲೆ ಮಾಡಿದ್ದಾನೆ.

ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಮಹಾಂತೇಶ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ತಂದೆ ಮಕ್ಕಳ ಜಗಳ ಏನೇ ಇರಲಿ, ಕೂತು ಸಮಾಧಾನದಿಂದ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವದನ್ನು ಬಿಟ್ಟು ಹೆತ್ತ ತಂದೆಯೇ ಮೇಲೆ ಮಗನೇ ಕೌರ್ಯ ಮೆರದಿದ್ದು ಮಾತ್ರ ದುರಂತವೇ ಸರಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:00 pm, Fri, 22 August 25

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?