Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ದುರಂತ: ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು

ಹುಬ್ಬಳ್ಳಿ ಗ್ಯಾಸ್ ಸಿಲಿಂಡರ್ ಸ್ಫೋಟ ದುರಂತ ಇಬ್ಬರ ಜೀವ ಬಲಿ ಪಡೆದಿದೆ. ಉಣಕಲ್‌ನ ದುರಂತದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಏಳು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಬೆಂಗಳೂರಿನಿಂದ ತಜ್ಞ ವೈದ್ಯರನ್ನು ಕರೆಸಲಾಗಿದೆ. ಸಚಿವ ಸಂತೋಷ್ ಲಾಡ್ ಹೆಚ್ಚಿನ ಚಿಕಿತ್ಸಾ ವ್ಯವಸ್ಥೆ ಬಗ್ಗೆ ಮುತುವರ್ಜಿ ವಹಿಸಿದ್ದಾರೆ.

ಹುಬ್ಬಳ್ಳಿ ದುರಂತ: ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು
ನಿಜಲಿಂಗಪ್ಪ ಬೇಪುರಿ, ಸಂಜಯ್​​ ಸವದತ್ತಿ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: Ganapathi Sharma

Updated on: Dec 26, 2024 | 7:36 AM

ಹುಬ್ಬಳ್ಳಿ, ಡಿಸೆಂಬರ್ 26: ಹುಬ್ಬಳ್ಳಿಯ ಉಣಕಲ್‌ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ 9 ಮಂದಿ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ನಿಜಲಿಂಗಪ್ಪ ಬೇಪುರಿ (58), ಸಂಜಯ್​​ ಸವದತ್ತಿ (18) ಮೃತಪಟ್ಟ ಮಾಲಾಧಾರಿಗಳು. ಇವರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇನ್ನುಳಿದ 7 ಮಂದಿ ಅಯ್ಯಪ್ಪ ಮಾಲಾಧಾರಿಗಳಿಗೆ ಚಿಕಿತ್ಸೆ ಮುಂದುವರಿದಿದೆ. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಅಯ್ಯಪ್ಪ ಮಾಲಾಧಾರಿಗಳಿಗೆ ಕಿಮ್ಸ್ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. ಈ ನಡುವೆ, ಹೆಚ್ಚಿನ ಚಿಕಿತ್ಸೆ ಕೂಡಿಸಲು ಸಚಿವ ಸಂತೋಷ್ ಲಾಡ್ ಸಾಕಷ್ಟು ಮುತುವರ್ಜಿ ವಹಿಸಿದ್ದಾರೆ.

ಹುಬ್ಬಳ್ಳಿ ದುರಂತದ ಹಿನ್ನೆಲೆ

ಡಿಸೆಂಬರ್ 22ರ ರಾತ್ರಿ ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟಗೊಂಡಿತ್ತು. ಅಯ್ಯಪ್ಪ ಮಾಲಾಧಾರಿಗಳು ದೇಗುಲದಲ್ಲಿ ರಾತ್ರಿ ಮಲಗಿದ್ದಾಗ ಸಿಲಿಂಡರ್​ ಸ್ಫೋಟಗೊಂಡಿತ್ತು. ಗ್ಯಾಸ್​ ಸೋರಿಕೆಯಾಗಿದ್ದು, ದೀಪದ ಬೆಂಕಿ ತಗುಲಿ ಸ್ಫೋಟಗೊಂಡಿತ್ತು. ಈ ವೇಳೆ 9 ಮಂದಿ ಗಂಭೀರ ಗಾಯಗೊಂಡಿದ್ದರು. ಅವರನ್ನೆಲ್ಲ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬೆಂಗಳೂರಿನಿಂದ ತಜ್ಞ ವೈದ್ಯರ ಆಗಮನ: ಮುಂದುವರಿದ ಚಿಕಿತ್ಸೆ

ಸಚಿವ ಸಂತೋಷ್ ಲಾಡ್ ಬೆಂಗಳೂರಿನಿಂದ ತಜ್ಞ ವೈದ್ಯರನ್ನು ಕರೆಸಿಕೊಂಡು ಚಿಕಿತ್ಸೆ ಕೊಡಿಸುವ ಕೆಲಸ ಮಾಡಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಿಂದ ಆಗಮಿಸಿದ ಇಬ್ಬರು ನುರಿತ ಪ್ಲಾಸ್ಟಿಕ್ ಸರ್ಜರಿ ವೈದ್ಯರು, ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಪರಿಶೀಲನೆ ಮಾಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ನುರಿತ ಪ್ಲಾಸ್ಟಿಕ್ ಸರ್ಜನ್ ಡಾ. ಕೆಟಿ ರಮೇಶ್ ಮತ್ತು ಡಾ. ಎಂ ಶಂಕ್ರಪ್ಪ ಭೇಟಿ ನೀಡಿ ಗಾಯಾಳುಗಳ ಪ್ರಸ್ತುತ ಆರೋಗ್ಯ ಸ್ಥಿತಿ ಮತ್ತು ಕಿಮ್ಸ್ ವೈದ್ಯರು ಕೊಡುತ್ತಿರುವ ಚಿಕಿತ್ಸೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ರೋಗಿಗಳ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡ ವೈದ್ಯರು, ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಸದ್ಯದ ಚಿಕಿತ್ಸೆಯ ಮಾಹಿತಿ ಪಡೆದುಕೊಳ್ಳುವುದರ ಜೊತೆಗೆ, ಮುಂದಿನ ಹಂತದ ಕುರಿತು ಸಲಹೆಗಳನ್ನು ನೀಡಿ, ಗಾಯಾಳುಗಳು ಕುಟುಂಬಸ್ಥರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಘೋರ ದುರಂತ: ಸಿಲಿಂಡರ್ ಸ್ಪೋಟಗೊಂಡು 9 ಜನ ಅಯ್ಯಪ್ಪ ಮಾಲಾಧಾರಿಗಳಿಗೆ ಗಂಭೀರ ಗಾಯ

ಗಾಯಗೊಂಡ ಅಯ್ಯಪ್ಪ ಮಾಲಾಧಿಗಾರಿಗಳ ಜೀವ ಉಳಿಸಲು ಕಿಮ್ಸ್ ವೈದ್ಯರು ಎಲ್ಲಿಲ್ಲದ ಪ್ರಯತ್ನ ನಡೆಸಿದ್ದಾರೆ. ಆದಾಗ್ಯೂ ಗಾಯಾಳುಗಳ ಪರಿಸ್ಥಿತಿ ಗಂಭೀರವಾಗಿದೆ ಎಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜನ್ ಡಾ.ಸ್ಮಿತಾ ತಿಳಿಸಿದ್ದಾರೆ.

ಇಷ್ಟೆಲ್ಲ ಪ್ರಯತ್ನಗಳ ಹೊರತಾಗಿಯೂ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಇಹಲೋಕ ತ್ಯಜಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್