ಹುಬ್ಬಳ್ಳಿ: ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು, 8ಕ್ಕೇರಿದ ಸಾವಿನ ಸಂಖ್ಯೆ

ಹುಬ್ಬಳ್ಳಿಯಲ್ಲಿ ಕೆಲವು ದಿನಗಳ ಹಿಂದೆ ಸಂಭವಿಸಿದ ಭೀಕರ ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆ ಸೇರಿದ 9 ಮಂದಿ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಆರು ಮಂದಿ ಈಗಾಗಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಗಾಯಾಳುಸೋಮವಾರ ರಾತ್ರಿ ಮೃತಪಟ್ಟಿದ್ದು, ಇನ್ನೊಬ್ಬರು ಮಂಗಳವಾರ ನಸುಕಿನಲ್ಲಿ ಅಸುನೀಗಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.

ಹುಬ್ಬಳ್ಳಿ: ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು, 8ಕ್ಕೇರಿದ ಸಾವಿನ ಸಂಖ್ಯೆ
ಪ್ರಕಾಶ ಬಾರಕೇರ ಮೃತಪಟ್ಟಿದ್ದು ಅವರ ಮಗನಿಗೆ ಚಿಕಿತ್ಸೆ ಮುಂದುವರಿದಿದೆ.
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: Ganapathi Sharma

Updated on:Dec 31, 2024 | 8:26 AM

ಹುಬ್ಬಳ್ಳಿ, ಡಿಸೆಂಬರ್ 31: ಹುಬ್ಬಳ್ಳಿ, ಡಿಸೆಂಬರ್ 31: ಹುಬ್ಬಳ್ಳಿಯಲ್ಲಿ ಅಗ್ನಿ ಅವಘಡದಿಂದ ಗಂಭೀರ ಗಾಯಗೊಂಡಿದ್ದ ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಪ್ರಕಾಶ ಬಾರಕೇರ (42) ಕಿಮ್ಸ್​​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮೃತ ಪ್ರಕಾಶ ಬಾರಕೇರ, ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದಾರೆ.

ಸೋಮವಾರ ರಾತ್ರಿಯಷ್ಟೇ ಅಯ್ಯಪ್ಪ ಮಾಲಾಧಾರಿ ತೇಜಸ್ವರ್ (27)​​ ಮೃತಪಟ್ಟಿದ್ದರು. ಇದೀಗ 9 ಗಾಯಾಳುಗಳ ಪೈಕಿ 8 ಅಯ್ಯಪ್ಪ ಮಾಲಾಧಾರಿಗಳ ಸಾವಾಗಿದ್ದು, ಕಿಮ್ಸ್​​ನಲ್ಲಿ ಓರ್ವ ಗಾಯಾಳು ಮಾಲಾಧಾರಿಗೆ ಚಿಕಿತ್ಸೆ ಮುಂದುವರಿದಿದೆ.

ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪನ ಸನ್ನಿಧಿಯಲ್ಲಿ ಸಂಭವಿಸಿದ್ದ ಭೀಕರ ಸಿಲಿಂಡರ್ ಸ್ಫೋಟ ಎಲ್ಲರನ್ನೂ ಬೆಚ್ಚಿಬೀಳಿಸಿತ್ತು. 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಬೆಂಕಿಯಲ್ಲಿ ಬೆಂದು ಕಿಮ್ಸ್​ ಆಸ್ಪತ್ರೆ ಸೇರಿದ್ದರು. ತಜ್ಞ ವೈದ್ಯರಿಂದ ಚಿಕಿತ್ಸೆ ಕೊಡಿಸಿದರೂ ಗಾಯಾಳುಗಳನ್ನು ಉಳಿಸಿಕೊಳ್ಳಲು ಆಗುತ್ತಿಲ್ಲ. ಸಾವಿನ ಸರಣಿ ಮುಂದುವರಿದಿದ್ದು ಸೋಮವಾರ ರಾತ್ರಿ ರಾಮನಗರ ನಿವಾಸಿ 26 ವರ್ಷದ ತೇಜಸ್ವರ್ ಸಾತರೆ ಉಸಿರು ಚೆಲ್ಲಿದ್ದಾರೆ. ಮೃತ ತೇಸಜ್ವರ್ 3 ವರ್ಷದಿಂದ ಅಯ್ಯಪ್ಪ ಸ್ವಾಮಿ ಮಾಲೆ ಹಾಕುತ್ತಿದ್ದರು ಎನ್ನಲಾಗಿದೆ. ಅಯ್ಯಪ್ಪನ ಆಶೀರ್ವಾದದಿಂದ ಮಗ ಬದುಕಿ ಬರಬಹುದು ಎಂದುಕೊಂಡಿದ್ದ ಕುಟುಂಬಕ್ಕೆ ಸಾವಿನ ಸುದ್ದಿಯಿಂದ ಆಕಾಶಾವೇ ತಲೆ ಮೇಲೆ ಕಳಚಿ ಬಿದ್ದಂತಾಗಿದೆ.

ಡಿಸೆಂಬರ್ 22 ರಿಂದ ಕಿಮ್ಸ್ ಆಸ್ಪತ್ರೆಯಲ್ಲಿ ತೇಜಸ್ವರ್​ಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಕಿಮ್ಸ್ ಆಸ್ಪತ್ರೆಬಳಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್​ ಸ್ಫೋಟ: ಚಿಕಿತ್ಸೆ ಫಲಿಸದೆ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು

ಗಂಭೀರವಾಗಿ ಗಾಯಗೊಂಡಿರುವ 9 ಜನ ಮಾಲಾಧಾರಿಗಳ ಪೈಕಿ ಇದೀಗ ಒಬ್ಬ ಗಾಯಾಳು ಮಾತ್ರ ಬದುಕುಳಿದಿದ್ದಾರೆ. ಅವರಿಗೆ ಚಿಕಿತ್ಸೆ ಮುಂದುವರಿದಿದೆ.

ಬೆಂಕಿಯಲ್ಲಿ ಬೆಂದ ಮಾಲಾಧಾರಿಗಳು ದಿನಕ್ಕೊಬ್ಬರಂತೆ ಪ್ರಾಣ ಬಿಡುತ್ತಿದ್ದು, ಇದೀಗ 8 ಕುಟುಂಬಗಳು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:15 am, Tue, 31 December 24

ಸತೀಶ್ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಮೀಟಿಂಗ್: ಸಿಎಂ ಸೇರಿ ಹಲವರು ಭಾಗಿ
ಸತೀಶ್ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಮೀಟಿಂಗ್: ಸಿಎಂ ಸೇರಿ ಹಲವರು ಭಾಗಿ
ತೇಜಸ್ವಿ ಸೂರ್ಯ ಕೈ ಹಿಡಿಯಲಿರುವ ಹುಡುಗಿಯ ಸುಮಧುರ ಕಂಠದಲ್ಲಿ ರಾಮನ ಗೀತೆ
ತೇಜಸ್ವಿ ಸೂರ್ಯ ಕೈ ಹಿಡಿಯಲಿರುವ ಹುಡುಗಿಯ ಸುಮಧುರ ಕಂಠದಲ್ಲಿ ರಾಮನ ಗೀತೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು