ಶ್ರೀಕಾಂತ್ ಬಂಧನ ಕಾಕತಾಳೀಯ: ಇದರಲ್ಲಿ ಪ್ರತೀಕಾರ, ತುಷ್ಟೀಕರಣ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಅಯೋಧ್ಯೆ ರಾಮ ಜನ್ಮಭೂಮಿಗಾಗಿ ಹುಬ್ಬಳ್ಳಿಯಲ್ಲಿ ನಡೆದ ಹೋರಾಟದಲ್ಲಿ ಭಾಗಿಯಾಗಿದ್ದ ಶ್ರೀಕಾಂತ್ ಪೂಜಾರಿ ಬಂಧನ ಕಾಕತಾಳೀಯ. ಇದರಲ್ಲಿ ಪ್ರತೀಕಾರವೂ ಇಲ್ಲ, ತುಷ್ಟೀಕರಣವೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಹಳೆಯ ಪ್ರಕರಣಗಳನ್ನು ಪರಿಶೀಲನೆ ನಡೆಸುವ ವೇಳೆ ಪೊಲೀಸರು ಇತರೆ 36 ಜನರ ಜೊತೆಗೆ ಇವರನ್ನು ಕೂಡ ಬಂಧಿಸಿದ್ದಾರೆ ಎಂದು ಹೇಳಿದ್ದಾರೆ.

ಶ್ರೀಕಾಂತ್ ಬಂಧನ ಕಾಕತಾಳೀಯ: ಇದರಲ್ಲಿ ಪ್ರತೀಕಾರ, ತುಷ್ಟೀಕರಣ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಸಿಎಂ ಸಿದ್ದರಾಮಯ್ಯ, ಹೋರಾಟಗಾರ ಶ್ರೀಕಾಂತ್ ಪೂಜಾರಿ
Edited By:

Updated on: Jan 03, 2024 | 9:01 PM

ಹುಬ್ಬಳ್ಳಿ, ಜನವರಿ 03: ರಾಮಮಂದಿರದ ಉದ್ಘಾಟನೆ ವೇಳೆ ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಬಂಧನ ಕಾಕತಾಳೀಯ. ಇದರಲ್ಲಿ ಪ್ರತೀಕಾರವೂ ಇಲ್ಲ, ತುಷ್ಟೀಕರಣವೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಹಳೆಯ ಪ್ರಕರಣಗಳನ್ನು ಪರಿಶೀಲನೆ ನಡೆಸುವ ವೇಳೆ ಪೊಲೀಸರು ಇತರೆ 36 ಜನರ ಜೊತೆಗೆ ಇವರನ್ನು ಕೂಡ ಬಂಧಿಸಿದ್ದಾರೆ. ಕಾನೂನು ಪಾಲನೆ ಮಾಡಬೇಕು, ಮಾಡಿದ್ದಾರೆ ಎಂದು ಹೇಳಿದ್ದಾರೆ.

ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮರಕ್ಷಣೆ ನಾಟಕವಾಡುವ ಇಂಥವರನ್ನು ಬಂಧಿಸದೆ, ರಾಜಾರೋಷವಾಗಿ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ.

ಸಿಎಂ ಸಿದ್ದರಾಮಯ್ಯ ಟ್ವೀಟ್​ 

ಅಕ್ರಮ ಸಾರಾಯಿ ಮಾರಾಟ, ದೊಂಬಿ, ಮಟಕಾ, ಜೂಜಾಟ ಮುಂತಾದ 16 ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಪರವಾಗಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರು ಈತನ ಎಲ್ಲಾ ಅಪರಾಧ ಕೃತ್ಯಗಳಿಗೆ ತಮ್ಮ ಪಕ್ಷದ ಬೆಂಬಲವಿದೆ ಎಂಬುದನ್ನು ಬಹಿರಂಗವಾಗಿ ಹೇಳಲಿ ಅಥವಾ ಪ್ರತಿಭಟನೆ ಕೈಬಿಟ್ಟು ಸಾರ್ವಜನಿಕವಾಗಿ ಕ್ಷಮೆ ಕೋರಲಿ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಒಬ್ಬ ಕ್ರಿಮಿನಲ್ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿ ಬರಬಾರದಿತ್ತು: ಬಿಜೆಪಿ ವಿರುದ್ಧ ಸಿಎಂ ಕಿಡಿ

ಕಳೆದ 2023ನೇ ಸಾಲಿನಲ್ಲಿ ಹುಬ್ಬಳ್ಳಿ – ಧಾರವಾಡ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ, ಕಳ್ಳತನ, ಸುಲಿಗೆ, ವಂಚನೆ, ದೊಂಬಿ ಮುಂತಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಎಲ್.ಪಿ.ಸಿ (ಕಾನೂನು ವಿಚಾರಣಾ ಪ್ರಮಾಣಪತ್ರ) ಪ್ರಕರಣಗಳಲ್ಲಿ ಒಟ್ಟು 36 ಜನರನ್ನು ದಸ್ತಗಿರಿ ಮಾಡಲಾಗಿದೆ. ಇದರಲ್ಲಿ ಶ್ರೀಕಾಂತ ಪೂಜಾರಿ 32ನೆಯ ವ್ಯಕ್ತಿ. ಈತನನ್ನು ಕರಸೇವಕನೆಂಬ ಕಾರಣಕ್ಕೆ ಹೊರಗಡೆ ಬಿಡಬೇಕೋ? ಅಥವಾ ಆರೋಪಿ ಎಂಬ ಕಾರಣಕ್ಕೆ ಬಂಧಿಸಬೇಕೋ ಎಂದು ಪ್ರಶ್ನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​ 


ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ನಮ್ಮ ಸರ್ಕಾರದ ವಿರುದ್ಧವಲ್ಲ, ದೇಶದ ಕಾನೂನು ಮತ್ತು ಸಂವಿಧಾನದ ವಿರುದ್ಧ. ಅಪರಾಧ ಕೃತ್ಯಗಳಲ್ಲಿ ತೊಡಗುವವರು ಧರ್ಮರಕ್ಷಕರು ಎಂದು ಹೇಳಿಕೊಂಡು ಕೊಲೆ, ಸುಲಿಗೆಗಳಿಗೆ ಇಳಿದರೆ ಅದನ್ನೂ ಬಿಜೆಪಿ ನಾಯಕರು ಬೆಂಬಲಿಸುತ್ತಾರೆಯೇ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us