AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಸೇವಕ ಶ್ರೀಕಾಂತ ಪೂಜಾರಿ ಜಾಮೀನು ಅರ್ಜಿ ವಿಚಾರಣೆ: ತೀರ್ಪು ಕಾಯ್ದಿರಿಸಿ ನಾಳೆಗೆ ಮುಂದೂಡಿಕೆ

ಕರಸೇವಕ ಶ್ರೀಕಾಂತ ಪೂಜಾರಿ ಜಾಮೀನು ಅರ್ಜಿಯನ್ನು ಹುಬ್ಬಳ್ಳಿ 1ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ಮಾಡಿದ್ದು, ವಾದ ವಿವಾದ ಆಲಿಸಿ ತೀರ್ಪು ಕಾಯ್ದಿರಿಸಿ ನಾಳೆ ಮುಂದೂಡಲಾಗಿದೆ. ಆರೋಪಿ ಪರ ಸಂಜೀವ ಬಡಸ್ಕರ ವಾದ ಮಂಡನೆ ಮಾಡಿದ್ದಾರೆ. 31 ವರ್ಷಗಳ ಬಳಿಕ ಆರೋಪಿಯನ್ನು ಶಹರ ಠಾಣೆ ಪೊಲೀಸರು ಬಂಧಿಸಿದ್ದರು.

ಕರಸೇವಕ ಶ್ರೀಕಾಂತ ಪೂಜಾರಿ ಜಾಮೀನು ಅರ್ಜಿ ವಿಚಾರಣೆ: ತೀರ್ಪು ಕಾಯ್ದಿರಿಸಿ ನಾಳೆಗೆ ಮುಂದೂಡಿಕೆ
ಕರಸೇವಕ ಶ್ರೀಕಾಂತ ಪೂಜಾರಿ
ಶಿವಕುಮಾರ್ ಪತ್ತಾರ್
| Edited By: |

Updated on:Jan 04, 2024 | 5:41 PM

Share

ಹುಬ್ಬಳ್ಳಿ, ಜನವರಿ 04: ಕರಸೇವಕ ಶ್ರೀಕಾಂತ ಪೂಜಾರಿ (Srikanta Pujari) ಜಾಮೀನು ಅರ್ಜಿಯನ್ನು ಹುಬ್ಬಳ್ಳಿ 1ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ಮಾಡಿದ್ದು, ವಾದ ವಿವಾದ ಆಲಿಸಿ ತೀರ್ಪು ಕಾಯ್ದಿರಿಸಿ ನಾಳೆ ಮುಂದೂಡಲಾಗಿದೆ. ಆರೋಪಿ ಪರ ಸಂಜೀವ ಬಡಸ್ಕರ ವಾದ ಮಂಡನೆ ಮಾಡಿದ್ದಾರೆ. ಜಾಮೀನು ಪಡೆದ ನಂತರ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಹೀಗಾಗಿ ಶ್ರೀಕಾಂತಗೆ ನ್ಯಾಯಾಲಯ ವಾರಂಟ್ ಹೊರಡಿಸಿದೆ. 31 ವರ್ಷಗಳ ಬಳಿಕ ಆರೋಪಿಯನ್ನು ಶಹರ ಠಾಣೆ ಪೊಲೀಸರು ಬಂಧಿಸಿದ್ದರು.

ಶ್ರೀಕಾಂತ ಪೂಜಾರಿ 1992 ಗಲಭೆಯ ಆರೋಪಿ. ಹಜರೇಸಾಬ್ ಅಂಗಡಿ ಎಂಬುವರಿಗೆ ಸೇರಿದ್ದ ಅಡಿಕೆ ಮಾರಾಟ ಮಳಿಗೆಗೆ ಬೆಂಕಿ ಹಚ್ವಿದ ಆರೋಪ ಮಾಡಲಾಗಿದೆ.

ಮತ್ತೆ ತನ್ನ ನಡೆಯನ್ನು ಸಮರ್ಥಿಸಿಕೊಂಡ ಶಹರ ಠಾಣೆ ಇನ್ಸ್‌ಪೆಕ್ಟರ್‌

ಯಾವುದೇ ಕಾರಣಕ್ಕೂ ಶ್ರೀಕಾಂತ್ ಪೂಜಾರಿಗೆ ಜಾಮೀನು ನೀಡಬಾರದೆಂದು ತಕರಾರು ಅರ್ಜಿ ಸಲ್ಲಿಕೆ ಮಾಡಲಾಗಿದೆ. ಶ್ರೀಕಾಂತ ಇಲ್ಲಿಯವರಿಗೆ ನ್ಯಾಯಾಲಯಕ್ಕೆ ಹಾಜರಾಗಿಲ್ಲ. ಒಂದು ವೇಳೆ ಈಗ ಜಾಮೀನು ನೀಡಿದರೆ ಮುಂದೆ ಅದೇ ರೀತಿ ಮಾಡಬಹುದು. ಈಗಾಗಲೇ ಆರೋಪಿ ಮೇಲೆ 13 ಪ್ರಕರಣ 3 ಮುನ್ನೆಚ್ಚರಿಕೆ ಪ್ರಕರಣಗಳಿವೆ.

ಇದನ್ನೂ ಓದಿ: ಶ್ರೀಕಾಂತ್ ಪೂಜಾರಿ ರಾಮಭಕ್ತನ ಸೋಗಿನಲ್ಲಿರುವ ವೃತ್ತಿಪರ ಕ್ರಿಮಿನಲ್: ದಿನೇಶ್​ ಗುಂಡೂರಾವ್

ಈಗ ಜಾಮೀನು ನೀಡಿದರೆ ಮುಂದೆ ನ್ಯಾಯಾಲಯಕ್ಕೆ ಗೈರಾಬಹುದೆಂಬ ಕಾರಣವನ್ನು ಇನ್ಸ್‌ಪೆಕ್ಟರ್‌ ನೀಡಿದ್ದಾರೆ. ಈ ಕಾರಣದಿಂದ ಆರೋಪಿಗೆ ಜಾಮೀನು ನೀಡಬಾರದೆಂದು 5 ನೇ ಹೆಚ್ಚುವರಿ ಸತ್ರ ನ್ಯಾಯಾಲಯಕ್ಕೆ ಶಹರ ಠಾಣೆ ಇನ್ಸ್‌ಪೆಕ್ಟರ್​ ಅರ್ಜಿ ಸಲ್ಲಿಸಿದ್ದಾರೆ.

ಶ್ರೀಕಾಂತ್​ ಬಂಧನ ಖಂಡಿಸಿ ಇಂದೂ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಇಂದೂ ಕೂಡ ಬಿಜೆಪಿ ಪ್ರತಿಭಟನೆಯನ್ನು ಮುಂದುವರಿಸಿದೆ. ಬೆಂಗಳೂರು, ಚಿಕ್ಕಮಗಳೂರು, ಹುಬ್ಬಳ್ಳಿಯಲ್ಲಿ ಕೇಸರಿ ಪಡೆ ಮತ್ತೆ ಕೆರಳಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಾಬಾಬುಡನ್​ಗಿರಿಯಲ್ಲಿ ಗೋರಿ ಧ್ವಂಸ ಕೇಸ್​ ರೀ‌ ಓಪನ್: ಇದು ಅಪ್ಪಟ ಸುಳ್ಳು: ಸಿಎಂ ಸಿದ್ದರಾಮಯ್ಯ

ಸಾಮಾಜಿಕ ಜಾಲಾತಣಗಳಲ್ಲಿ ಪೋಸ್ಟರ್ ಚೇಂಜ್ ಮಾಡಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:01 pm, Thu, 4 January 24

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್