AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಮಟ್ಟದಲ್ಲಿ ಮಿನುಗಿದ ಹುಬ್ಬಳ್ಳಿ ಹುಡುಗಿ: ಜರ್ಮನಿಯಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡ ಐಶ್ವರ್ಯಾ ಬಾಲೇಹೊಸೂರ್

ಜರ್ಮನಿಯ ಸುಲ್‌ನಲ್ಲಿ ನಡೆದ ISSF ವಿಶ್ವ ಜೂನಿಯರ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಹುಬ್ಬಳ್ಳಿಯ ಐಶ್ವರ್ಯಾ ಬಾಲೇಹೊಸೂರ್ 50 ಮೀಟರ್ ಪಿಸ್ತೂಲ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಚಿನ್ನದ ಪದಕ ಕೂದಲೆಳೆ ಅಂತರದಲ್ಲಿ ಕೈತಪ್ಪಿದರೂ, ಐಶ್ವರ್ಯಾ ಅವರ ಸಾಧನೆ ರಾಜ್ಯ ಹಾಗೂ ದೇಶಕ್ಕೆ ಹೆಮ್ಮೆ ತಂದಿದೆ. ಭಾರತ ತಂಡವು ಒಟ್ಟು 25 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ವಿಶ್ವ ಮಟ್ಟದಲ್ಲಿ ಮಿನುಗಿದ ಹುಬ್ಬಳ್ಳಿ ಹುಡುಗಿ: ಜರ್ಮನಿಯಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡ ಐಶ್ವರ್ಯಾ ಬಾಲೇಹೊಸೂರ್
ಐಶ್ವರ್ಯಾ ಬಾಲೇಹೊಸೂರ್Image Credit source: Tv9 kannada
ಅಕ್ಷಯ್​ ಪಲ್ಲಮಜಲು​​
|

Updated on: Jun 26, 2026 | 11:35 AM

Share

ಮುಖ್ಯಾಂಶಗಳು

  • ವಿಶ್ವ ಜೂನಿಯರ್ ಶೂಟಿಂಗ್ ಚಾಂಪಿಯನ್‌ಶಿಪ್‌
  • ಭಾರತವನ್ನು ಪ್ರತಿನಿಧಿಸಿದ್ದ ಕರ್ನಾಟಕದ ಹುಬ್ಬಳ್ಳಿಯ ಶೂಟರ್ ಐಶ್ವರ್ಯಾ ರವಿಚಂದ್ರ
  • ಭರ್ಜರಿ ಪ್ರದರ್ಶನ ನೀಡಿ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ

ಹುಬ್ಬಳ್ಳಿ, ಜೂ.26: ಜರ್ಮನಿಯ ಸುಲ್ ನಗರದಲ್ಲಿ ನಡೆದ ಐಎಸ್‌ಎಸ್‌ಎಫ್ (ISSF) ವಿಶ್ವ ಜೂನಿಯರ್ ಶೂಟಿಂಗ್ ಚಾಂಪಿಯನ್‌ಶಿಪ್‌ನ 50 ಮೀಟರ್ ಪಿಸ್ತೂಲ್ ವೈಯಕ್ತಿಕ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಕರ್ನಾಟಕದ ಹುಬ್ಬಳ್ಳಿಯ ಶೂಟರ್ ಐಶ್ವರ್ಯಾ ರವಿಚಂದ್ರ ಬಾಲೇಹೊಸೂರ್ (Aishwarya Balehosur) ಭರ್ಜರಿ ಪ್ರದರ್ಶನ ನೀಡಿ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಅತ್ಯಂತ ರೋಮಾಂಚನಕಾರಿಯಾಗಿದ್ದ ಫೈನಲ್ ಪಂದ್ಯದಲ್ಲಿ ಕೂದಲೆಳೆ ಅಂತರದಲ್ಲಿ ಅವರಿಗೆ ಚಿನ್ನದ ಪದಕ ಕೈತಪ್ಪಿದೆ.  ಈ ಬಗ್ಗೆ ಡೆಕ್ಕನ್ ಹೆರಾಲ್ಡ್ ವರದಿಯನ್ನು ಮಾಡಿದೆ.

6ನೇ ಹಾಗೂ ಅಂತಿಮ ಸುತ್ತಿನ ಮುಕ್ತಾಯದ ವೇಳೆಗೆ ಐಶ್ವರ್ಯಾ ಮತ್ತು ರಷ್ಯಾದ ತಟಸ್ಥ ಅಥ್ಲೀಟ್ ಸೋಫಿಯಾ ಸ್ಮೆಟಾಂಕಿನಾ ಇಬ್ಬರೂ 540 ಅಂಕಗಳ ಸಮಾನ ಸ್ಕೋರ್ ಗಳಿಸಿ ಪ್ರಥಮ ಸ್ಥಾನ ಪಡೆದಿದ್ದರು. ಆದರೆ, ನಿಖರವಾಗಿ ಗುರಿ ಇಟ್ಟ ಹೊಡೆದಿರುವ ಲೆಕ್ಕಾಚಾರದಲ್ಲಿ ರಷ್ಯಾದ ಶೂಟರ್ 12 ಬಾರಿ ಗುರಿ ತಲುಪಿದ್ದರೆ, ಐಶ್ವರ್ಯಾ 11 ಬಾರಿ ಮಾತ್ರ ಯಶಸ್ವಿಯಾಗಿದ್ದರು. ಕೇವಲ ಒಂದು ಇನ್ನರ್-10 ಶಾಟ್ ಕೊರತೆಯಿಂದಾಗಿ ಐಶ್ವರ್ಯಾ ಅವರಿಗೆ ಬೆಳ್ಳಿ ಪದಕ ಒಲಿದರೆ, ರಷ್ಯಾದ ಸೋಫಿಯಾ ಚಿನ್ನದ ಪದಕ ಗೆದ್ದುಕೊಂಡರು. ಇದೇ ಸ್ಪರ್ಧೆಯಲ್ಲಿ ಮಂಗೋಲಿಯಾದ ಅರಿಯುಂಜಯ ಅಮರಬಯಾಸ್ಗಲನ್ ಕಂಚಿನ ಪದಕ ಪಡೆದಿದ್ದಾರೆ.

ಇದನ್ನೂ ಓದಿ: ಒಲಿಂಪಿಕ್ಸ್​ನಲ್ಲಿ ಚಿನ್ನ ಗೆಲ್ಲುವುದು ನನ್ನ ಗುರಿ; ಟಿವಿ9 ಜೊತೆ ಯುವ ಟೆನಿಸ್ ಆಟಗಾರ್ತಿ ಸೃಷ್ಟಿ ಕಿರಣ್ ಮಾತು

ಸ್ಪರ್ಧೆಯ ಆರಂಭದಿಂದಲೂ ಅತ್ಯಂತ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಐಶ್ವರ್ಯಾ, ಮೊದಲ ಸುತ್ತಿನಲ್ಲಿಯೇ 90 ಅಂಕ ಗಳಿಸಿ ಭರ್ಜರಿ ಆರಂಭ ಪಡೆದಿದ್ದರು. ನಂತರದ ಸುತ್ತುಗಳಲ್ಲೂ ಸತತವಾಗಿ 90ಕ್ಕೂ ಹೆಚ್ಚು ಸ್ಕೋರ್ ಕಾಯ್ದುಕೊಳ್ಳುವ ಮೂಲಕ 5ನೇ ಸುತ್ತಿನವರೆಗೂ ಅಗ್ರಸ್ಥಾನದಲ್ಲಿದ್ದರು. ಭಾರತದ ಇತರ ಶೂಟರ್‌ಗಳಾದ ಪಾರ್ಶಿನಾ ಗುಪ್ತಾ 4ನೇ, ಸಂಸ್ಕೃತಿ ಬಾನಾ 8ನೇ ಮತ್ತು ಸೇಜಲ್ ಕಾಂಬ್ಳೆ 13ನೇ ಸ್ಥಾನ ಪಡೆದರು. ಇನ್ನು ಈ ಜಾಗತಿಕ ಟೂರ್ನಿಯಲ್ಲಿ ಭಾರತ ತಂಡವು ಒಟ್ಟು 7 ಚಿನ್ನ, 8 ಬೆಳ್ಳಿ ಮತ್ತು 10 ಕಂಚು ಸೇರಿ ಒಟ್ಟು 25 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ಜಾಗತಿಕವಾಗಿ ಅಗ್ರಸ್ಥಾನ ಕಾಯ್ದುಕೊಂಡಿದೆ.

ಕಳೆದ ಫೆಬ್ರವರಿಯಷ್ಟೇ 18ನೇ ವಸಂತಕ್ಕೆ ಕಾಲಿಟ್ಟ ಐಶ್ವರ್ಯಾ ಅವರಿಗೆ ಶೂಟಿಂಗ್ ಕಲೆ ಹುಟ್ಟಿನಿಂದಲ್ಲೇ ಬಂದಿದೆ. ಅವರ ತಂದೆ ರವಿಚಂದ್ರ ಬಾಲೇಹೊಸೂರ್ ಅವರು ರಾಷ್ಟ್ರೀಯ ಮಟ್ಟದಲ್ಲಿ ‘ಸರ್ವಿಸಸ್’ ತಂಡವನ್ನು ಪ್ರತಿನಿಧಿಸಿದ್ದ ಖ್ಯಾತ ಶೂಟರ್ ಆಗಿದ್ದಾರೆ. ರವಿಚಂದ್ರ ಮತ್ತು ಅವರ ಸಹೋದರ ಶಿವಾನಂದ ಅವರು ಹುಬ್ಬಳ್ಳಿಯಲ್ಲಿ ನಡೆಸುತ್ತಿರುವ ಶೂಟಿಂಗ್ ಅಕಾಡೆಮಿಯಲ್ಲೇ ಐಶ್ವರ್ಯಾ ಕಠಿಣ ತರಬೇತಿ ಪಡೆದಿದ್ದಾರೆ.

ಈ ಹಿಂದೆ 2023ರಲ್ಲಿ ಕೇವಲ 15 ವರ್ಷದ ಪ್ರಾಯದಲ್ಲೇ ಭೋಪಾಲ್‌ನಲ್ಲಿ ನಡೆದ ಸೀನಿಯರ್ ನ್ಯಾಷನಲ್ಸ್‌ನ 50 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಚಿನ್ನ ಗೆದ್ದು ದೇಶದ ಗಮನ ಸೆಳೆದಿದ್ದ ಐಶ್ವರ್ಯಾ, ಈ ವರ್ಷ ದೆಹಲಿಯ ಡಾ. ಕರ್ಣಿ ಸಿಂಗ್ ಶೂಟಿಂಗ್ ರೇಂಜ್‌ನಲ್ಲಿ ನಡೆದ ರಾಷ್ಟ್ರೀಯ ಸೀನಿಯರ್ ಶೂಟಿಂಗ್‌ನಲ್ಲಿ ಕಂಚು ಗೆದ್ದು ಅಂತರರಾಷ್ಟ್ರೀಯ ಕ್ವಾಲಿಫಿಕೇಶನ್ ಪಡೆದಿದ್ದರು. ಹುಬ್ಬಳ್ಳಿಯ ಈ ಯುವತಿಯ ಜಾಗತಿಕ ಸಾಧನೆಗೆ ಇಡೀ ಕರ್ನಾಟಕದಾದ್ಯಂತ ಭಾರಿ ಶ್ಲಾಘನೆ ವ್ಯಕ್ತವಾಗುತ್ತಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ
‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ
ಮಾವಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವೇಗೌಡ ಪೂಜೆ
ಮಾವಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವೇಗೌಡ ಪೂಜೆ
ಮಹಾಲಯ ಅಮಾವಾಸ್ಯೆಯಂದೇ ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!
ಮಹಾಲಯ ಅಮಾವಾಸ್ಯೆಯಂದೇ ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!