AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಅಂಜಲಿ ಕೊಲೆ ಮಾಡಿ ಹಂತಕ ಪರಾರಿಯಾಗಿದ್ದೆಲ್ಲಿಗೆ? ಮಹತ್ವದ ಸುಳಿವು ಲಭ್ಯ

ನೇಹಾ ಮಾದರಿಯಲ್ಲಿ ‌ನಡೆದ ಅಂಜಲಿ‌ ಹತ್ಯಗೆ ವಾಣಿಜ್ಯ ನಗರಿ ಹುಬ್ಬಳ್ಳಿ ಬೆಚ್ಚಿ ಬಿದ್ದಿದೆ. ಪೊಲೀಸರ ನಿರ್ಲಕ್ಷ್ಯದಿಂದ ಅಂಜಲಿ ಕೊಲೆಯಾಗಿದೆ ಎನ್ನುವ ಗಂಭೀರ ಆರೋಪದ ನಡುವೆ, ಇವತ್ತು ಅಂಜಲಿ ‌ಕೊಲೆ ಖಂಡಿಸಿ ಬಿಜೆಪಿ ಬೀದಿಗಳಿದಿತ್ತು.ಕೊಲೆ ಖಂಡಿಸಿ ಬಿಜೆಪಿ ಪ್ರತಿಭಟನೆ ಮಾಡಿದ್ರೆ, ಇತ್ತ ಸ್ವಾಮೀಜಿಗಳು ಮೃತ ಅಂಜಲಿ ‌ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ‌ಹೇಳಿದರು. ಇನ್ನು ಈಗಾಗಲೇ ಹಂತಕನ ಹತ್ತೆಗೆ ಎರಡು ತಂಡಗಳನ್ನು ರಚಿಸಲಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. 

ಹುಬ್ಬಳ್ಳಿ: ಅಂಜಲಿ ಕೊಲೆ ಮಾಡಿ ಹಂತಕ ಪರಾರಿಯಾಗಿದ್ದೆಲ್ಲಿಗೆ? ಮಹತ್ವದ ಸುಳಿವು ಲಭ್ಯ
ಅಂಜಲಿ ಕೊಲೆ ಮಾಡಿ ಹಂತಕ ಪರಾರಿಯಾಗಿದ್ದೆಲ್ಲಿಗೆ
ಶಿವಕುಮಾರ್ ಪತ್ತಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: May 16, 2024 | 4:02 PM

Share

ಹುಬ್ಬಳ್ಳಿ, ಮೇ.16: ವಾಣಿಜ್ಯ ‌ನಗರಿ ಹುಬ್ಬಳ್ಳಿ(Hubli)ಯಲ್ಲಿ ನಿನ್ನೆ(ಮೇ.15) ಬೆಳಗಿನ‌ ಜಾವ ನೇಹಾ ಮಾದರಿಯಲ್ಲಿಯೇ ನಗರದ ವೀರಾಪೂರ ಓಣಿಯಲ್ಲಿ ಅಂಜಲಿ(Anjali) ಅಂಬಿಗೇರ ಎಂಬ ಯುವತಿ ಹತ್ಯೆಯಾಗಿತ್ತು. ಕೊಲೆ ಮಾಡಲು‌ ಹಂತಕ ವಿಶ್ವ ಅಲಿಯಾಸ್ ಗಿರೀಶ್ ಎಂಬಾತ ಆಟೋದಲ್ಲಿ ಬಂದು ಕೊಲೆ ಮಾಡಿ ಪರಾರಿಯಾಗಿದ್ದಾ‌ನೆ. ಹಂತಕ ಆಟೋದಲ್ಲಿ ಬಂದಿರೋ ದ್ರಶ್ಯಗಳ ಜೊತೆಗೆ ಕೊಲೆ ಬಳಿಕ ಆತ ಹೊಸ ಬಸ್ ನಿಲ್ದಾಣಕ್ಕೆ ತೆರಳಿದ ದೃಶ್ಯಗಳು ಕೂಡ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆರೋಪಿ ಶಿವಮೊಗ್ಗಕ್ಕೇ ತೆರಳಿದನಾ? ಎಂಬ ಅನುಮಾನ ವ್ಯಕ್ತವಾಗಿದೆ.

ಅಂಜಲಿ ಕೊಲೆ ಮಾಡಿದ ನಂತರ ಶಿವಮೊಗ್ಗಕ್ಕೇ ತೆರಳಿದನಾ ವಿಶ್ವ..?

ವೀರಾಪುರ ಓಣಿಯಲ್ಲಿ ಅಂಜಲಿಯನ್ನು ಕೊಲೆ ಮಾಡಲು ಆಟೋದಲ್ಲಿ ಬಂದಿದ್ದ ಆರೋಪಿ ವಿಶ್ವ, ಬೆಳಗಿನ ಜಾವ 5.30 ರ ಸುಮಾರಿಗೆ ಕೊಲೆ ಮಾಡಿದ ನಂತರ ಅಲ್ಲಿಂದ ಆಟೋವನ್ನ ಬಿಟ್ಟು ಭಯದಿಂದಲೇ ಗೋಕುಲ್ ರಸ್ತೆಯಲ್ಲಿನ ಹೊಸ ಬಸ್ ನಿಲ್ದಾಣಕ್ಕೆ ಓಡಿ ಹೋಗಿದ್ದ. ಅಲ್ಲಿ ವಿಶ್ವನಿಗೆ ಎಲ್ಲಿಗೆ ಹೋಗಬೇಕು ಎಂಬ ಅರಿವು ಇಲ್ಲದೇ ಬಸ್ ನಿಲ್ದಾಣದಲ್ಲಿಯೇ ಸುತ್ತಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನು ಶಿವಮೊಗ್ಗ ಬಸ್​ಗಳು ನಿಲ್ಲುವ ಜಾಗದಲ್ಲಿ ಈತ ಸುತ್ತಾಡುತ್ತಿದ್ದ. ಈ ಹಿನ್ನಲೆ ಶಿವಮೊಗ್ಗಕ್ಕೇ ತೆರಳಿರಬಹುದು ಎಂಬ ಮಾಹಿತಿಯನ್ನು ಆಧರಿಸಿ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ:ನೇಹಾ, ಅಂಜಲಿ ಕೊಲೆ ಆರೋಪಿಗಳನ್ನ ಎನ್ ಕೌಂಟರ್‌ ಮಾಡ್ಬೇಕು- ದಿಂಗಾಲೇಶ್ವರ ಸ್ವಾಮೀಜಿ

ಒಟ್ಟಾರೆ ಒಂದು ತಿಂಗಳ ಅವಧಿಯಲ್ಲಿ ‌ನಡೆದ ನೇಹಾ ಅಂಜಲಿ‌ ಕೊಲೆ ಸರ್ಕಾರಕ್ಕೆ ಮುಜುಗರ ತಂದಿಟ್ಟಿದ್ದಂತೂ ನಿಜ. ಸರ್ಕಾರದ ವಿರುದ್ದ ಬಿಜೆಪಿ ಬೀದಿಗಿಳಿದು ಹೋರಾಟ ಮಾಡುತ್ತಿದೆ. ಮೇಲ್ನೋಟಕ್ಕೆ ಪೊಲೀಸರ ನಿರ್ಲಕ್ಷ್ಯ ಕಂಡು‌ಬಂದಿರೋ ಕಾರಣ ಬೆಂಡಿಗೇರಿ ‌ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಿ.ಬಿ ಚಿಕ್ಕೋಡಿ ಹಾಗೂ ಮಹಿಳಾ ಪೇದೆಯನ್ನು ಅಮಾನತ್ತು‌ ಮಾಡಿದ್ದಾರೆ. ಆದ್ರೆ, ಕೊಲೆಯಾಗಿ 48 ಗಂಟೆ ಕಳೆದರೂ ಆರೋಪಿ ಬಂಧನವಾಗದೆ ಇರೋದು ಆಕ್ರೋಶಕ್ಕೆ ಗುರಿಯಾಗಿದೆ. ನಾಳೆ(ಮೇ.17) ಕೂಡ ಹುಬ್ಬಳ್ಳಿಯಲ್ಲಿ ಮಠಾಧೀಪತಿಗಳು ಹೋರಾಟ ಹಮ್ಮಿಕೊಂಡಿದ್ದು, ಅಂಜಲಿ‌ ಕೊಲೆ ಕೇಸ್ ಇನ್ಯಾವ ತಿರುವು ಪಡೆದುಕೊಳ್ಳತ್ತದೆ ಎಂದು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ