ಹುಬ್ಬಳ್ಳಿ ಸಿಲಿಂಡರ್ ಸ್ಫೋಟ: ಪವಾಡ ಸದೃಶ ರೀತಿಯಲ್ಲಿ ಬದುಕುಳಿದ ವಿನಾಯಕ್ ಬಾರಕೇರ

ಹುಬ್ಬಳ್ಳಿಯ ಅಚ್ಚವ್ವ ಕಾಲೋನಿಯಲ್ಲಿ ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ 12 ವರ್ಷದ ಬಾಲಕ ವಿನಾಯಕ ಭಾರಕೇರ ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿದ್ದಾನೆ. ಘಟನೆಯಲ್ಲಿ ಗಾಯಗೊಂಡಿದ್ದ 8 ಮಂದಿ ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದು, ಇದೀಗ ಒಬ್ಬನೇ ಒಬ್ಬ ಉಳಿದಂತಾಗಿದೆ.ಇಂದು ಅಥವಾ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ನಿರೀಕ್ಷೆ ಇದೆ.

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ: ಪವಾಡ ಸದೃಶ ರೀತಿಯಲ್ಲಿ ಬದುಕುಳಿದ ವಿನಾಯಕ್ ಬಾರಕೇರ
ವಿನಾಯಕ್ ಬಾರಕೇರ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: Ganapathi Sharma

Updated on: Jan 01, 2025 | 12:52 PM

ಹುಬ್ಬಳ್ಳಿ, ಜನವರಿ 1: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟ ದುರ್ಘಟನೆಯಲ್ಲಿ ಈವರೆಗೆ 8 ಜನ ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದು, ಒಬ್ಬ ಮಾಲಾಧಾರಿ ಮಾತ್ರ ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿದ್ದಾರೆ. ಮಾಲಾಧಾರಿ ವಿನಾಯಕ್ ಬಾರಕೇರ ಬಹುತೇಕ ಚೇತರಿಸಿಕೊಂಡಿದ್ದು, ಇಂದು ಅಥವಾ ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾಗುವ ನಿರೀಕ್ಷೆ ಇದೆ.

12 ವರ್ಷದ ವಿನಾಯಕ್ ಆರೋಗ್ಯದ ಬಗ್ಗೆ ತಜ್ಞರಿಂದ ಮಾಹಿತಿ ಪಡೆದು ಡಿಸ್ಚಾರ್ಜ್​ ಮಾಡಲಾಗುವುದು ಎಂದು ‘ಟಿವಿ9’ಗೆ ಕಿಮ್ಸ್ ನಿರ್ದೇಶಕ ಡಾ. ಎಸ್​ಎಫ್ ಕಮ್ಮಾರ ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 22 ರಂದು ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಯಲ್ಲಿ ಸಿಲಿಂಡರ್ ಸ್ಪೋಟವಾಗಿತ್ತು. ಘಟನೆಯಲ್ಲಿ 9 ಜನ ಮಾಲಾಧಾರಿಗಳು ಗಂಭೀರ ಗಾಯಗೊಂಡಿದ್ದರು. 9 ಜನರ ಪೈಕಿ ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ, ಲಿಂಗರಾಜ ಬೀರನೂರ, ಮಂಜು ವಾಗ್ಮೋಡೆ, ರಾಜು ಮೂಗೇರಿ, ತೇಜಸ್ವರ್ ಸುತಾರೆ, ಶಂಕರ್ ಊರ್ಬಿ, ಪ್ರಕಾಶ್ ಬಾರಕೇರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

12 ವರ್ಷ ವಯಸ್ಸಿನ ವಿನಾಯಕ್ ಬಾರಕೇರ ಮಾತ್ರ ಗುಣಮುಖನಾಗಿದ್ದು, ಈತನ ತಂದೆ ಪ್ರಕಾಶ್ ಬಾರಕೇರ ಮಂಗಳವಾರ ನಸುಕಿನಲ್ಲಿ ಕೊನೆಯುಸಿರೆಳೆದಿದ್ದರು. ವಿನಾಯಕ್​ಗೆ ಶೇಕಡಾ 25 ರಷ್ಟು ಸುಟ್ಟ ಗಾಯಗಳಾಗಿದ್ದವು.

ಸಿಲಿಂಡರ್ ಸ್ಫೋಟ ಸಂಭವಿಸಿದಾಗ ಮೊದಲು ಮಗನನ್ನು ಕರೆದುಕೊಂಡು ಹೊರಗೇ ಬಂದಿದ್ದೇ ಪ್ರಕಾಶ್ ಬಾರಕೇರ ಆಗಿದ್ದರು. ಸುಟ್ಡ ಗಾಯಗಳಿಂದ ನರಳಾಡುತ್ತಿದ್ದರೂ ಮಗನನ್ನು ಕಾಪಾಡಲು ಓಡೋಡಿ ಬಂದಿದ್ದರು.

ಇದನ್ನೂ ಓದಿ: ಹುಬ್ಬಳ್ಳಿ: ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು, 8ಕ್ಕೇರಿದ ಸಾವಿನ ಸಂಖ್ಯೆ

ಸೋಮವಾರ ರಾತ್ರಿಯಷ್ಟೇ ಅಯ್ಯಪ್ಪ ಮಾಲಾಧಾರಿ ತೇಜಸ್ವರ್ (27)​​ ಮೃತಪಟ್ಟಿದ್ದರು. ಅದರ ಬೆನ್ನಲ್ಲೇ, ಮಂಗಳವಾರ ಬೆಳಗ್ಗೆ ಪ್ರಕಾಶ್ ಬಾರಕೇರ ಕೂಡ ಸಾವನ್ನಪ್ಪಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ