AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಉಪ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್: ಮದ್ಯ, ಗಾಂಜಾ ಸೇವನೆ ವಿಡಿಯೋ ವೈರಲ್

ಹುಬ್ಬಳ್ಳಿಯ ವಿಶ್ವೇಶ್ವರಯ್ಯ ನಗರದಲ್ಲಿರುವ ಉಪ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ 3 ದಿನ ಹಿಂದಷ್ಟೇ ಭೇಟಿ ನೀಡಿದ್ದರು. ಜೈಲ್ ಕಾರ್ಯವೈಖರಿ ಪರಿಶೀಲನೆ ನಡೆಸಿದ್ದರು. ಅದಾಗಿ ಕೆಲವೇ ದಿನಗಳಲ್ಲಿ ಕೈದಿಗಳು ಮೋಜು ಮಸ್ತಿ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ. ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ದೊರೆಯುತ್ತಿದೆ ಎಂಬ ಆರೋಪಗಳೂ ಕೇಳಿಬಂದಿವೆ.

ಹುಬ್ಬಳ್ಳಿ ಉಪ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್: ಮದ್ಯ, ಗಾಂಜಾ ಸೇವನೆ ವಿಡಿಯೋ ವೈರಲ್
ಹುಬ್ಬಳ್ಳಿ ಉಪ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್Image Credit source: tv9
ಸಂಜಯ್ಯಾ ಚಿಕ್ಕಮಠ
| Edited By: |

Updated on: Feb 21, 2026 | 7:16 AM

Share

ಹುಬ್ಬಳ್ಳಿ, ಫೆಬ್ರವರಿ 21: ಧಾರವಾಡ (Dharawad) ಜಿಲ್ಲೆ ಹುಬ್ಬಳ್ಳಿಯ ಉಪ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಗೆ ರಾಜಾತಿಥ್ಯ ಸಿಗುತ್ತಿರುವ ಆರೋಪ ಕೇಳಿಬಂದಿದ್ದು, ಜೈಲಿನೊಳಗಿನ ಅಕ್ರಮ ಸೌಲಭ್ಯಗಳ ವಿಡಿಯೋ ವೈರಲ್ ಆಗಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹಣ ಕೊಟ್ಟರೆ ಸಬ್ ಜೈಲಿನಲ್ಲಿ ಎಲ್ಲಾ ಸೌಲಭ್ಯಗಳು ಸಿಗುತ್ತವೆ ಎಂಬ ಆರೋಪಗಳು ಕೇಳಿಬಂದಿದ್ದು, ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗಿವೆ. ವೈರಲ್ ಆಗಿರುವ ವಿಡಿಯೋದಲ್ಲಿ ವಿಚಾರಣಾಧೀನ ಕೈದಿಗಳು ಮೊಬೈಲ್ ಫೋನ್ ಬಳಸುತ್ತಿರುವುದು, ಸೆಲ್ಫಿ ತೆಗೆದುಕೊಳ್ಳುತ್ತಿರುವುದು, ಗಾಂಜಾ ಹಾಗೂ ಮದ್ಯ ಸೇವನೆ ಮಾಡುತ್ತಿರುವುದು ಕಾಣಿಸುತ್ತಿದೆ. ಜೈಲಿನಲ್ಲೇ ಬಿಂದಾಸ್ ಜೀವನ ನಡೆಸುತ್ತಿರುವಂತೆ ಕಂಡುಬರುವ ಈ ದೃಶ್ಯಗಳು ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಜೈಲಿನೊಳಗೆ ಯಾವುದೇ ಅಂಜಿಕೆ ಇಲ್ಲದೇ ಕೈದಿಗಳು ವರ್ತಿಸುತ್ತಿರುವುದು ಆಡಳಿತದ ಮೇಲಿನ ಅನುಮಾನಗಳನ್ನು ಮತ್ತಷ್ಟು ಗಾಢಗೊಳಿಸಿದೆ.

ಈ ಉಪ ಕಾರಾಗೃಹದಲ್ಲಿ ಕಳೆದ ವರ್ಷ ನವೆಂಬರ್ 13ರಂದು ನಡೆದಿದ್ದ ಮಲ್ಲಿಕ್ ಕೊಲೆ ಪ್ರಕರಣದ ಆರೋಪಿಗಳು ಸೇರಿದಂತೆ ಅನೇಕ ಗಂಭೀರ ಪ್ರಕರಣಗಳಲ್ಲಿ ಶಾಮೀಲಾದ ಆರೋಪಿಗಳು ಇದ್ದಾರೆ. ಬೆಂಡಿಗೇರಿ ಠಾಣೆ ಪೊಲೀಸರು ಈ ಪ್ರಕರಣ ಸಂಬಂಧ 17 ಜನರನ್ನು ಬಂಧಿಸಿದ್ದರು. ವೈರಲ್ ವಿಡಿಯೋದಲ್ಲಿ ಅಭಿಷೇಕ್ ಜಾಧವ್, ಗಣೇಶ್ ಜಾಧವ್ ಸೇರಿದಂತೆ ಕೆಲ ಆರೋಪಿಗಳು ಕಾಣಿಸಿಕೊಂಡಿರುವುದಾಗಿ ಹೇಳಲಾಗುತ್ತಿದೆ.

ವಿಡಿಯೋ ಇಲ್ಲಿ ನೋಡಿ

ಗಮನಾರ್ಹವೆಂದರೆ, ಮೂರು ದಿನಗಳ ಹಿಂದಷ್ಟೇ ರಾಜ್ಯದ ಡಿಜಿಪಿ ಅಲೋಕ್ ಕುಮಾರ್ ಹುಬ್ಬಳ್ಳಿಯ ವಿಶ್ವೇಶ್ವರಯ್ಯ ನಗರದಲ್ಲಿರುವ ಉಪ ಕಾರಾಗೃಹಕ್ಕೆ ಭೇಟಿ ನೀಡಿದ್ದರು. ಜೈಲಿನ ಕಾರ್ಯವೈಖರಿ, ಭದ್ರತಾ ವ್ಯವಸ್ಥೆ, ಸಬ್ ಜೈಲ್ ಕಟ್ಟಡ, ಗಾರ್ಡನ್ ಹಾಗೂ ಕೈದಿಗಳಿಗೆ ಒದಗಿಸಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದ್ದರು. ಕೈದಿಗಳ ಜೊತೆಯೂ ಮಾತುಕತೆ ನಡೆಸಿದ್ದರು. ಆದರೆ ಅವರ ಭೇಟಿಯ ಮೂರೇ ದಿನಗಳಲ್ಲಿ ಜೈಲಿನೊಳಗಿನ ಅಕ್ರಮ ಚಟುವಟಿಕೆಗಳ ವಿಡಿಯೋ ವೈರಲ್ ಆಗಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಕಲ್ಲು, ಚಪ್ಪಲಿ ತೂರಾಟದ ಬಳಿಕ ಬಾಗಲಕೋಟೆ ಬೂದಿ ಮುಚ್ಚಿದ ಕೆಂಡ: ಶಾಂತಿ ಸಭೆ ವಿಫಲ, ಎಲ್ಲಾ ಆರೋಪಿಗಳ ಬಂಧನಕ್ಕೆ ಡೆಡ್​ಲೈನ್

ಜೈಲಿನೊಳಗೆ ಗಾಂಜಾ, ಮದ್ಯ, ಮೊಬೈಲ್‌ಗಳ ಪೂರೈಕೆ ಹೇಗೆ ನಡೆಯುತ್ತಿದೆ? ಇದಕ್ಕೆ ಒಳಗಿನಿಂದ ಸಹಕಾರವಿದೆಯೇ? ಎಂಬ ಪ್ರಶ್ನೆಗಳು ಇದೀಗ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಸಂಬಂಧಿತ ಅಧಿಕಾರಿಗಳು ಘಟನೆಯ ಕುರಿತು ತನಿಖೆ ಆರಂಭಿಸಿದ್ದು, ವಿಡಿಯೋ ನೈಜತೆಯ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್