AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕನನ್ನ ಹತ್ಯೆಗೈದು ಹೈವೇನಲ್ಲಿ ಶವ ಬಿಸಾಡಿದ ದುಷ್ಕರ್ಮಿಗಳು: ಸಾಕ್ಷ್ಯನಾಶಕ್ಕೆ ಮಾಡಿದ್ದೇನು ಗೊತ್ತಾ?

ಯುವಕನ್ನು ಹತ್ಯೆಗೈದು ಹುಬ್ಬಳ್ಳಿಯ ಗದಗ ಹೆದ್ದಾರಿಯಲ್ಲಿ ಶವವನ್ನು ದುಷ್ಕರ್ಮಿಗಳು ಎಸೆದು ಹೋಗಿರುವಂತಹ ಘಟನೆ ನಡೆದಿದೆ. ರಸ್ತೆಯಲ್ಲಿ ಹೋಗುತ್ತಿದ್ದವರು ನೀಡಿದ ಮಾಹಿತಿ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಯುವಕನನ್ನ ಹತ್ಯೆಗೈದು ಹೈವೇನಲ್ಲಿ ಶವ ಬಿಸಾಡಿದ ದುಷ್ಕರ್ಮಿಗಳು: ಸಾಕ್ಷ್ಯನಾಶಕ್ಕೆ ಮಾಡಿದ್ದೇನು ಗೊತ್ತಾ?
ಮಂಜುನಾಥ ಗಾಣಿಗೇರ
ಸಂಜಯ್ಯಾ ಚಿಕ್ಕಮಠ
| Edited By: |

Updated on: Feb 25, 2026 | 4:00 PM

Share

ಹುಬ್ಬಳ್ಳಿ, ಫೆಬ್ರವರಿ 25: ಯುವಕನ್ನು ಬರ್ಬರವಾಗಿ ಹತ್ಯೆಗೈದ (murder) ದುಷ್ಕರ್ಮಿಗಳ ಗ್ಯಾಂಗ್ ಶವವನ್ನ ರಸ್ತೆಯಲ್ಲಿ ಎಸೆದು ಹೋಗಿರುವಂತಹ ಘಟನೆ ಹುಬ್ಬಳ್ಳಿಯ (Hubballi) ಗದಗ ರಸ್ತೆಯಲ್ಲಿರುವ ಐಟಿಸಿ ಗೋದಾಮಿನ ಬಳಿ ಕೃತ್ಯ ನಡೆದಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ನಿವಾಸಿ ಮಂಜುನಾಥ ಗಾಣಿಗೇರ(29) ಕೊಲೆಯಾದ ಯುವಕ. ಸದ್ಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಕ್ಷ್ಯನಾಶಕ್ಕೆ ಮಾಡಿದ್ದೇನು ಗೊತ್ತಾ?

ಮಂಜುನಾಥ ಗಾಣಿಗೇರ ಕೊಲೆಗೆ ಸದ್ಯ ನಿಖರ ಮಾಹಿತಿ ತಿಳಿದುಬಂದಿಲ್ಲ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಶವ ಎಸೆದು ಹೋಗಿರುವ ದುಷ್ಕರ್ಮಿಗಳು, ಬೇರೆಡೆ ಕೊಂದು ಸಾಕ್ಷ್ಯನಾಶ ಮಾಡುವ ಉದ್ದೇಶದಿಂದ ಶವ ಸಾಗಣೆ ಮಾಡಿದ್ದಾರೆ.

ಇದನ್ನೂ ಓದಿ: ಮೂತ್ರ ವಿಸರ್ಜನೆಗೆಂದು ಹೋದ ವ್ಯಕ್ತಿಗೆ ಕಂಡದ್ದು ಮಹಿಳೆಯ ಶವ: ಡಿಸಿಪಿ ಹೇಳಿದ್ದೇನು?

ಇನ್ನು ರಸ್ತೆಯಲ್ಲಿ ಹೋಗುತ್ತಿದ್ದವರು ಶವ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಶವವನ್ನು ಸ್ಥಳಾಂತರ ಮಾಡಲಾಗಿದೆ.

ವಿಷಪ್ರಾಶನದಿಂದ ಆಸ್ಪತ್ರೆ ಸೇರಿದ್ದ ಮಹಿಳೆ ಹಸೀನಾ ಬೇಗಂ ಸಾವು

ವಿಷಪ್ರಾಶನದಿಂದ ಆಸ್ಪತ್ರೆ ಸೇರಿದ್ದ ಮಹಿಳೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಹಸೀನಾ ಬೇಗಂ ಮೃತ ಮಹಿಳೆ. ಗದಗ ಜಿಲ್ಲೆಯ ಮುಳಗುಂದ ಪಟ್ಟಣದ ನಿವಾಸಿ. ಖಾಸಗಿ ಬ್ಯಾಂಕ್ ಮ್ಯಾನೇಜರ್ ಶ್ಯಾಮಸುಂದರ್ ಬದಾಮಿ ವಿರುದ್ಧ ಸಂಬಂಧಿಕರು ವಿಷಪ್ರಾಶನ ಆರೋಪ ಮಾಡಿದ್ದಾರೆ. ಘಟನೆ ಬಗ್ಗೆ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣ; ಯುವತಿಗೆ ಲವ್​ ಮ್ಯಾರೇಜ್ ಮಾಡಿಸಿದ್ದಕ್ಕೆ ನಡೀತಾ ಹಲ್ಲೆ?

ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, 7 ವರ್ಷದ ಹಿಂದೆ ಪತಿ, ಮಗನ ಜೊತೆ ಹುಬ್ಬಳ್ಳಿಗೆ ಬಂದಿದ್ದ ಹಸೀನಾಗೆ ಶ್ಯಾಮಸುಂದರ್ ಬ್ಯಾಂಕ್​ನಲ್ಲಿ ಹೌಸ್​​ ಕೀಪಿಂಗ್ ಕೆಲಸ ನೀಡಿದ್ದರು. ಇದೇ ನೆಪದಲ್ಲಿ ಲೈಂಗಿಕವಾಗಿ ಸಹಕರಿಸುವಂತೆ ಪೀಡಿಸ್ತಿದ್ದ. 4 ದಿನಗಳ ಹಿಂದೆ ಹಸೀನಾ ಬೇಗಂ ಮನೆಗೆ ಬಂದಿದ್ದ ಶ್ಯಾಮಸುಂದರ್, ಲೈಂಗಿಕವಾಗಿ ಬಳಸಿಕೊಂಡು, ಹಲ್ಲೆ ನಡೆಸಿ ವಿಷ ಕುಡಿಸಿ ಹೋಗಿದ್ದ ಆರೋಪ ಕೇಳಿಬಂದಿತ್ತು. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 4 ದಿನಗಳಿಂದ ಹಸೀನಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಗಲೀಕರಣಗೊಂಡ ರಸ್ತೆಯ ಮಧ್ಯದಲ್ಲೊಂದು ಹ್ಯಾಂಡ್ ಪಂಪ್
ಅಗಲೀಕರಣಗೊಂಡ ರಸ್ತೆಯ ಮಧ್ಯದಲ್ಲೊಂದು ಹ್ಯಾಂಡ್ ಪಂಪ್
ಬೆಂಗಳೂರಿನಲ್ಲಿ ರಾತ್ರಿಯೆಲ್ಲ ಟ್ರಾಫಿಕ್ ಜಾಮ್, ಮೆಜೆಸ್ಟಿಕ್​ನಲ್ಲಿ ಜನವೋ ಜನ
ಬೆಂಗಳೂರಿನಲ್ಲಿ ರಾತ್ರಿಯೆಲ್ಲ ಟ್ರಾಫಿಕ್ ಜಾಮ್, ಮೆಜೆಸ್ಟಿಕ್​ನಲ್ಲಿ ಜನವೋ ಜನ
ಬೇವು ಬೆಲ್ಲ ಆಯುಷ್ಯ ವೃದ್ಧಿಸುತ್ತದೆ! ಅದು ಹೇಗೆ?
ಬೇವು ಬೆಲ್ಲ ಆಯುಷ್ಯ ವೃದ್ಧಿಸುತ್ತದೆ! ಅದು ಹೇಗೆ?
ಯುಗಾದಿಯಿಂದ ಈ ರಾಶಿಯವರ ಜೀವನ ಬೆಲ್ಲದಂತೆ ಸಿಹಿಯಾಗಿರುತ್ತದೆ
ಯುಗಾದಿಯಿಂದ ಈ ರಾಶಿಯವರ ಜೀವನ ಬೆಲ್ಲದಂತೆ ಸಿಹಿಯಾಗಿರುತ್ತದೆ
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?
‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ
‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ
ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್
ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!