ಬೈದಿದ್ದಕ್ಕೆ ಕ್ರಿಮಿನಾಶಕ ಸೇವಿಸಿ ಬಾಲಕ ಆತ್ಮಹತ್ಯೆ: ಹೆತ್ತವರು ಬುದ್ಧಿವಾದ ಹೇಳೋದೇ ತಪ್ಪಾ?
ಮೊಬೈಲ್ ಬಳಕೆ ಬಿಟ್ಟು ಓದಿನ ಕಡೆ ಗಮನಹರಿಸುವಂತೆ ಪೋಷಕರು ಬುದ್ಧಿವಾದ ಹೇಳಿದಕ್ಕೆ ಪ್ರಥಮ ಪಿಯುಸಿ ವಿದ್ಯಾರ್ಥಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ. ಸದ್ಯ ಘಟನೆಯಿಂದ ಪೋಷಕರು ಆಘಾತಕ್ಕೊಳಗಾಗಿದ್ದಾರೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿ, ಡಿಸೆಂಬರ್ 19: ಮೊಬೈಲ್ (mobile) ಬಿಟ್ಟು ಓದಿನ ಕಡೆ ಗಮನಹರಿಸು ಎಂದಿದ್ದಕ್ಕೆ 16 ವರ್ಷದ ಮಗ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ. ಅರುಣಗೌಡ ಮೃತ ಯುವಕ. ಮೃತ ಅರುಣಗೌಡ ಪ್ರಥಮ ಪಿಯುಸಿ ಓದುತ್ತಿದ್ದ. ಸದ್ಯ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಡೆದದ್ದೇನು?
ಅರುಣಗೌಡ ಪೋಷಕರು ಮೊಬೈಲ್ ಬಿಟ್ಟು ಓದಿನ ಕಡೆ ಗಮನಹರಿಸಲು ಹೇಳಿದ್ದಾರೆ. ಹೆತ್ತವರು ಬುದ್ಧಿವಾದ ಹೇಳಿದ್ದಕ್ಕೆ ಆತ ಡಿಸೆಂಬರ್ 16ರಂದು ಕ್ರಿಮಿನಾಶಕ ಸೇವಿಸಿದ್ದ. ಬಳಿಕ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅರುಣಗೌಡ ಆಸ್ಪತ್ರೆಯಲ್ಲಿ ಗುರುವಾರ ಕೊನೆಯುಸಿರೆಳೆದಿದ್ದಾರೆ.
ಬೈಕ್ ಸ್ಕಿಡ್ ಆಗಿ ಬಿದ್ದ ಪೊಲೀಸ್ ಕಾನ್ಸ್ಟೇಬಲ್: ಗಂಭೀರ ಗಾಯ
ಮತ್ತೊಂದು ಪ್ರಕರಣದಲ್ಲಿ ಹುಬ್ಬಳ್ಳಿ ತಾಲೂಕಿನ ಪಾಳ ಗ್ರಾಮದ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಪೊಲೀಸ್ ಕಾನ್ಸ್ಟೇಬಲ್ ಶಿವಾನಂದ್ ಮಾದರ್ಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ರಾತ್ರಿ ಕರ್ತವ್ಯ ಮುಗಿಸಿಕೊಂಡು ಊರಿಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ಡಿಕೆಶಿ ಪಿಎಸ್ ಕಾರು ಅಪಘಾತ: ಬೈಕ್ ಸವಾರ ಸಾವು, ಗುದ್ದಿದ ರಭಸಕ್ಕೆ ಕಾರು ಪಲ್ಟಿ
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಕಾನ್ಸ್ಟೇಬಲ್ ಶಿವಾನಂದ್ಗೆ ಚಿಕಿತ್ಸೆ ನೀಡಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ವೈದ್ಯಾಧಿಕಾರಿಯ ಕಿರುಕುಳ: ಆಸ್ಪತ್ರೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ನರ್ಸ್
ವೈದ್ಯಾಧಿಕಾರಿಯಿಂದ ನಿರಂತರ ಕಿರುಕುಳಕ್ಕೆ ಬೇಸತ್ತು ಕರ್ತವ್ಯನಿರತ ನರ್ಸ್ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಇದನ್ನೂ ಓದಿ: ಪೊಲೀಸ್ರು ಹೋದಾಗ ಯುವತಿ ಬಾಲ್ಕನಿಯಿಂದ ಜಿಗಿದ ಕೇಸಿಗೆ ಟ್ವಿಸ್ಟ್: ಸಿಕ್ಕ ಸಾಕ್ಷಿ ಏನು?
ಸುಮಾರು 20ಕ್ಕೂ ಹೆಚ್ಚು ಮಾತ್ರೆ ಸೇವಿಸಿ ಸುನೀತಾ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ್ದರು. ಅಸ್ವಸ್ಥಗೊಂಡಿದ್ದ ಅವರನ್ನು ಹೊಸಪೇಟೆ 100 ಬೆಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮರಿಯಮ್ಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮಂಜುಳಾ ಅವರ ನಿರಂತರ ಕಿರುಕುಳಕ್ಕೆ ಬೇಸತ್ತು ಆಸ್ಪತ್ರೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



