ನನ್ನ ಜತೆ ಕಾಂಗ್ರೆಸ್ ಸೇರಿದವರೆಲ್ಲ ವಾಪಸ್ ಬರ್ತಾರೆ: ಜಗದೀಶ್ ಶೆಟ್ಟರ್ ಸ್ಫೋಟಕ ಹೇಳಿಕೆ

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಕಾಂಗ್ರೆಸ್​ ಮುಖಂಡರು ಬಿಜೆಪಿ ಸೇರುವುದಕ್ಕೆ ಆಸೆ ವ್ಯಕ್ತಪಡಿಸುತ್ತಿದ್ದಾರೆ. ನನ್ನ ಜತೆ ಕಾಂಗ್ರೆಸ್ ಸೇರಿದವರೆಲ್ಲ ವಾಪಸ್ ಬರುತ್ತಾರೆ. ನಾವು ನಿಮ್ಮ ಜೊತೆ ಬಿಜೆಪಿಗೆ ಬರುತ್ತೇವೆ ಎನ್ನುತ್ತಿದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಆದಷ್ಟು ಶೀಘ್ರದಲ್ಲಿ ಅವರೆಲ್ಲರೂ ಬಿಜೆಪಿ ಸೇರಲಿದ್ದಾರೆ ಎಂದಿದ್ದಾರೆ.

ನನ್ನ ಜತೆ ಕಾಂಗ್ರೆಸ್ ಸೇರಿದವರೆಲ್ಲ ವಾಪಸ್ ಬರ್ತಾರೆ: ಜಗದೀಶ್ ಶೆಟ್ಟರ್ ಸ್ಫೋಟಕ ಹೇಳಿಕೆ
ಮಾಜಿ ಸಿಎಂ ಜಗದೀಶ್ ಶೆಟ್ಟರ್
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on: Feb 01, 2024 | 4:20 PM

ಹುಬ್ಬಳ್ಳಿ, ಫೆಬ್ರುವರಿ 1: ನನ್ನ ಜತೆ ಕಾಂಗ್ರೆಸ್ ಸೇರಿದವರೆಲ್ಲ ವಾಪಸ್ ಬರುತ್ತಾರೆ. ನಾವು ನಿಮ್ಮ ಜೊತೆ ಬಿಜೆಪಿಗೆ ಬರುತ್ತೇವೆ ಎನ್ನುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೇರೆ ಜಿಲ್ಲೆಯ ಕಾಂಗ್ರೆಸ್​ ಮುಖಂಡರು ಬಿಜೆಪಿ ಸೇರುವುದಕ್ಕೆ ಆಸೆ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್​ನ ಬಹಳಷ್ಟು ಜನ ನನ್ನ ಸಂಪರ್ಕದಲ್ಲಿದ್ದಾರೆ. ಅವರೆಲ್ಲರೂ ಆದಷ್ಟು ಶೀಘ್ರದಲ್ಲಿ ಬಿಜೆಪಿ ಸೇರಲಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಪಕ್ಷದ ವರ್ಚಸ್ಸು ಬೆಳೆಯುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ತೊರೆಯಲು ಅಲ್ಲಿನವರು ಮನಸ್ಸು ಮಾಡುತ್ತಿದ್ದಾರೆ ಎಂದಿದ್ದಾರೆ.

ಶಾಸಕ ಬಾಲಕೃಷ್ಣ ಹೇಳಿಕೆ ಕಾಂಗ್ರೆಸ್‌ನ ಮನಸ್ಥಿತಿ ತೋರಿಸುತ್ತದೆ. ಚುನಾವಣೆಗಾಗಿ ಭಾಗ್ಯಗಳನ್ನು ಕೊಟ್ಟರು ಎನ್ನುವುದು ಭಾವನೆ ಜನರಲ್ಲಿ ಮೂಡಿದೆ. ಲೋಕಸಭೆ ಚುನಾವಣೆ ನಂತರ ಭಾಗ್ಯಗಳು ಇರಲ್ಲಾ ಅನ್ನುವ ಪರಿಸ್ಥಿತಿ ಕಾಣಿಸುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಮೋದಿಯವರು ಮತ್ತೊಮ್ಮೆ ಪ್ರಧಾನಮಂತ್ರಿ ಮಾಡುವುದೇ ನಮ್ಮ ಗುರಿ

ನಾನು ಪಕ್ಷ ಕೊಡುವ ಯಾವುದೇ ಜವಾಬ್ದಾರಿಯನ್ನಾದರೂ ನಿರ್ವಹಿಸಲು ಸಿದ್ಧ. ಪಕ್ಷ ಹೇಳಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ. ಬಿಜೆಪಿ ವರಿಷ್ಠರು ಗೌರವಯುತ ಸ್ಥಾನ ಕೊಡುತ್ತೇವೆ ಅನ್ನುವಂತಹ ಭರವಸೆ ನೀಡಿದ್ದಾರೆ. ಮೋದಿಯವರು ಮತ್ತೊಮ್ಮೆ ಪ್ರಧಾನಮಂತ್ರಿ ಮಾಡಬೇಕು ಎನ್ನುವುದೇ ನಮ್ಮ ಗುರಿ ಎಂದು ಹೇಳಿದ್ದಾರೆ.

ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್​ ಮಂಡನೆ

ಬಜೆಟ್ ವಿಚಾರವಾಗಿ ಮಾತನಾಡಿದ ಅವರು, ನಿರ್ಮಲಾ ಸೀತಾರಾಮನ್ ಅವರು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್​ ಮಂಡನೆ ಮಾಡಿದ್ದಾರೆ. ಯುವ ಸಬಲೀಕರಣಕ್ಕೆ, ರೈತರ ಕ್ಷೇಮಾಭಿವೃದ್ಧಿ, ಬಡವರ ಕಲ್ಯಾಣ, ಮಹಿಳೆಯರ ಅಭಿವೃದ್ಧಿಗೆ ಪೂರಕವಾಗಿದೆ. ಸ್ಕಿಲ್ ಇಂಡಿಯಾ, ಆಯುಷ್ಮಾನ್ ಭಾರತ, ರಾಷ್ಟ್ರೀಯ ಶಿಕ್ಷಣ ನೀತಿಗೆ ಆದ್ಯತೆ ಕೊಟ್ಟಿದ್ದಾರೆ ಎಂದರು.

ಇದನ್ನೂ ಓದಿ: ಶೆಟ್ಟರ್​ ಸ್ವಾಗತಕ್ಕೆ ಸ್ಥಳೀಯ ನಾಯಕರು ಗೈರು; ಎರಡು ಬಣಗಳಾಗಿ ಒಡೆದ ಹುಬ್ಬಳ್ಳಿ ಬಿಜೆಪಿ?

ಕನಿಷ್ಠ ಬೆಂಬಲ ಬೆಲೆಗೆ ಒತ್ತು ಕೊಡುವ ಕೆಲಸವಾಗಿದೆ. ಶಿಕ್ಷಣ, ಆರೋಗ್ಯ, ಕೈಗಾರಿಕೆ, ಪ್ರವಾಸೋದ್ಯಮಕ್ಕೆ ಒತ್ತು ಕೊಡಲಾಗಿದೆ. ಅಭಿವೃದ್ಧಿ ಹೊಂದಿದ ಭಾರತ ಮಾಡಲು ಮೋದಿಯವರ ಸರ್ಕಾರ ಎಲ್ಲಾ ಕೆಲಸ ಮಾಡುತ್ತಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಅಲರ್ಟ್; ಜಗದೀಶ್ ಶೆಟ್ಟರ್ ಬೆಂಬಲಿಗ ಕಾಂಗ್ರೆಸ್​ ಸೇರ್ಪಡೆ

ಎಲ್ಲಾ ರಾಜ್ಯಗಳಿಗೆ ಆಗಿರುವ ರೀತಿ ಕರ್ನಾಟಕಕ್ಕೂ ಅನುದಾನ ಹಂಚಿಕೆಯಾಗಿದೆ. ಕಡಿಮೆ ಹಣ ಬಂದಿದೆ ಅನಿಸಿದರೆ ಅದನ್ನು ಚರ್ಚಿಸಲು ವೇದಿಕೆಯಿದೆ. ನೀತಿ ಆಯೋಗದಲ್ಲಿ ಕಾಂಗ್ರೆಸ್‌ನವರೂ ಇದ್ದು ಅಲ್ಲಿ ಚರ್ಚೆ ಮಾಡಬೇಕು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ